ಟೀಮ್ ಇಂಡಿಯಾ ಮೈಕೊಡವಿದ ರೀತಿಗೆ ಬೆಚ್ಚಿಬಿದ್ದ ವಿಂಡೀಸ್: 2-1 ಅಂತರದಿಂದ ಸರಣಿ ಭಾರತದ ವಶ
ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ದದ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗದಲ್ಲಿಯೂ ಅಕ್ಷರಶಃ ಆರ್ಭಟಿಸಿದೆ. ಮೊದಲಿಗೆ ಬ್ಯಾಟಿಂಗ್‌ನಲ್ಲಿ ಮಿಂಚಿದ ಟೀಮ್ ಇಂಡಿಯಾ ನಿಗದಿತ 50 ಓವರ್‌ಗಳಲ್ಲಿ ಅಮೋಘ 351/5 ರನ್‌ಗಳನ್ನು ಬಾರಿಸಿತು. ಇದಕ್ಕೆ ಪ್ರತಿಯಾಗಿ ಬೌಲಿಂಗ್‌ನಲ್ಲಿಯೂ ಅಷ್ಟೇ ಅದ್ಭುತ ಪ್ರದರ್ಸನ ನೀಡಿದ ಟೀಮ್ ಇಂಡಿಯಾ ವೆಸ್ಟ ಇಂಡೀಸ್ ತಂಡವನ್ನು ಕೇವಲ 151 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿದೆ.
ಈ ಭರ್ಜರಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನದ ಮೂಲಕ ಟೀಮ್ ಇಂಡಿಯಾ ಭರ್ಜರಿ 200 ರನ್‌ಗಳ ಅಂತರದಿಂದ ಪಂದ್ಯವನ್ನು ಗೆದ್ದುಕೊಂಡಿದೆ. ಅಲ್ಲದೆ ಮೂರು ಪಂದ್ಯಗಳ ಈ ಏಕದಿನ ಪಂದ್ಯದಲ್ಲಿ 2-1 ಅಂತರದಿಂದ ಗೆಲುವು ಸಾಧಿಸಿ ಸರಣಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾದ ಆಟ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ್ ವೆಸ್ಟ್ ಇಂಡೀಸ್ ಮೊದಲಿಗೆ ಟೀಮ್ ಇಂಡಿಯಾವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಈ ಪಂದ್ಯದಲ್ಲಿಯೂ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹೊರಗುಳಿದಿದ್ದ ಕಾರಣ ಆರಂಭಿಕರಾಗಿ ಶುಬ್ಮನ್ ಗಿಲ್ ಹಾಗೂ ಇಶಾನ್ ಕಿಶನ್ ಮತ್ತೊಂದು ಭರ್ಜರಿ ಆರಂಭವನ್ನು ನೀಡಿದರು. ಮೊದಲ ವಿಕೆಟ್‌ಗೆ ಈ ಜೋಡಿ ಭರ್ಜರಿ 142 ರನ್‌ಗಳ ಜೊತೆಯಾಟವನ್ನು ನೀಡಿತು. ಇಶಾನ್ ಕಿಶನ್ 77 ರನ್‌ಗಳಿಸಿ ಔಟಾದ ಬಳಿಕ ಕಣಕ್ಕಿಳಿದ ಋತುರಾಜ್ ಗಾಯಕ್ವಾಡ್ 8 ರನ್‌ಗಳನ್ನಷ್ಟೇ ಗಳಿಸಲು ಶಕ್ತವಾದರು.
