IND vs WI 3rd ODI: ಟ್ರಿನಿಡಾಡ್‌ನಲ್ಲಿ ಭಾರತೀಯ ಆಟಗಾರರನ್ನು ಸ್ವಾಗತಿಸಿದ ಡ್ವೇನ್ ಬ್ರಾವೋ ಪುತ್ರ
ಮಂಗಳವಾರ, ಆಗಸ್ಟ್ 1ರಂದು ಟ್ರಿನಿಡಾಡ್‌ನ ಬ್ರಿಯಾನ್ ಲಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಪ್ರವಾಸಿ ಭಾರತ ಮತ್ತು ಆತಿಥೇಯ ವೆಸ್ಟ್ ಇಂಡೀಸ್ ತಂಡಗಳು ಸೆಣಸಾಡಲಿವೆ.
ಎರಡನೇ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಆರು ವಿಕೆಟ್‌ಗಳ ಸೋಲು ಕಂಡಿರುವ ಭಾರತ ತಂಡ ಮೂರನೇ ಪಂದ್ಯವನ್ನಾಡಲು ಟ್ರಿನಿಡಾಡ್‌ಗೆ ಆಗಮಿಸಿತು. ಸದ್ಯ ಸರಣಿ 1-1 ಅಂತರದಲ್ಲಿ ಸಮಬಲಗೊಂಡಿರುವುದರಿಂದ ರೋಹಿತ್ ಶರ್ಮಾ ನಾಯಕತ್ವದ ತಂಡ ಅಂತಿಮ ಪಂದ್ಯ ಗೆದ್ದು, ಸರಣಿ ವಶಪಡಿಸಿಕೊಳ್ಳಲು ಎದುರು ನೋಡುತ್ತಿದೆ.

ಪಂದ್ಯಕ್ಕೂ ಮೊದಲು, ಭಾರತ ತಂಡವು ಟ್ರಿನಿಡಾಡ್‌ನಲ್ಲಿರುವ ತಮ್ಮ ಹೋಟೆಲ್ ತಲುಪಿತು. ಈ ವೇಳೆ ವೆಸ್ಟ್ ಇಂಡೀಸ್ ತಂಡದ ಮಾಜಿ ಆಲ್‌ರೌಂಡರ್ ಡ್ವೇನ್ ಬ್ರಾವೋ ಅವರು ಭಾರತೀಯ ಆಟಗಾರರನ್ನು ಸ್ವಾಗತಿಸಲು ಬಂದಿದ್ದರು. ಡ್ವೇನ್ ಬ್ರಾವೋ ಅವರು ಪ್ರೀತಿಯ ಪುತ್ರನೊಂದಿಗೆ ಕಾಣಿಸಿಕೊಂಡಿದ್ದು ಕೆಲ ಕ್ಷಣ ಅಚ್ಚರಿಗೆ ಕಾರಣವಾಯಿತು.
ಬಿಸಿಸಿಐ ಹಂಚಿಕೊಂಡ ವಿಡಿಯೋದಲ್ಲಿ ವೆಸ್ಟ್ ಇಂಡೀಸ್‌ನ ಶ್ರೇಷ್ಠ ಡ್ವೇನ್ ಬ್ರಾವೋ ಅವರು ಭಾರತ ತಂಡದ ನಾಯಕ ರೋಹಿತ್ ಶರ್ಮಾ, ಅಕ್ಷರ್ ಪಟೇಲ್ ಅವರಂತಹ ಆಟಗಾರರನ್ನು ಭೇಟಿಯಾಗಿ ಶುಭಾಶಯ ಕೋರಿದರು. ಟೀಂ ಇಂಡಿಯಾ ಆಟಗಾರರು ಸಹ ಡ್ವೇನ್ ಬ್ರಾವೋ ಮತ್ತು ಅವರ ಮುದ್ದಾದ ಮಗನನ್ನು ನೋಡಿ ಖುಷಿಪಟ್ಟರು.
ಡ್ವೇನ್ ಬ್ರಾವೋ ಅವರು ತಮ್ಮ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಹ ಆಟಗಾರರಾದ ರವೀಂದ್ರ ಜಡೇಜಾ ಮತ್ತು ರುತುರಾಜ್ ಗಾಯಕ್ವಾಡ್ ಅವರೊಂದಿಗೆ ಮತ್ತೆ ಕಾಣಿಸಿಕೊಂಡರು.
ಡ್ವೇನ್ ಬ್ರಾವೋ ಬಗ್ಗೆ ಮಾತನಾಡುವುದಾದರೆ, ಸ್ಟಾರ್ ಆಲ್‌ರೌಂಡರ್ ಇತ್ತೀಚೆಗೆ ಚೊಚ್ಚಲ ಮೇಜರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡದ ಪರ ಕಾಣಿಸಿಕೊಂಡಿದ್ದಾರೆ. ಪಂದ್ಯಾವಳಿಯು ಭಾನುವಾರ ಕೊನೆಗೊಂಡಿದ್ದು, ಎಂಐ ನ್ಯೂಯಾರ್ಕ್ ತಂಡವು ಸಿಯಾಟಲ್ ಓರ್ಕಾಸ್ ವಿರುದ್ಧ ಗೆದ್ದು ಪ್ರಶಸ್ತಿ ಮುಡಿಗೇರಿಸಿಕೊಂಡಿತು.
ಇನ್ನು ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಪ್ರಯೋಗವನ್ನು ಮುಂದುವರೆಸುವ ಸಾಧ್ಯತೆ ಇದ್ದು, ಸಂಜು ಸ್ಯಾಮ್ಸನ್ ಅಥವಾ ಸೂರ್ಯಕುಮಾರ್ ಯಾದವ್ ಇಬ್ಬರಲ್ಲಿ ಒಬ್ಬರು ಬೆಂಚ್ ಕಾಯಿಸಬೇಕಾಗುತ್ತದೆ.
ಭಾರತ ತಂಡ 2006ರಿಂದ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿಯನ್ನು ಸೋತಿಲ್ಲ. ಬಾರ್ಬಡೋಸ್‌ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಿದ ನಂತರ ಅಪರೂಪದ ಸರಣಿ ಸೋಲುವ ಭೀತಿಯಲ್ಲಿದೆ.
ಮೂರು ಪಂದ್ಯಗಳ ಏಕದಿನ ಸರಣಿ ನಂತರ, ಉಭಯ ತಂಡಗಳು ಐದು ಪಂದ್ಯಗಳ ಟಿ20 ಸರಣಿಯಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ.
ಭಾರತ vs ವೆಸ್ಟ್ ಇಂಡೀಸ್ ಸಂಭಾವ್ಯ ಆಡುವ 11ರ ಬಳಗ
ಭಾರತ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.
ವೆಸ್ಟ್ ಇಂಡೀಸ್: ಬ್ರ್ಯಾಂಡನ್ ಕಿಂಗ್, ಕೈಲ್ ಮೇಯರ್ಸ್, ಅಲಿಕ್ ಅಥಾನಾಜೆ, ಶಾಯ್ ಹೋಪ್ (ನಾಯಕ/ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮೆಯರ್, ಕೀಸಿ ಕಾರ್ಟಿ, ರೊಮಾರಿಯೋ ಶೆಫರ್ಡ್, ಯಾನಿಕ್ ಕ್ಯಾರಿಯಾ, ಅಲ್ಜಾರಿ ಜೋಸೆಫ್, ಗುಡಕೇಶ್ ಮೋಟಿ, ಜೇಡನ್ ಸೀಲ್ಸ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications