For Quick Alerts
ALLOW NOTIFICATIONS  
For Daily Alerts
 

ಭಾರತ- ವೆಸ್ಟ್‌ ಇಂಡೀಸ್ 3ನೇ ಟಿ20 ಪಂದ್ಯ: ಟಾಸ್ ಗೆದ್ದ ವೆಸ್ಟ್‌ ಇಂಡೀಸ್ ಬೌಲಿಂಗ್ ಆಯ್ಕೆ LIVE

ind vs wi toss

ಭಾರತ-ವೆಸ್ಟ್ ಇಂಡೀಸ್ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್‌ ಇಂಡೀಸ್ ಬೌಲಿಂಗ್ ಆಯ್ದುಕೊಂಡಿದೆ. ಈ ಮೂಲಕ ಕೋಲ್ಕತ್ತಾದ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಚುಟುಕು ಪಂದ್ಯದಲ್ಲಿ ಭಾರತ ಮೊದಲು ಬ್ಯಾಟಿಂಗ್ ಮಾಡಲಿದೆ.

ಐಪಿಎಲ್ 2021ನೇ ಸೀಸನ್‌ನಲ್ಲಿ ಅತಿ ಹೆಚ್ಚು ವಿಕೆಟ್ ಟೇಕರ್‌ಗಳಲ್ಲಿ ಒಬ್ಬರಾದ ಯುವ ವೇಗಿ ಅವೇಶ್ ಖಾನ್ ಟಿ20 ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದು, ಅನುಭವಿ ಭುವನೇಶ್ವರ್ ಕುಮಾರ್‌ರಿಂದ ಟೀಂ ಇಂಡಿಯಾ ಕ್ಯಾಪ್ ಸ್ವೀಕರಿಸಿದ್ದಾರೆ.

ಉಭಯ ತಂಡಗಳಲ್ಲೂ ನಾಲ್ಕು ಆಟಗಾರರ ಬದಲಾವಣೆ ಆಗಿದ್ದು, ಭಾರತದ ಪರ ಅವೇಶ್ ಖಾನ್, ಶ್ರೇಯಸ್ ಅಯ್ಯರ್, ರುತುರಾಜ್ ಗಾಯಕ್ವಾಡ್, ಶಾರ್ದೂಲ್ ಠಾಕೂರ್ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದು, ವಿರಾಟ್ ಕೊಹ್ಲಿ , ರಿಷಭ್ ಪಂತ್, ಭುವನೇಶ್ವರ್ ಕುಮಾರ್, ಯುಜವೇಂದ್ರ ಚಹಾಲ್ ತಂಡದಿಂದ ಹೊರಗುಳಿದಿದ್ದಾರೆ.

ಇನ್ನು ಭಾರತ ಪರ ರುತುರಾಜ್ ಗಾಯಕ್ವಾಡ್ ಮತ್ತು ಇಶಾನ್ ಕಿಶನ್ ಓಪನಿಂಗ್ ಬ್ಯಾಟಿಂಗ್‌ಗೆ ಇಳಿಯಲಿದ್ದಾರೆ.

ಇನ್ನು ವೆಸ್ಟ್ ಇಂಡೀಸ್ ತಂಡದಲ್ಲೂ ಸಹ ನಾಲ್ಕು ಆಟಗಾರರ ಬದಲಾವಣೆ ಆಗಿದ್ದು, ವಾಲ್ಷ್, ಫ್ಯಾಬಿಯನ್ ಅಲೆನ್, ಡ್ರೇಕ್ಸ್ ಮತ್ತು ಹೋಪ್ ತಂಡಕ್ಕೆ ಕಂಬ್ಯಾಕ್ ಮಾಡಿದ್ದಾರೆ. ಈಗಾಗಲೇ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 2-0ಯಿಂದ ಸರಣಿ ಗೆದ್ದಿರುವ ಭಾರತ ಎದುರಾಳಿಯನ್ನ ವೈಟ್‌ವಾಶ್ ಮಾಡುವ ಗುರಿ ಹೊಂದಿದ್ದು, ವಿಂಡೀಸ್ ಅಂತಿಮ ಪಂದ್ಯ ಗೆದ್ದು ಮರ್ಯಾದೆ ಉಳಿಸಿಕೊಳ್ಳಲು ಎದುರು ನೋಡುತ್ತಿದೆ.

ಭಾರತ-ವಿಂಡೀಸ್ ಮೂರನೇ ಟಿ20 ಪಂದ್ಯದಲ್ಲಿ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿದೆ.

ಟೀಂ ಇಂಡಿಯಾ ಪ್ಲೇಯಿಂಗ್ 11
ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್(ವಿಕೆಟ್ ಕೀಪರ್), ರೋಹಿತ್ ಶರ್ಮಾ(ನಾಯಕ), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ಹರ್ಷಲ್ ಪಟೇಲ್, ರವಿ ಬಿಷ್ಣೋಯ್, ಅವೇಶ್ ಖಾನ್

ವೆಸ್ಟ್ ಇಂಡೀಸ್ ಪ್ಲೇಯಿಂಗ್ 11
ಕೈಲ್ ಮೇಯರ್ಸ್, ಶಾಯ್ ಹೋಪ್, ನಿಕೋಲಸ್ ಪೂರನ್(ವಿಕೆಟ್ ಕೀಪರ್), ರೋವ್‌ಮನ್ ಪೊವೆಲ್, ಕಿರಾನ್ ಪೊಲಾರ್ಡ್(ನಾಯಕ), ಜೇಸನ್ ಹೋಲ್ಡರ್, ರೋಸ್ಟನ್ ಚೇಸ್, ರೊಮಾರಿಯೋ ಶೆಫರ್ಡ್, ಡೊಮಿನಿಕ್ ಡ್ರೇಕ್ಸ್, ಫ್ಯಾಬಿಯನ್ ಅಲೆನ್, ಹೇಡನ್ ವಾಲ್ಷ್

ವಿರಾಟ್ ನ ವೇದಿಕೆ ಮೇಲೆ ನೆನೆದು ಭಾವುಕರಾದ ಸಿರಾಜ್! | Oneindia Kannada

ಭಾರತ-ವೆಸ್ಟ್ ಇಂಡೀಸ್ ಮೂರನೇ ಟಿ20 ಪಂದ್ಯದ ಲೈವ್‌ ಸ್ಕೋರ್ ಈ ಕೆಳಗೆ ತಿಳಿಯಿರಿ

1
51926

Story first published: Sunday, February 20, 2022, 18:46 [IST]
Other articles published on Feb 20, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+