IND vs WI 2nd Test: ಭಾರತ vs ವೆಸ್ಟ್ ಇಂಡೀಸ್ ಟಾಸ್ ವರದಿ, ಆಡುವ 11ರ ಬಳಗ & ಲೈವ್ ಸ್ಕೋರ್
ಗುರುವಾರ, ಜುಲೈ 20ರಂದು ಟ್ರಿನಿಡಾಡ್‌ನ ಪೋರ್ಟ್ ಆಫ್ ಸ್ಪೇನ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ನಡೆಯುತ್ತಿರುವ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಿವೆ.
ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡದ ನಾಯಕ ಕ್ರೈಗ್ ಬ್ರಾಥ್‌ವೈಟ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.
ಉಭಯ ತಂಡಗಳು ತಮ್ಮ 100ನೇ ಟೆಸ್ಟ್ ಪಂದ್ಯವನ್ನು ಪರಸ್ಪರ ಆಡುತ್ತಿದ್ದು, ಭಾರತ ಮತ್ತು ವೆಸ್ಟ್ ಇಂಡೀಸ್ ಕ್ರಿಕೆಟ್ ಪೈಪೋಟಿ ಎರಡು ಶತಮಾನಗಳಿಗೆ ವ್ಯಾಪಿಸಿದೆ.

ಇತ್ತೀಚಿಗೆ ಭಾರತ ತಂಡವು ಕ್ರಿಕೆಟ್ ಸೂಪರ್ ಪವರ್ ಆಗಿ ಬೆಳೆದಿದೆ. ಆದರೆ ವೆಸ್ಟ್ ಇಂಡೀಸ್ ತಂಡ 70 ಮತ್ತು 80ರ ದಶಕಗಳಲ್ಲಿ ಬಲಿಷ್ಠವಾಗಿತ್ತು ಮತ್ತು ವೈಭವದಿಂದ ಕೂಡಿತ್ತು. ಕೆಲವು ವರ್ಷಗಳಿಂದ ಕೆರಿಬಿಯನ್ ಪಡೆ ಹಳೆಯ ಮೊನಚು ಕಳೆದುಕೊಂಡಿದೆ.
ಉಭಯ ತಂಡಗಳು ಡೊಮಿನಿಕಾದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯ ಸೇರಿದಂತೆ ಒಟ್ಟು 99 ಟೆಸ್ಟ್ ಪಂದ್ಯಗಳನ್ನು ಆಡಿವೆ. ಈ ಪೈಕಿ ಭಾರತ 23 ಟೆಸ್ಟ್‌ಗಳನ್ನು ಗೆದ್ದಿದ್ದರೆ, ವೆಸ್ಟ್ ಇಂಡೀಸ್ 30 ಪಂದ್ಯಗಳನ್ನು ಗೆದ್ದಿದೆ.

ಇದೇ ವೇಳೆ ಎರಡನೇ ಪಂದ್ಯದಲ್ಲಿ ಯುವ ವೇಗಿ ಮುಖೇಶ್ ಕುಮಾರ್ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.
2ನೇ ಟೆಸ್ಟ್ ಪಂದ್ಯ: ಭಾರತ vs ವೆಸ್ಟ್ ಇಂಡೀಸ್ ಆಡುವ 11ರ ಬಳಗ
ವೆಸ್ಟ್ ಇಂಡೀಸ್: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಟಾಗೆನರಿನ್ ಚಂದ್ರಪಾಲ್, ಕಿರ್ಕ್ ಮೆಕೆಂಜಿ, ಅಲಿಕ್ ಅಥಾನಾಜೆ, ಜೆರ್ಮೈನ್ ಬ್ಲಾಕ್‌ವುಡ್, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಜೇಸನ್ ಹೋಲ್ಡರ್, ಅಲ್ಜಾರಿ ಜೋಸೆಫ್, ಕೆಮರ್ ರೋಚ್, ಶಾನ್ನೋನ್ ಗೇಬ್ರಿಯಲ್, ಜೊಮೆಲ್ ವಾರಿಕಾನ್.
ಭಾರತ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಮುಖೇಶ್ ಕುಮಾರ್, ಜಯದೇವ್ ಉನಾದ್ಕಟ್, ಮೊಹಮ್ಮದ್ ಸಿರಾಜ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications