Ind vs WI: ಆರಂಭಿಕನಾಗಿ ಮಿಂಚಿದ ಐಯ್ಯರ್: ವಿಂಡೀಸ್‌ಗೆ ಮತ್ತೊಮ್ಮೆ ಬೃಹತ್ ಗುರಿ ನೀಡಿದ ಭಾರತ

ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಭಾರತ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ. ಅದರಲ್ಲೂ ಆರಂಭಿಕನಾಗಿ ಕಣಕ್ಕಿಳಿದ ಶ್ರೇಯಸ್ ಐಯ್ಯರ್ ಹಾಗೂ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸಿದ ದೀಪಕ್ ಹೂಡಾ ಭರ್ಜರಿ ಪ್ರದರ್ಶನ ನೀಡಿದ್ದು ದೊಡ್ಡ ಮೊತ್ತದ ಗುರಿ ನಿಡಲು ಕಾರಣವಾದರು.
ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತದ ಪರವಾಗಿ ಆರಂಭಿಕನಾಗಿ ಕಣಕ್ಕಿಳಿದ ಇಶಾನ್ ಕಿಶನ್ 11 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಆದರೆ ಶ್ರೇಯಸ್ ಐಯ್ಯರ್ ಹಾಘೂ ದೀಪಕ್ ಹುಡಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ತಂಡದ ಮೊತ್ತವನ್ನು ಹೆಚ್ಚಿಸಿದರು. ಇಬ್ಬರು ಕೂಡ ವೆಸ್ಟ್ ಇಂಡಿಸ್ ಬೌಲರ್‌ಗಳ ಮೇಲೆ ಸಂಪೂರ್ಣವಾಗಿ ನಿಯಂತ್ರಣ ಸಾಧಿಸುವಲ್ಲಿ ಯಶಸ್ವಿಯಾದರು.
ಭರ್ಜರಿ ಅರ್ಧ ಶತಕ ಸಿಡಿಸಿದ ಐಯ್ಯರ್: ಇತ್ತೀಚಿನ ದಿನಗಳಲ್ಲಿ ಮಂಕಾದಂತೆ ಕಾಣಿಸುತ್ತಿದ್ದ ಶ್ರೇಯಸ್ ಐಯ್ಯರ್ ವೆಸ್ಟ್ ಇಂಡೀಸ್ ವಿರುದ್ಧದ ಅಂತಿಮ ಪಂದ್ಯದಲ್ಲಿ ತಮ್ಮ ಅದ್ಭುತ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. 40 ಎಸೆತಗಳನ್ನು ಎದುರಿಸಿದ ಐಯ್ಯರ್ 64 ರನ್ ಸಿಡಿಸಿ ಮಿಂಚಿದರು. ದೀಪಕ್ ಹೂಡಾ ಅವರ ಬ್ಯಾಟ್‌ನಿಂದ 38 ರನ್‌ಗಳು ಹರಿದು ಬಂದಿತು. ಇನ್ನು ನಾಯಕ ಹಾರ್ದಿಕ್ ಪಾಂಡ್ಯ ಕೂಡ 16 ಎಸೆತಗಳಲ್ಲಿ 28 ರನ್ ಬಾರಿಸಿ ಮಿಂಚಿದ್ದಾರೆ.
ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿಯೂ ಭಾರತ ಅಮೋಘ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 4-1 ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದು ಸರಣಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಮಾಡಿದ ಭಾರತ ಬೃಹತ್ ಮೊತ್ತವನ್ನು ಗಳಿಸಿತು. ನಾಯಕ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಸಹಿತ ಪ್ರಮುಖ ನಾಲ್ಕು ಬದಲಾವಣೆಯೊಂದಿಗೆ ಭಾರತ ಈ ಪಂದ್ಯದಲ್ಲಿ ಕಣಕ್ಕಿಳಿದಿತ್ತು. ಹಾಗಿದ್ದರೂ ಭಾರತದ ಬ್ಯಾಟಿಂಗ್‌ನ ಆಕ್ರಮಣಶೀಲತೆಯಲ್ಲಿ ಯಾವುದೇ ಬದಲಾವಣೆಯಾಗಲಿಲ್ಲ. ಶ್ರೇಯಸ್ ಐಯ್ಯರ್ ಹಾಗೂ ದೀಪಕ್ ಹೂಡಾ ಭರ್ಜರಿ ಪ್ರದರ್ಶನದಿಂದಾಗಿ ಭಾರತ 189 ರನ್‌ಗಳ ಬೃಹತ್ ಗುರಿಯನ್ನು ಮುಂದಿಟ್ಟಿತ್ತು. ಆದರೆ ಇದನ್ನು ಗಳಿಸಲು ವಿಫಲವಾದ ವೆಸ್ಟ್ ಇಂಡೀಸ್ ಕೇವಲ 100 ರನ್‌ಗಳಿಸಿ ತನ್ನ ಎಲ್ಲಾ ವಿಕೆಟ್ ಕಳೆದುಕೊಳ್ಳುವ ಮೂಲಕ ಶರಣಾಯಿತು.
ವೆಸ್ಟ್ ಇಂಡಿಸ್ ಪ್ಲೇಯಿಂಗ್ XI: ಶಮರ್ ಬ್ರೂಕ್ಸ್, ಶಿಮ್ರಾನ್ ಹೆಟ್ಮೆಯರ್, ನಿಕೋಲಸ್ ಪೂರನ್ (ನಾಯಕ), ಡೆವೊನ್ ಥಾಮಸ್ (ವಿಕೆಟ್ ಕೀಪರ್), ಜೇಸನ್ ಹೋಲ್ಡರ್, ಓಡಿಯನ್ ಸ್ಮಿತ್, ಕೀಮೋ ಪಾಲ್, ಡೊಮಿನಿಕ್ ಡ್ರೇಕ್ಸ್, ಒಬೆಡ್ ಮೆಕಾಯ್, ಹೇಡನ್ ವಾಲ್ಷ್, ರೋವ್‌ಮನ್ ಪೊವೆಲ್
ಬೆಂಚ್: ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಅಕೀಲ್ ಹೊಸೈನ್, ಅಲ್ಜಾರಿ ಜೋಸೆಫ್, ರೊಮಾರಿಯೋ ಶೆಫರ್ಡ್
ಭಾರತ ಆಡುವ ಬಳಗ: ಭಾರತ ತಂಡ ಪ್ಲೇಯಿಂಗ್ XI: ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ (ನಾಯಕ), ದೀಪಕ್ ಹೂಡಾ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅವೇಶ್ ಖಾನ್, ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂ
ಬೆಂಚ್: ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಭುವನೇಶ್ವರ್ ಕುಮಾರ್, ರವಿಚಂದ್ರನ್ ಅಶ್ವಿನ್, ಹರ್ಷಲ್ ಪಟೇಲ್, ರವೀಂದ್ರ ಜಡೇಜಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications