Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs WI 3rd ODI: ಇಶಾನ್, ಗಿಲ್, ಸ್ಯಾಮ್ಸನ್, ಪಾಂಡ್ಯ ಅರ್ಧಶತಕ; ವಿಂಡೀಸ್‌ಗೆ ಬೃಹತ್ ಗುರಿ ನೀಡಿದ ಭಾರತ

ಮಂಗಳವಾರ, ಆಗಸ್ಟ್ 1ರಂದು ಟ್ರಿನಿಡಾಡ್‌ನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಸರಣಿಯ ಅಂತಿಮ ಏಕದಿನ ಪಂದ್ಯದಲ್ಲಿ ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧ ಪ್ರವಾಸಿ ಭಾರತ ತಂಡ ಬೃಹತ್ ರನ್‌ಗಳ ಗುರಿ ನೀಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಹಾರ್ದಿಕ್ ಪಾಂಡ್ಯ ನಾಯಕತ್ವದ ಭಾರತ ತಂಡ ನಿಗದಿತ 50 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 351 ರನ್ ಕಲೆಹಾಕಿತು. ಭಾರತ ಇನ್ನಿಂಗ್ಸ್‌ನಲ್ಲಿ ನಾಲ್ವರು ಬ್ಯಾಟರ್‌ಗಳು ಭರ್ಜರಿ ಅರ್ಧಶತಕ ಬಾರಿಸಿದರು.

IND vs WI 3rd ODI: West Indies Need 351 Runs To Win Against India in 3rd ODI Match

ಭಾರತದ ಇನ್ನಿಂಗ್ಸ್ ಆರಂಭಿಸಿದ ಇಶಾನ್ ಕಿಶನ್ ಮತ್ತು ಶುಭ್ಮನ್ ಗಿಲ್ ಮೊದಲ ವಿಕೆಟ್‌ಗೆ 19.4 ಓವರ್‌ಗಳಲ್ಲಿ 143 ರನ್‌ಗಳ ಜೊತೆಯಾಟ ನೀಡಿ ಅದ್ಭುತ ಆರಂಭ ಒದಗಿಸಿದರು.

ಇಶಾನ್ ಕಿಶನ್ ಮೊದಲ ವಿಕೆಟ್ ರೂಪದಲ್ಲಿ ಔಟಾಗುವ ಮುನ್ನ 64 ಎಸೆತಗಳಲ್ಲಿ 8 ಬೌಂಡರಿ ಮತ್ತು 3 ಸಿಕ್ಸರ್ ನೆರವಿನಿಂದ 77 ರನ್ ಗಳಿಸಿದರು. ನಂತರ ಬಂದ ರುತುರಾಜ್ ಗಾಯಕ್ವಾಡ್ 8 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ಮತ್ತೊಬ್ಬ ಆರಂಭಿಕ ಶುಭ್ಮನ್ ಗಿಲ್ 92 ಎಸೆತಗಳಲ್ಲಿ 11 ಬೌಂಡರಿ ಸಹಾಯದಿಂದ 85 ರನ್ ಬಾರಿಸಿದರು. ಸಂಜು ಸ್ಯಾಮ್ಸನ್ 41 ಎಸೆತಗಳಲ್ಲಿ 2 ಬೌಂಡರಿ ಮತ್ತು 4 ಸಿಕ್ಸರ್ ಸಮೇತ 51 ರನ್ ಚಚ್ಚಿದರು. ಸೂರ್ಯಕುಮಾರ್ ಯಾದವ್ 30 ಎಸೆತಗಳಲ್ಲಿ 2 ಬೌಂಡರಿ ಮತ್ತು 2 ಸಿಕ್ಸರ್ ನೆರವಿನಿಂದ 35 ರನ್ ಗಳಿಸಿದರು.

IND vs WI 3rd ODI: West Indies Need 351 Runs To Win Against India in 3rd ODI Match

ಇನ್ನು ಹಂಗಾಮಿ ನಾಯಕ ಹಾರ್ದಿಕ್ ಪಾಂಡ್ಯ 52 ಎಸೆತಗಳನ್ನು ಎದುರಿಸಿ 4 ಬೌಂಡರಿ ಮತ್ತು 5 ಸಿಕ್ಸರ್‌ಗಳ ಮೂಲಕ ಅಜೇಯ 70 ರನ್ ಬಾರಿಸಿದರು ಮತ್ತು ತಂಡದ ಮೊತ್ತವನ್ನು 350ರ ಗಡಿ ದಾಟಿಸಿದರು. ರವೀಂದ್ರ ಜಡೇಜಾ ಔಟಾಗದೇ 8 ರನ್ ಗಳಿಸಿದರು.

ವೆಸ್ಟ್ ಇಂಡೀಸ್ ತಂಡದ ಪರ ಬೌಲಿಂಗ್‌ನಲ್ಲಿ ರೊಮಾರಿಯೋ ಶೆಫರ್ಡ್ 2 ವಿಕೆಟ್ ಪಡೆದರೆ, ಯಾನಿಕ್ ಕ್ಯಾರಿಯಾ, ಅಲ್ಜಾರಿ ಜೋಸೆಫ್, ಗುಡಾಕೇಶ್ ಮೋಟಿ ತಲಾ ಒಂದೊಂದು ವಿಕೆಟ್ ಪಡೆದರು.

ಭಾರತ vs ವೆಸ್ಟ್ ಇಂಡೀಸ್ ಆಡುವ 11ರ ಬಳಗ

ವೆಸ್ಟ್ ಇಂಡೀಸ್: ಬ್ರ್ಯಾಂಡನ್ ಕಿಂಗ್, ಕೈಲ್ ಮೇಯರ್ಸ್, ಅಲಿಕ್ ಅಥಾನಾಜೆ, ಶಾಯ್ ಹೋಪ್ (ನಾಯಕ/ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮೆಯರ್, ಕೀಸಿ ಕಾರ್ಟಿ, ರೊಮಾರಿಯೋ ಶೆಫರ್ಡ್, ಯಾನಿಕ್ ಕ್ಯಾರಿಯಾ, ಅಲ್ಜಾರಿ ಜೋಸೆಫ್, ಗುಡಾಕೇಶ್ ಮೋಟಿ, ಜೇಡನ್ ಸೀಲ್ಸ್.

ಭಾರತ: ಹಾರ್ದಿಕ್ ಪಾಂಡ್ಯ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಯದೇವ್ ಉನಾದ್ಕಟ್, ಮುಖೇಶ್ ಕುಮಾರ್.

Story first published: Tuesday, August 1, 2023, 23:16 [IST]
Other articles published on Aug 1, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+