For Quick Alerts
ALLOW NOTIFICATIONS  
For Daily Alerts
 

IND vs WI 3rd ODI; ಡಿಎಲ್ಎಸ್ ಪ್ರಕಾರ ವೆಸ್ಟ್ ಇಂಡೀಸ್‌ಗೆ 35 ಓವರ್‌ಗಳಲ್ಲಿ 257 ರನ್‌ಗಳ ಗುರಿ

IND vs WI 3rd ODI; According To DLS West Indies target 257 Runs in 35 Overs
ವೆಸ್ಟ್ ಇಂಡೀಸ್ ನೆಲದಲ್ಲಿ ಏಕದಿನ ಸರಣಿಯನ್ನು ಗೆದ್ದ ಶಿಖರ್ ಧವನ್ ಟೀಂ | Oneindia Kannada

ಪೋರ್ಟ್ ಆಫ್ ಸ್ಪೇನ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ನಡೆಯುತ್ತಿರುವ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್‌ಗೆ ಭಾರತ 35 ಓವರ್‌ಗಳಲ್ಲಿ 257 ರನ್‌ಗಳ ಪರಿಷ್ಕೃತ ಗುರಿಯನ್ನು ನೀಡಿದೆ. ಡಕ್ವರ್ಥ್ ಲೂಯಿಸ್ ನಿಯಮದ ಪ್ರಕಾರ ಪರಿಷ್ಕೃತ ಗುರಿ ನೀಡಲಾಗಿದೆ.

ಇದಕ್ಕೂ ಮೊದಲು ಭಾರತ 36 ಓವರ್‌ಗಳಲ್ಲಿ 3 ವಿಕೆಟ್‌ಗೆ 225 ರನ್ ಗಳಿಸಿದ್ದಾಗ ಮಳೆಯಿಂದಾಗಿ ಎರಡನೇ ಬಾರಿಗೆ ಪಂದ್ಯ ಸ್ಥಗಿತಗೊಂಡಿತ್ತು. ಶುಭಮನ್ ಗಿಲ್ 98 ರನ್ ಗಳಿಸಿ ಅಜೇಯರಾಗುಳಿದರು ಮತ್ತು ಮತ್ತು ಮಳೆಯಿಂದಾಗಿ ತಮ್ಮ ಚೊಚ್ಚಲ ಶತಕವನ್ನು ತಪ್ಪಿಸಿಕೊಂಡರು. ಭಾರತ ಮೂರನೇ ವಿಕೆಟ್ ಕಳೆದುಕೊಂಡ ನಂತರ ಸಂಜು ಸ್ಯಾಮ್ಸನ್ ಅವರೊಂದಿಗೆ ಸೇರಿಕೊಂಡರು. ಭಾರತ 24 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 115 ರನ್ ಗಳಿಸಿದ್ದಾಗ ಮಳೆ ಅಡ್ಡಿಪಡಿಸಿತು.

ಬ್ಯಾಟಿಂಗ್ ಆರಂಭಿಸಿದ ವೆಸ್ಟ್ ಇಂಡೀಸ್ ತಂಡಕ್ಕೆ ಆರಂಭಿಕ ಆಘಾತವಾಗಿದ್ದು, ಭಾರತ ವಿರುದ್ಧ ಎರಡು ವಿಕೆಟ್‌ಗಳನ್ನು ಬೇಗನೇ ಕಳೆದುಕೊಂಡಿದೆ.

IND vs WI 3rd ODI; According To DLS West Indies target 257 Runs in 35 Overs

ನಾಯಕ ಶಿಖರ್ ಧವನ್ ಮತ್ತು ಶುಭ್‌ಮನ್ ಗಿಲ್ ವೈಯಕ್ತಿಕವಾಗಿ ಅರ್ಧಶತಕಗಳನ್ನು ಬಾರಿಸಿ ಭಾರತವನ್ನು 100 ರನ್ ಗಡಿ ದಾಟಿಸಿದರು. ಅಲ್ಲದೇ ಮೊದಲ ವಿಕೆಟ್‌ಗೆ 113 ರನ್‌ಗಳ ಜೊತೆಯಾಟ ನೀಡಿದರು.

ಆದಾಗ್ಯೂ, ಹೇಡನ್ ವಾಲ್ಷ್ ಜೂನಿಯರ್ ಧವನ್-ಗಿಲ್ ಜೊತೆಯಾಟವನ್ನು ಕೊನೆಗೊಳಿಸಿದರು. ಶಿಖರ್ ಧವನ್ ಅವರು 58 ರನ್ ಗಳಿಸಿದ್ದಾಗ ಔಟ್ ಮಾಡಿದರು. ಇದಕ್ಕೂ ಮೊದಲು ಭಾರತ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ವೇಗಿ ಅವೇಶ್ ಖಾನ್ ಬದಲಿಗೆ ಪ್ರಸಿದ್ಧ್ ಕೃಷ್ಣ ವಾಪಸ್ ಬಂದಿದ್ದು, ಪ್ರವಾಸಿ ತಂಡ ಇದೊಂದು ಬದಲಾವಣೆ ಮಾಡಿದೆ.

ಮೂರು ಪಂದ್ಯಗಳ ಸರಣಿಯಲ್ಲಿ ಈಗಾಗಲೇ 2-0 ಅಂತರದಲ್ಲಿ ಅಜೇಯ ಜಯ ಸಾಧಿಸಿರುವ ಭಾರತ, ಟ್ರಿನಿಡಾಡ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಅನ್ನು ಎದುರಿಸುತ್ತಿದೆ.

ಭಾರತ ಮತ್ತು ವೆಸ್ಟ್ ಇಂಡೀಸ್ ಆಡುವ 11ರ ಬಳಗ
ಭಾರತ ಆಡುವ 11ರ ಬಳಗ: ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ದೀಪಕ್ ಹೂಡಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ.

ವೆಸ್ಟ್ ಇಂಡೀಸ್ ಪ್ಲೇಯಿಂಗ್ 11ರ ಬಳಗ: ಶಾಯ್ ಹೋಪ್ (ವಿಕೆಟ್ ಕೀಪರ್), ಬ್ರಾಂಡನ್ ಕಿಂಗ್, ಕೀಸ್ ಕಾರ್ಟಿ, ನಿಕೋಲಸ್ ಪೂರನ್ (ನಾಯಕ), ಶಮರ್ ಬ್ರೂಕ್ಸ್, ಕೈಲ್ ಮೇಯರ್ಸ್, ಕೀಮೋ ಪಾಲ್, ಜೇಸನ್ ಹೋಲ್ಡರ್, ಅಕೇಲ್ ಹೋಸೇನ್, ಹೇಡನ್ ವಾಲ್ಷ್, ಜೇಡನ್ ಸೀಲ್ಸ್

Story first published: Thursday, July 28, 2022, 1:33 [IST]
Other articles published on Jul 28, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+