For Quick Alerts
ALLOW NOTIFICATIONS  
For Daily Alerts
 

IND vs WI 2nd Test: ವಿರಾಟ್ ಕೊಹ್ಲಿ ಭರ್ಜರಿ ಶತಕ; 400ರ ಗಡಿ ದಾಟಿದ ಭಾರತ

ಗುರುವಾರ, ಜುಲೈ 20ರಿಂದ ಟ್ರಿನಿಡಾಡ್‌ನ ಪೋರ್ಟ್ ಆಫ್ ಸ್ಪೇನ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಆರಂಭವಾಗಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿದೆ.

ತಮ್ಮ 500ನೇ ಅಂತಾರಾಷ್ಟ್ರೀಯ ಪಂದ್ಯವನ್ನು ಆಡುತ್ತಿರುವ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ವೃತ್ತಿಜೀವನದ 76ನೇ ಅಂತಾರಾಷ್ಟ್ರೀಯ ಶತಕ ಮತ್ತು 29ನೇ ಟೆಸ್ಟ್ ಶತಕ ಗಳಿಸುವ ಮೂಲಕ ವಿದೇಶಿ ಟೆಸ್ಟ್ ಶತಕದ ಬರವನ್ನು ನೀಗಿಸಿಕೊಂಡರು.

ವಿರಾಟ್ ಕೊಹ್ಲಿ 206 ಎಸೆತಗಳಲ್ಲಿ 11 ಬೌಂಡರಿ ನೆರವಿನಿಂದ 121 ರನ್ ಗಳಿಸಿ ರನೌಟ್ ಆದರೆ, ಇದೇ ವೇಳೆ ಆಲ್‌ರೌಂಡರ್ ರವೀಂದ್ರ ಜಡೇಜಾ 152 ಎಸೆತಗಳಲ್ಲಿ 5 ಬೌಂಡರಿ ಸಹಾಯದಿಂದ 61 ರನ್ ಗಳಿಸಿ ಔಟಾದರು.

ind-vs-wi-2nd-test

ಸದ್ಯ ಎರಡನೇ ದಿನದಾಟದಲ್ಲಿ ಭಾರತ ತಂಡ 120 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 416 ರನ್ ಗಳಿಸಿದೆ. ಇಶಾನ್ ಕಿಶನ್ 25 ರನ್ ಗಳಿಸಿ ಔಟಾದರೆ, ರವಿಚಂದ್ರನ್ ಅಶ್ವಿನ್ 34 ರನ್ ಮತ್ತು ಜಯದೇವ್ ಉನಾದ್ಕಟ್ 7 ರನ್ ಗಳಿಸಿ ಬ್ಯಾಟಿಂಗ್ ಮುಂದುವರೆಸಿದ್ದಾರೆ.

ಇದಕ್ಕೂ ಮುನ್ನ ಮೊದಲ ದಿನದಂದು, ಆರಂಭಿಕರಾದ ರೋಹಿತ್ ಶರ್ಮಾ 143 ಎಸೆತಗಳಲ್ಲಿ 80 ರನ್ ಮತ್ತು ಯಶಸ್ವಿ ಜೈಸ್ವಾಲ್ 74 ಎಸೆತಗಳಲ್ಲಿ 57 ರನ್‌ ಗಳಿಸಿದ್ದರು. ಈ ಜೋಡಿ 139 ರನ್‌ಗಳ ಜೊತೆಯಾಟ ನೀಡಿ ಔಟಾಗಿತ್ತು. ಶುಭ್ಮನ್ ಗಿಲ್ 10 ರನ್, ಅಜಿಂಕ್ಯ ರಹಾನೆ 8 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು.

ವೆಸ್ಟ್ ಇಂಡೀಸ್ ಪರ ಬೌಲಿಂಗ್‌ನಲ್ಲಿ ಕೆಮರ್ ರೋಚ್, ಜೇಸನ್ ಹೋಲ್ಡರ್ ತಲಾ 2 ವಿಕೆಟ್ ಪಡೆದಿದ್ದರೆ, ಶನೋನ್ ಗೇಬ್ರಿಯಲ್ ಮತ್ತು ಜೊಮೆಲ್ ವಾರಿಕನ್ ತಲಾ ಒಂದೊಂದು ವಿಕೆಟ್ ಪಡೆದರು.

ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ವಿರಾಟ್ ಕೊಹ್ಲಿ

ಇದೀಗ 500ನೇ ಪಂದ್ಯವನ್ನು ಆಡಿದ ಸಂದರ್ಭದಲ್ಲಿ ವಿರಾಟ್ ಕೊಹ್ಲಿ (76) ಅತಿ ಹೆಚ್ಚು ಅಂತಾರಾಷ್ಟ್ರೀಯ ಶತಕಗಳನ್ನು ಬಾರಿಸಿದ ಆಟಗಾರನಾಗಿದ್ದಾರೆ. ತಮ್ಮ ಮೊದಲ 500 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 75 ಶತಕಗಳನ್ನು ಗಳಿಸಿದ್ದ ಸಚಿನ್ ತೆಂಡೂಲ್ಕರ್ ಅವರ ವಿಶ್ವದಾಖಲೆಯನ್ನು ಹಿಂದಿಕ್ಕಿದರು.

ಇನ್ನು ವಿರಾಟ್ ಕೊಹ್ಲಿ 500ನೇ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಶತಕ ಬಾರಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಇದೇ ವೇಳೆ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ವೆಸ್ಟ್ ಇಂಡೀಸ್ ವಿರುದ್ಧ ಜಂಟಿಯಾಗಿ ಎರಡನೇ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಬ್ಯಾಟ್ಸ್‌ಮನ್ ಎನಿಸಿದರು.

Story first published: Friday, July 21, 2023, 23:47 [IST]
Other articles published on Jul 21, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+