IND vs WI : 3ನೇ ಟಿ20 ಪಂದ್ಯದ ಪಿಚ್ ವರದಿ, ಹವಾಮಾನ ವರದಿ ಮತ್ತು ಸಂಭಾವ್ಯ ಆಡುವ ಬಳಗದ ಮಾಹಿತಿ

ಸದ್ಯ ವೆಸ್ಟ್ ಇಂಡೀಸ್ ನೆಲದಲ್ಲಿ ಬೀಡುಬಿಟ್ಟಿರುವ ಟೀಂ ಇಂಡಿಯಾ ಕೆರಿಬಿಯನ್ನರ ವಿರುದ್ಧ ಸೀಮಿತ ಓವರ್ ಸರಣಿಗಳಲ್ಲಿ ಸೆಣಸಾಟವನ್ನು ನಡೆಸುತ್ತಿದೆ. ಮೊದಲಿಗೆ ಶಿಖರ್ ಧವನ್ ನಾಯಕತ್ವದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ವೈಟ್ ವಾಶ್ ಸಾಧನೆ ಮಾಡಿದ ಟೀಮ್ ಇಂಡಿಯಾ ಸದ್ಯ ನಡೆಯುತ್ತಿರುವ ಟಿ ಟ್ವೆಂಟಿ ಸರಣಿಯಲ್ಲಿ ಪ್ರಥಮ ಪಂದ್ಯವನ್ನು ಗೆದ್ದು ದ್ವಿತೀಯ ಪಂದ್ಯದಲ್ಲಿ ಸೋಲನ್ನು ಅನುಭವಿಸಿದೆ.
ಹೌದು, ಜುಲೈ 29ರಂದು ನಡೆದಿದ್ದ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ ಪ್ರಥಮ ಟಿ ಟ್ವೆಂಟಿ ಪಂದ್ಯದಲ್ಲಿ 68 ರನ್‌ಗಳ ಜಯ ಸಾಧಿಸಿ ಅಬ್ಬರಿಸಿದ್ದ ಭಾರತ ನಿನ್ನೆಯಷ್ಟೇ ( ಆಗಸ್ಟ್ 1 ) ನಡೆದ ವಿಂಡೀಸ್ ವಿರುದ್ಧದ ದ್ವಿತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಸೋಲನ್ನು ಅನುಭವಿಸಿದೆ. ವಾರ್ನರ್ ಪಾರ್ಕ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ 19.4 ಓವರ್‌ಗಳಲ್ಲಿ 138 ರನ್ ಕಲೆಹಾಕಿ ಆಲ್ ಔಟ್ ಆದ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ತಂಡಕ್ಕೆ 139 ರನ್‌ಗಳ ಸಾಮಾನ್ಯ ಗುರಿಯನ್ನು ನೀಡಿತ್ತು.
ಅತ್ತ ಈ ಗುರಿಯನ್ನು 19.2 ಓವರ್‌ಗಳಲ್ಲಿ ಮುಟ್ಟಿದ ವೆಸ್ಟ್ ಇಂಡೀಸ್ 5 ವಿಕೆಟ್ ನಷ್ಟಕ್ಕೆ 141 ರನ್ ಕಲೆಹಾಕಿ 5 ವಿಕೆಟ್‍ಗಳ ಜಯ ಸಾಧಿಸಿತು. ಈ ಮೂಲಕ ಇತ್ತಂಡಗಳು ಸರಣಿಯಲ್ಲಿ ಸಮಬಲ ಸಾಧಿಸಿದ್ದು, ಇದೀಗ ಸರಣಿಯ ತೃತೀಯ ಪಂದ್ಯದತ್ತ ಕುತೂಹಲ ಹೆಚ್ಚಾಗುವಂತೆ ಮಾಡಿದೆ. ಈ ಪಂದ್ಯವನ್ನು ಗೆಲ್ಲುವ ತಂಡ ಸರಣಿಯಲ್ಲಿ ಮುನ್ನಡೆಯನ್ನು ಕಾಯ್ದುಕೊಳ್ಳುವ ಕಾರಣದಿಂದಾಗಿ ಪಂದ್ಯ ಎರಡೂ ತಂಡಗಳಿಗೂ ಮಹತ್ವದ್ದಾಗಿದೆ ಎಂದೇ ಹೇಳಬಹುದು. ದ್ವಿತೀಯ ಪಂದ್ಯ ಮುಕ್ತಾಯವಾದ ಬೆನ್ನಲ್ಲೇ ಯಾವುದೇ ದಿನದ ಅಂತರವಿಲ್ಲದೇ ನಡೆಯುತ್ತಿರುವ ಈ ತೃತೀಯ ಟಿ ಟ್ವೆಂಟಿ ಪಂದ್ಯದ ಕುರಿತಾದ ಮತ್ತಷ್ಟು ಮಾಹಿತಿ ಕೆಳಕಂಡಂತಿದೆ ಓದಿ.

ಪಿಚ್ ವರದಿ ಮತ್ತು ಹವಾಮಾನ ವರದಿ
ಸೇಂಟ್ ಕಿಟ್ಸ್‌ನ ವಾರ್ನರ್ ಪಾರ್ಕ್ ಪಿಚ್ ಗಮನಿಸುವುದಾದರೆ, ಇದು ಬ್ಯಾಟ್ಸ್‌ಮನ್ ಮತ್ತು ಬೌಲರ್ ಇಬ್ಬರಿಗೂ ಅನುಕೂಲವಾಗಿದೆ. ಸ್ಪಿನ್ನರ್‌ಗಳು ಮಧ್ಯಮ ಓವರ್‌ಗಳಲ್ಲಿ ತಂಡಕ್ಕೆ ನೆರವಾಗಬಲ್ಲರು. ಮೊದಲ ಇನ್ನಿಂಗ್ಸ್‌ಗೆ ಹೋಲಿಸಿದ್ರೆ ಚೇಸಿಂಗ್ ಮಾಡುವುದು ಉತ್ತಮ ಆಯ್ಕೆಯಾಗಿದೆ. ಏಕೆಂದರೆ ಎರಡನೇ ಬ್ಯಾಟಿಂಗ್ ಮಾಡಿದ ತಂಡವು ಶೇಕಡಾ 60ರ ಗೆಲುವಿನ ಸರಾಸರಿ ಹೊಂದಿದೆ. ಮೊದಲ ಇನ್ನಿಂಗ್ಸ್ ಸರಾಸರಿ ಸ್ಕೋರ್ 143ರನ್ ಆಗಿದೆ.
ಸೇಂಟ್ ಕಿಟ್ಸ್ ನಗರದಲ್ಲಿ ಪಂದ್ಯದ ದಿನದಂದು ಮೋಡ ಕವಿದ ವಾತಾವರಣವಿರಲಿದ್ದು, ಮಳೆಯಾಗುವ ಸಾಧ್ಯತೆಗಳಿವೆ. 26ರಿಂದ 30° ಸೆಲ್ಸಿಯಸ್ ಉಷ್ಣಾಂಶವಿರಲಿದ್ದು, 72ರಿಂದ 81% ಆರ್ದ್ರತೆ ಇರಲಿದೆ ಹಾಗೂ ಮಳೆಯಾಗುವ ಸಾಧ್ಯತೆ 21ರಿಂದ 22% ಇರಲಿದೆ ಎಂದು ಹವಾಮಾನ ವರದಿ ತಿಳಿಸಿದೆ.

ಸಂಭಾವ್ಯ ಆಡುವ ಬಳಗಗಳು
ಭಾರತ: ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ/ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಅರ್ಶ್ದೀಪ್ ಸಿಂಗ್, ಅವೇಶ್ ಖಾನ್
ವೆಸ್ಟ್ ಇಂಡೀಸ್: ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ನಿಕೋಲಸ್ ಪೂರನ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ಡೆವೊನ್ ಥಾಮಸ್ (ವಿಕೆಟ್ ಕೀಪರ್), ರೋವ್‌ಮನ್ ಪೊವೆಲ್, ಓಡಿಯನ್ ಸ್ಮಿತ್, ಜೇಸನ್ ಹೋಲ್ಡರ್, ಅಕೇಲ್ ಹೋಸೇನ್, ಅಲ್ಜಾರಿ ಜೋಸೆಫ್, ಒಬೆಡ್ ಮೆಕಾಯ್

ನೇರಪ್ರಸಾರದ ಮಾಹಿತಿ
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ತೃತೀಯ ಟಿ ಟ್ವೆಂಟಿ ಇಂದು ( ಆಗಸ್ಟ್ 2 ) ರಾತ್ರಿ 8 ಗಂಟೆಗೆ ಆಗಂಭವಾಗಲಿದ್ದು, ಪಂದ್ಯದ ನೇರ ಪ್ರಸಾರ ಡಿಡಿ ಚಾನೆಲ್‌ನಲ್ಲಿ ಮಾತ್ರ ಇರಲಿದ್ದು, ಫ್ಯಾನ್ ಕೋಡ್ ಮೊಬೈಲ್ ಅಪ್ಲಿಕೇಶನ್‌ನಲ್ಲಿಯೂ ಸಹ ವೀಕ್ಷಿಸಬಹುದಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications