Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs WI 2nd Test: ರೋಹಿತ್, ಯಶಸ್ವಿ ಜೈಸ್ವಾಲ್ ಅರ್ಧಶತಕ; ಬೃಹತ್ ಮೊತ್ತದತ್ತ ಭಾರತ

ಗುರುವಾರ, ಜುಲೈ 20ರಂದು ಟ್ರಿನಿಡಾಡ್‌ನ ಪೋರ್ಟ್ ಆಫ್ ಸ್ಪೇನ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ನಡೆಯುತ್ತಿರುವ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಸೆಣಸಾಡುತ್ತಿವೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ ತಂಡ ಅತ್ಯುತ್ತಮ ಆರಂಭ ಪಡೆದುಕೊಂಡಿದೆ. ಮೊದಲ ಪಂದ್ಯದಂತೆಯೇ ಇಲ್ಲಿಯೂ ಭಾರತದ ಆರಂಭಿಕ ಜೋಡಿ ಭದ್ರ ಬುನಾದಿ ಹಾಕಿತು.

ಇನ್ನು ರೋಹಿತ್ ಶರ್ಮಾ 143 ಎಸೆತಗಳಲ್ಲಿ 9 ಬೌಂಡರಿ ಮತ್ತು 2 ಸಿಕ್ಸರ್ ನೆರವವಿನಿಂದ 80 ರನ್ ಬಾರಿಸಿ ಜೊಮೆಲ್ ವಾರಿಕನ್ ಬೌಲಿಂಗ್‌ನಲ್ಲಿ ಔಟಾದರು. ಎರಡನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದಿದ್ದ ಶುಭ್ಮನ್ ಗಿಲ್ 10 ರನ್ ಗಳಿಸಿ ಪೆವಿಲಿಯನ್ ಸೇರಿದರು. ಸದ್ಯ ವಿರಾಟ್ ಕೊಹ್ಲಿ ಮತ್ತು ಅಜಿಂಕ್ಯ ರಹಾನೆ ಕ್ರೀಸ್‌ನಲ್ಲಿದ್ದಾರೆ.

IND vs WI 2nd Test

ಇನ್ನು ರೋಹಿತ್ ಶರ್ಮಾ 126 ಎಸೆತಗಳಲ್ಲಿ 9 ಬೌಂಡರಿ ಮತ್ತು 2 ಸಿಕ್ಸರ್ ನೆರವವಿನಿಂದ 78 ರನ್ ಬಾರಿಸಿ ಕ್ರೀಸ್‌ನಲ್ಲಿದ್ದರೆ, ಎರಡನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದ ಶುಭ್ಮನ್ ಗಿಲ್ ಆಡುತ್ತಿದ್ದಾರೆ.

ಶಾರ್ದೂಲ್ ಠಾಕೂರ್ ಬದಲಿಗೆ ಮುಖೇಶ್ ಕುಮಾರ್ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದಾರೆ. ಪೋರ್ಟ್ ಆಫ್ ಸ್ಪೇನ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಉಭಯ ತಂಡಗಳ ನಡುವಿನ 100ನೇ ಟೆಸ್ಟ್ ಆಗಿರುವುದರಿಂದ ಇದು ಐತಿಹಾಸಿಕ ಪಂದ್ಯವಾಗಿದೆ.

ಉಭಯ ತಂಡಗಳು ಡೊಮಿನಿಕಾದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯ ಸೇರಿದಂತೆ ಒಟ್ಟು 99 ಟೆಸ್ಟ್ ಪಂದ್ಯಗಳನ್ನು ಆಡಿವೆ. ಈ ಪೈಕಿ ಭಾರತ 23 ಟೆಸ್ಟ್‌ಗಳನ್ನು ಗೆದ್ದಿದ್ದರೆ, ವೆಸ್ಟ್ ಇಂಡೀಸ್ 30 ಪಂದ್ಯಗಳನ್ನು ಗೆದ್ದಿದೆ.

2ನೇ ಟೆಸ್ಟ್ ಪಂದ್ಯ: ಭಾರತ vs ವೆಸ್ಟ್ ಇಂಡೀಸ್ ಸಂಭಾವ್ಯು ಆಡುವ 11ರ ಬಳಗ

ವೆಸ್ಟ್ ಇಂಡೀಸ್: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಟಾಗೆನರಿನ್ ಚಂದ್ರಪಾಲ್, ಕಿರ್ಕ್ ಮೆಕೆಂಜಿ, ಅಲಿಕ್ ಅಥಾನಾಜೆ, ಜೆರ್ಮೈನ್ ಬ್ಲಾಕ್‌ವುಡ್, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಜೇಸನ್ ಹೋಲ್ಡರ್, ಅಲ್ಜಾರಿ ಜೋಸೆಫ್, ಕೆಮರ್ ರೋಚ್, ಶಾನ್ನೋನ್ ಗೇಬ್ರಿಯಲ್, ಜೊಮೆಲ್ ವಾರಿಕಾನ್.

ಭಾರತ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಮುಖೇಶ್ ಕುಮಾರ್, ಜಯದೇವ್ ಉನಾದ್ಕಟ್, ಮೊಹಮ್ಮದ್ ಸಿರಾಜ್.

Story first published: Thursday, July 20, 2023, 23:17 [IST]
Other articles published on Jul 20, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+