Ind vs WI: 2ನೇ ಟೆಸ್ಟ್ ಪಂದ್ಯಕ್ಕೆ ಈ 2 ಪ್ರಮುಖ ಬದಲಾವಣೆಯೊಂದಿಗೆ ಕಣಕ್ಕಿಳಿಯಲಿದೆಯಾ ಭಾರತ?
ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯ ಗುರುವಾರದಿಂದ ಆರಂಭವಾಗಲಿದೆ. ಮೊದಲ ಪಂದ್ಯವನ್ನು ಟೀಮ್ ಇಂಡಿಯಾ ಭರ್ಜರಿಯಾಗಿ ಗೆದ್ದಿದ್ದು ಎರಡನೇ ಪಂದ್ಯದಲ್ಲಿಯೂ ಅಂಥಾದ್ದೇ ಪ್ರದರ್ಶನದ ನಿರೀಕ್ಷೆಯಲ್ಲಿದೆ. ಟ್ರಿನಿಡಾಡ್‌ನ ಪೋರ್ಟ್ ಆಫ್ ಸ್ಪೇನ್‌ನಲ್ಲಿರುವ ಕ್ವೀನ್ಸ್ ಪಾರ್ಕ್ ಓವಲ್‌ನ್ಲಲಿ ಈ ಪಂದ್ಯ ನಡೆಯಲಿದ್ದು ಭಾರತ ತಂಡ ಒಂದೆರಡು ಪ್ರಮುಖ ಬದಲಾವಣೆ ಮಾಡಿಕೊಂಡು ಕಣಕ್ಕಿಳಿಯುವ ನಿರೀಕ್ಷೆಯಿದೆ.
ಪೋರ್ಟ್ ಆಫ್ ಸ್ಪೇನ್‌ನಲ್ಲಿ ನಡೆಯಲಿರುವ ಈ ಪಂದ್ಯ ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಿನ 100ನೇ ಟೆಸ್ಟ್ ಮುಖಾಮುಖಿಯ ಪಂದ್ಯವಾಗಿರಲಿದೆ. ಈ ಐತಿಹಾಸಿಕ ಪಂದ್ಯವನ್ನು ಗೆಲುವು ಸಾಧಿಸಲು ಎರಡು ತಂಡಗಳು ಕೂಡ ಸರ್ವ ಪ್ರಯತ್ನ ನಡೆಸಲಿದೆ. ಟೀಮ್ ಇಂಡಿಯಾ ಇಲ್ಲಿ ಎರಡು ಬದಲಾವಣೆ ಮಾಡುವ ಸಾಧ್ಯತೆಯಿದ್ದು ಕುತೂಹಲ ಮೂಡಿಸಿದೆ.

ಅಕ್ಷರ್ ಪಟೇಲ್, ನವ್‌ದೀಪ್ ಸೈನಿಗೆ ಸಿಗುತ್ತಾ ಅವಕಾಶ
ಟೀಮ್ ಇಂಡಿಯಾ ಈ ಎರಡನೇ ಪಂದ್ಯದಲ್ಲಿ ಎರಡು ಬದಲಾವಣೆ ಮಾಡುವ ಸಾಧ್ಯತೆಯಿದೆ. ರವೀಂದ್ರ ಜಡೇಜಾ ಬದಲಿಗೆ ಅಕ್ಷರ್ ಪಟೇಲ್ ಮತ್ತು ಜಯ್‌ದೇವ್ ಉನಾದ್ಕಟ್ ಬದಲಿಗೆ ನವ್‌ದೀಪ್ ಸೈನಿ ಆಡುವ ಬಳಗದಲ್ಲಿ ಸ್ಥಾನ ಪಡೆಯಿವ ಸಾಧ್ಯತೆಯಿದೆ. ಹೆಚ್ಚಿನ ಅಟಗಾರರಿಗೆ ಅವಕಾಶ ನೀಡುವ ದೃಷ್ಟಿಯಿಂದ ಟೀಮ್ ಇಂಡಿಯಾ ಊ ಬದಲಾವಣೆ ಮಾಡುವ ಸಾಧ್ಯತೆಯಿದೆ.
ಅಕ್ಷರ್ ಪಟೇಲ್ ಅವರಂತಾ ಆಟಗಾರರಿಗೆ ವಿದೇಶಿ ನೆಲದಲ್ಲಿಯೂ ಅವಕಾಶ ಪಡೆಯಬೇಕಿರುವ ಕಾರಣ ಈ ಬದಲಾವಣೆ ಅಗತ್ಯವಾಗಿದೆ. ಭವಿಷ್ಯದ ಪ್ರಮುಖ ಸ್ಪಿನ್ ಬೌಲಿಂಗ್ ಆಯ್ಕೆ ಎನಿಸಿಕೊಂಡಿರುವ ಅಕ್ಷರ್ ಪಟೇಲ್ ಇಂಥಾ ವಾತಾವರಣದಲ್ಲಿ ಆಡುವ ಅವಕಾಶ ಪಡೆಯುವುದು ಕೂಡ ಅಗತ್ಯವಾಗಿದೆ. ಬ್ಯಾಟಿಂಗ್‌ನಲ್ಲಿಯೂ ಅಕ್ಷರ್ ಅದ್ಭುತ ಕೊಡುಗೆ ನೀಡಬಲ್ಲ ಸಾಮರ್ಥ್ಯ ಹೊಂದಿರುವ ಕಾರಣ ಅಶ್ವಿನ್ ಹಾಗೂ ಜಡೇಜಾ ಇಬ್ಬರನ್ನು ಕೂಡ ಸಮರ್ಥವಾಗಿ ಬದಲಿ ಆಟಗಾರನಾಗಿ ಸ್ಥಾನ ತುಂಬುವ ಭರವಸೆ ಮೂಡಿಸಿದ್ದಾರೆ.
ಬ್ಯಾಟಿಂಗ್ ವಿಭಾಗದಲ್ಲಿ ಬದಲಾವಣೆ ಸಾಧ್ಯತೆಯಿಲ್ಲ
ಇನ್ನು ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್ ವಿಭಾಗದಲ್ಲಿ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಯಶಸ್ವಿ ಜೈಸ್ವಾಲ್ ಆರಂಭಿಕನಾಗಿ ಅದ್ಭುತ ಯಶಸ್ಸು ಸಾಧಿಸಿದ್ದು ರೋಹಿತ್ ಶರ್ಮಾ ಜೊತೆಗೆ ಮುಂದಿನ ಪಂದ್ಯದಲ್ಲಿಯೂ ಆರಂಭಿಕನಾಗಿ ಕಣಕ್ಕಿಳಿಯುವುದರಲ್ಲಿ ಅನುಮಾನವಿಲ್ಲ. ಶುಬ್ಮನ್ ಗಿಲ್ ಮೂರನೇ ಕ್ರಮಾಂಖದಲ್ಲಿಯೂ ಮುಂದುವರಿಯಲಿದ್ದಾರೆ. ಇನ್ನು ವಿಕೆಟ್ ಕೀಪರ್ ಬ್ಯಾಟರ್ ಆಗಿ ಇಶಾನ್ ಕಿಶನ್ ಮತ್ತೊಂದು ಪಂದ್ಯವನ್ನು ಆಡುವುದು ನಿಶ್ಚಿತ.
ವೆಸ್ಟ್ ಇಂಡೀಸ್ ಸ್ಕ್ವಾಡ್: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಜೆರ್ಮೈನ್ ಬ್ಲ್ಯಾಕ್‌ವುಡ್, ಅಲಿಕ್ ಅಥಾನಾಜೆ, ಟಾಗೆನರೈನ್ ಚಂದ್ರಪಾಲ್, ರಹಕೀಮ್ ಕಾರ್ನ್‌ವಾಲ್, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಶಾನನ್ ಗೇಬ್ರಿಯಲ್, ಜೇಸನ್ ಹೋಲ್ಡರ್, ಅಲ್ಜಾರಿ ಜೋಸೆಫ್, ಕಿರ್ಕ್ ಮೆಕೆಂಜಿ, ರೇಮನ್ ರೈಫರ್, ಕೆಮರ್ ರೋಚ್, ಜೋಮೆಲ್ ವಾರಿಕನ್
ಟೀಮ್ ಇಂಡಿಯಾ ಸ್ಕ್ವಾಡ್: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶ್ರೀಕರ್ ಭರತ್, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಜಯದೇವ್ ಉನದ್ಕತ್, ನವದೀಪ್ ಸೈನಿ, ಮುಖೇಶ್ ಕುಮಾರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications