For Quick Alerts
ALLOW NOTIFICATIONS  
For Daily Alerts
 

IND vs WI: ವಿದೇಶಿ ಟೆಸ್ಟ್ ಶತಕದ ಬರ ನೀಗಿಸಿಕೊಂಡ ಕೊಹ್ಲಿ; 500ನೇ ಪಂದ್ಯದಲ್ಲಿ ಸಚಿನ್ ದಾಖಲೆ ಉಡೀಸ್!

ವಿಶ್ವ ಕಂಡ ಸಾರ್ವಕಾಲಿಕ ಶ್ರೇಷ್ಠ ಕ್ರಿಕೆಟಿಗರಲ್ಲಿ ಭಾರತದ ಸ್ಟಾರ್ ವಿರಾಟ್ ಕೊಹ್ಲಿ ಕೂಡ ಒಬ್ಬರು. ತನ್ನ ವೃತ್ತಿಜೀವನದಲ್ಲಿ ಹಲವು ಮೈಲಿಗಳನ್ನು ಸಾಧಿಸಿರುವ ಕೊಹ್ಲಿ, ತನ್ನ ದಾಖಲೆಗಳ ಸರಮಾಲೆಯನ್ನು ವಿಸ್ತರಿಸುತ್ತಲೇ ಇದ್ದಾರೆ.

ತಮ್ಮ 500ನೇ ಅಂತಾರಾಷ್ಟ್ರೀಯ ಪಂದ್ಯವನ್ನು ಆಡುತ್ತಿರುವ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ವೃತ್ತಿಜೀವನದ 76ನೇ ಅಂತಾರಾಷ್ಟ್ರೀಯ ಶತಕ ಮತ್ತು 29ನೇ ಟೆಸ್ಟ್ ಶತಕ ಗಳಿಸುವ ಮೂಲಕ ವಿದೇಶಿ ಟೆಸ್ಟ್ ಶತಕದ ಬರವನ್ನು ನೀಗಿಸಿಕೊಂಡರು.

ಇದು ಡಿಸೆಂಬರ್‌ 2018ರ ನಂತರ ವಿದೇಶದ ಟೆಸ್ಟ್‌ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರ ಮೊದಲ ಶತಕವಾಗಿದೆ. ಅಲ್ಲದೇ, ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 100ನೇ ಟೆಸ್ಟ್‌ ಆಗಿರುವ ಪಂದ್ಯದಲ್ಲಿ ಅವರ ಮೈಲಿಗಲ್ಲು ಮತ್ತೊಂದು ವಿಶೇಷವೆನಿಸಿತು ಮತ್ತು ಇದು ಸ್ಮರಣೀಯವಾಗಿಸಿತು.

virat-kohli

ಇನ್ನು ವಿರಾಟ್ ಕೊಹ್ಲಿ ಇದೀಗ 500 ಪಂದ್ಯಗಳ ನಂತರ ಅತಿ ಹೆಚ್ಚು ಅಂತಾರಾಷ್ಟ್ರೀಯ ಶತಕಗಳನ್ನು ಬಾರಿಸಿದ ಆಟಗಾರನಾಗಿದ್ದಾರೆ. ತಮ್ಮ ಮೊದಲ 500 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 75 ಶತಕಗಳನ್ನು ಗಳಿಸಿದ್ದ ಸಚಿನ್ ತೆಂಡೂಲ್ಕರ್ ಅವರ ವಿಶ್ವದಾಖಲೆಯನ್ನು ಹಿಂದಿಕ್ಕಿದರು.

500ನೇ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಶತಕ ಬಾರಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಇದೇ ವೇಳೆ ರನ್ ಮಷಿನ್ ವಿರಾಟ್ ಕೊಹ್ಲಿ ಅವರು ವೆಸ್ಟ್ ಇಂಡೀಸ್ ವಿರುದ್ಧ ಜಂಟಿಯಾಗಿ ಎರಡನೇ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಬ್ಯಾಟ್ಸ್‌ಮನ್ ಎನಿಸಿದರು.

ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅವರ 13 ಶತಕಗಳ ದಾಖಲೆಯ ನಂತರ ವಿರಾಟ್ ಕೊಹ್ಲಿ ಅವರ 12 ಶತಕಗಳು ಇವೆ. ದಕ್ಷಿಣ ಆಫ್ರಿಕಾದ ಜಾಕ್ವೆಸ್ ಕಾಲಿಸ್ ಕೂಡ ವೆಸ್ಟ್ ಇಂಡೀಸ್ ವಿರುದ್ಧ 12 ಶತಕಗಳನ್ನು ಸಿಡಿಸಿದ್ದಾರೆ.

virat-kohli

ಇನ್ನು ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ 206 ಎಸೆತಗಳಲ್ಲಿ 11 ಬೌಂಡರಿ ನೆರವಿನಿಂದ 121 ರನ್ ಗಳಿಸಿ ರನೌಟ್ ಆದರು. ಆಲ್‌ರೌಂಡರ್ ರವೀಂದ್ರ ಜಡೇಜಾ 152 ಎಸೆತಗಳಲ್ಲಿ 5 ಬೌಂಡರಿ ಸಹಾಯದಿಂದ 61 ರನ್ ಗಳಿಸಿದ್ದಾಗ ಕೆಮರ್ ರೋಚ್ ಬೌಲಿಂಗ್‌ನಲ್ಲಿ ವಿಕೆಟ್ ಒಪ್ಪಿಸಿದರು.

ಇದಕ್ಕೂ ಮುನ್ನ ಮೊದಲ ದಿನದಂದು, ಆರಂಭಿಕರಾದ ರೋಹಿತ್ ಶರ್ಮಾ 143 ಎಸೆತಗಳಲ್ಲಿ 80 ರನ್ ಮತ್ತು ಯಶಸ್ವಿ ಜೈಸ್ವಾಲ್ 74 ಎಸೆತಗಳಲ್ಲಿ 57 ರನ್‌ ಗಳಿಸಿದ್ದರು. ಈ ಜೋಡಿ 139 ರನ್‌ಗಳ ಜೊತೆಯಾಟ ನೀಡಿದ್ದರು.

ಎರಡನೇ ದಿನದಾಟದಲ್ಲಿ ಸದ್ಯ ಭೋಜನ ವಿರಾಮದ ವೇಳೆಗೆ ಭಾರತ ತಂಡ 108.4 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 374 ರನ್ ಗಳಿಸಿದೆ. ಇಶಾನ್ ಕಿಶನ್ 12 ರನ್ ಮತ್ತು ರವಿಚಂದ್ರನ್ ಅಶ್ವಿನ್ 6 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

Story first published: Friday, July 21, 2023, 22:40 [IST]
Other articles published on Jul 21, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+