ಬಳಿಕ ಗಿಲ್‌ಗೆ ಸಾಥ್ ನೀಡಿದ್ದು ಸಂಜು ಸ್ಯಾಮ್ಸನ್. ಕಳೆದ ಪಂದ್ಯದಲ್ಲಿ ವಿಫಲವಾಗಿದ್ದ ಸಂಜು ಸ್ಯಾಮ್ಸನ್ ಈ ಪಂದ್ಯದಲ್ಲಿ ಅಂಓಗ ಬ್ಯಾಟಿಂಗ್ ಪ್ರದರ್ಶಿಸಿ ಅಬ್ಬರಿಸಿದರು. 41 ಎಸೆತಗಳಲ್ಲಿ 51 ರನ್‌ಗಳ ಕೊಡುಗೆ ನೀಡಿ ವಿಕೆಟ್ ಕಳೆದುಕೊಂಡರು. ಬಳಿಕ ಶುಬ್ಮನ್ ಗಿಲ್ 85 ರನ್‌ಗಳನ್ನು ಗಳಿಸಿದ್ದಾಗ ವಿಕೆಟ್ ಕಳೆದುಕೊಂಡರು. ನಂತರ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಸೂರ್ಯಕುಮಾರ್ ಯಾದವ್ ಮತ್ತೊಂದು ಉತ್ತಮ ಜೊತೆಯಾಟ ನೀಡಿದರು. ಸೂರ್ಯ 35 ರನ್‌ಗಳನ್ನು ಗಳಿಸಿ ಔಟಾದರೆ ಹಾರ್ದಿಕ್ ಪಾಂಡ್ಯ ಆರಂಭದಲ್ಲಿ ನಿಧಾನಗತಿಯ ಬ್ಯಾಟಿಂಗ್ ನಡೆಸಿದರೂ ಬಳಿಕ ಅಬ್ಬರದ ಪ್ರದರ್ಶನ ನೀಡಿದರು. 52 ಎಸೆತಗಳಲ್ಲಿ ಪಾಂಡ್ಯ 70 ರನ್‌ಗಳ ಕೊಡುಗೆ ನೀಡಿದರು. ಈ ಮೂಲಕ ಟೀಮ್ ಇಂಡಿಯಾ ನಿಗದಿತ 50 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 351 ರನ್‌ಗಳನ್ನು ಗಳಿಸಿದೆ.
ನಂತರ ಬ್ಯಾಟಿಂಗ್‌ಗೆ ಇಳಿದ ವೆಸ್ಟ್ ಇಂಡೀಸ್ ತಂಡಕ್ಕೆ ಆರಂಭದಲ್ಲಿಯೇ ಆಘಾತ ನೀಡಿದ್ದು ಯುವ ವೇಗಿ ಮುಕೇಶ್ ಕುಮಾರ್. ವೆಸ್ಟ್ ಇಂಡೀಸ್ ತಂಡದ ಅಗ್ರ ಕ್ರಮಾಂಕದ ಮೂವರು ದಾಂಡಿಗರನ್ನು ತಂಡ 17ರನ್‌ಗಳಿಸುವಷ್ಟರಲ್ಲಿ ಔಟ್ ಮಾಡುವಲ್ಲಿ ಯಶಸ್ವಿಯಾದರು ಮುಕೇಶ್ ಕುಮಾರ್. ತಂಡದ ಎಲ್ಲಾ ದಾಂಡಿಗರು ಕೂಡ ಸಂಪೂರ್ಣವಾಗಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು. 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಗುಡಕೇಶ್ ಮೋಟಿ ಅವರು ಗಳಿಸಿದ 39 ರನ್ ತಂಡದ ಪರ ದಾಖಲಾದ ಅತಿ ಹೆಚ್ಚಿನ ಸ್ಕೋರ್ ಎನಿಸಿಕೊಂಡಿದೆ.
ವೆಸ್ಟ್ ಇಂಡೀಸ್ ಆಡುವ ಬಳಗ: ಬ್ರೆಂಡನ್ ಕಿಂಗ್, ಕೈಲ್ ಮೇಯರ್ಸ್, ಅಲಿಕ್ ಅಥಾನಾಜೆ, ಶಾಯ್ ಹೋಪ್ (ನಾಯಕ & ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮೆಯರ್, ಕೀಸಿ ಕಾರ್ಟಿ, ರೊಮಾರಿಯೋ ಶೆಫರ್ಡ್, ಯಾನಿಕ್ ಕ್ಯಾರಿಯಾ, ಅಲ್ಜಾರಿ ಜೋಸೆಫ್, ಗುಡಕೇಶ್ ಮೋಟಿ, ಜೇಡನ್ ಸೀಲ್ಸ್
ಬೆಂಚ್: ಕೆವಿನ್ ಸಿಂಕ್ಲೇರ್, ಡೊಮಿನಿಕ್ ಡ್ರೇಕ್ಸ್, ರೋವ್ಮನ್ ಪೊವೆಲ್, ಓಶೇನ್ ಥಾಮಸ್
ಟೀಮ್ ಇಂಡಿಯಾ ಆಡುವ ಬಳಗ: ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ಋತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಯದೇವ್ ಉನದ್ಕತ್, ಕುಲದೀಪ್ ಯಾದವ್, ಮುಖೇಶ್ ಕುಮಾರ್
ಬೆಂಚ್: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಉಮ್ರಾನ್ ಮಲಿಕ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications