ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಆತ ಏಕದಿನ ಕ್ರಿಕೆಟ್‌ನ ದೈತ್ಯ ಆಟಗಾರ ಎನಿಸಿಕೊಳ್ಳಬಲ್ಲ: ಭರವಸೆಯ ಆಟಗಾರನ ಬಗ್ಗೆ ಆಕಾಶ್ ಚೋಪ್ರ ವಿಶ್ವಾಸ

Ind vs WI: Aakasg Chopra praises shreyas Iyer said He is becoming a giant

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ಮುಕ್ತಾಯವಾಗಿದ್ದು ಭಾರತ ತಂಡ ಅದ್ಭುತ ಪ್ರದರ್ಶನ ನೀಡಿ ಮಿಂಚಿದೆ. ರೋಚಕವಾಗಿ ಸಾಗಿದ ಪಂದ್ಯದಲ್ಲಿ ಭಾರತ ಅಂತಿಮ ಹಂತದಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಈ ಪಂದ್ಯದ ಮುಕ್ತಾಯದ ಬಳಿಕ ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಕಾಮೆಂಟೇಟರ್ ಆಕಾಶ್ ಚೋಪ್ರ ಪ್ರತಿಕ್ರಿಯಿಸಿದ್ದು ಓರ್ವ ಯುವ ಆಟಗಾರನ ಪ್ರದರ್ಶನವನ್ನು ವಿಶೇಷವಾಗಿ ಕೊಂಡಾಡಿದ್ದಾರೆ.

ಈ ಸರಣಿಯ ಸತತ ಎರಡನೇ ಪಂದ್ಯದಲ್ಲಿಯೂ ಶ್ರೇಯಸ್ ಐಯ್ಯರ್ ಅರ್ಧ ಶತಕ ಸಿಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಮಾತನಾಡಿದ ಆಕಾಶ್ ಚೋಪ್ರ ಯುವ ಆಟಗಾರ ಶ್ರೇಯಸ್ ಐಯ್ಯರ್ ಏಕದಿನ ಕ್ರಿಕೆಟ್ ಮಾದರಿಗೆ ಹೆಚ್ಚು ಸೂಕ್ತವಾದ ಆಟಗಾರನಾಗಿದ್ದು ಈ ಮಾದರಿಯಲ್ಲಿ ಆತ ದೈತ್ಯ ಆಟಗಾರ ಎನಿಸಿಕೊಳ್ಳಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

IND vs WI: 5 ಸಿಕ್ಸ್, ಅಜೇಯ 64 ರನ್ ಚಚ್ಚಿದ ಅಕ್ಷರ್; 2ನೇ ಏಕದಿನ ಗೆದ್ದು ಸರಣಿ ವಶಪಡಿಸಿಕೊಂಡ ಭಾರತIND vs WI: 5 ಸಿಕ್ಸ್, ಅಜೇಯ 64 ರನ್ ಚಚ್ಚಿದ ಅಕ್ಷರ್; 2ನೇ ಏಕದಿನ ಗೆದ್ದು ಸರಣಿ ವಶಪಡಿಸಿಕೊಂಡ ಭಾರತ

3ನೇ ಕ್ರಮಾಂಕದಲ್ಲಿ ಮಿಂಚುತ್ತಿರುವ ಐಯ್ಯರ್

3ನೇ ಕ್ರಮಾಂಕದಲ್ಲಿ ಮಿಂಚುತ್ತಿರುವ ಐಯ್ಯರ್

ವಿರಾಟ್ ಕೊಹ್ಲಿ ಗೈರಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಿದ್ದಾರೆ ಶ್ರೇಯಸ್ ಐಯ್ಯರ್. ಭಾನುವಾರ ಟ್ರಿನಿಡಾಡ್‌ನ ಪೋರ್ಟ್ ಆಫ್ ಸ್ಪೇನ್‌ನಲ್ಲಿರುವ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಶ್ರೇಯಸ್ ಐಯ್ಯರ್ 71 ಎಸೆತಗಳಲ್ಲಿ 63 ರನ್ ಗಳಿಸಿದ್ದಾರೆ. ಅವರ ಭರ್ಜರಿ ಪ್ರದರ್ಶನದ ಕಾರಣದಿಂದಾಗಿ ಭಾರತ ತಂಡ 312 ರನ್‌ಗಳನ್ನು ಬೆನ್ನಟ್ಟಲು ಸಾಧ್ಯವಾಯಿತು. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಅಂತರದಿಂದ ಮುನ್ನಡೆ ಸಾಧಿಸಿದೆ.

ದೈತ್ಯ ಆಟಗಾರನಾಗಲಿದ್ದಾರೆ ಐಯ್ಯರ್

ದೈತ್ಯ ಆಟಗಾರನಾಗಲಿದ್ದಾರೆ ಐಯ್ಯರ್

ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ ಆಕಾಶ್ ಚೋಪ್ರ ಎರಡನೇ ಪಂದ್ಯದಲ್ಲಿ ಭಾರತದ ಮಧ್ಯಮ ಕ್ರಮಾಂಕದ ಪ್ರದರ್ಶನದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಈ ಸಂದರ್ಭದಲ್ಲಿ ಶ್ರೇಯಸ್ ಐಯ್ಯರ್ ಸ್ಥಿರ ಪ್ರದರ್ಶನವನ್ನು ಮೆಚ್ಚಿಕೊಂಡಿದ್ದಾರೆ. "ಶ್ರೇಯಸ್ ಐಯ್ಯರ್ ಏಕದಿನ ಮಾದರಿಯಲ್ಲಿ ದೈತ್ಯ ಆಟಗಾರ ಎನಿಸಿಕೊಳ್ಳಲಿದ್ದಾರೆ. ಈಗಾಗಲೇ ಒಂದು ಶತಕವನ್ನು ಶ್ರೇಯಸ್ ಐಯ್ಯರ್ ಸಿಡಿಸಿದ್ದು 11 ಅರ್ಧ ಶತಕಗಳಿಸಿದ್ದಾರೆ. ಅವರು 25ಕ್ಕಿಂತ ಕೆಲವೇ ಹೆಚ್ಚು ಪಂದ್ಯಗಳನ್ನು ಆಡಿದ್ದಾರೆ" ಎಂದು ಐಯ್ಯರ್ ಪ್ರದರ್ಶನದ ಬಗ್ಗೆ ಮಾತನಾಡಿದ್ದಾರೆ.

ಈ ಭಾರತೀಯ ತಂಡದಲ್ಲಿ ಶಿಖರ್ ಧವನ್‌ಗೆ ಸ್ಥಾನವಿಲ್ಲ; ಭವಿಷ್ಯ ನುಡಿದ ಮಾಜಿ ಕ್ರಿಕೆಟಿಗ

ಏಕದಿನ ಮಾದರಿಯಲ್ಲಿ ಐಯ್ಯರ್ ಅಂಕಿಅಂಶ

ಏಕದಿನ ಮಾದರಿಯಲ್ಲಿ ಐಯ್ಯರ್ ಅಂಕಿಅಂಶ

ಶ್ರೇಯಸ್ ಇದುವರೆಗೆ ಆಡಿದ 29 ಏಕದಿನ ಪಂದ್ಯಗಳಲ್ಲಿ 42.56 ಸರಾಸರಿಯಲ್ಲಿ 1064 ರನ್ ಗಳಿಸಿದ್ದಾರೆ. ಮುಂಬೈ ಮೂಲದ ಈ ಆಟಗಾರ ನ್ಯೂಜಿಲೆಂಡ್ ವಿರುದ್ಧ 103 ರನ್‌ಗಳ ಭರ್ಜರಿ ಶತಕ ಸಿಡಿಸುವ ಮೂಲಕ ಒಂದು ಶತಕವನ್ನು ಹೊಂದಿದ್ದರೆ ಏಕದಿನ ಮಾದರಿಯಲ್ಲಿ ಆಡಿದ 26 ಇನ್ನಿಂಗ್ಸ್‌ಗಳ ಪೈಕಿ 12 ಬಾರಿ ಅರ್ಧ ಶತಕದ ಗಡಿ ದಾಟಿದ್ದಾರೆ.

ವೆಸ್ಟ್ ಇಂಡೀಸ್: ಶಾಯ್ ಹೋಪ್ (ವಿಕೆಟ್ ಕೀಪರ್), ಕೈಲ್ ಮೇಯರ್ಸ್, ಶಮರ್ ಬ್ರೂಕ್ಸ್, ಬ್ರಾಂಡನ್ ಕಿಂಗ್, ನಿಕೋಲಸ್ ಪೂರನ್ (ನಾಯಕ), ರೋವ್‌ಮನ್ ಪೊವೆಲ್, ಅಕೇಲ್ ಹೊಸೈನ್, ರೊಮಾರಿಯೋ ಶೆಫರ್ಡ್, ಅಲ್ಜಾರಿ ಜೋಸೆಫ್, ಜೇಡನ್ ಸೀಲ್ಸ್, ಹೇಡನ್ ವಾಲ್ಷ್
ಬೆಂಚ್: ಕೀಮೋ ಪಾಲ್, ಕೀಸಿ ಕಾರ್ಟಿ

ಭಾರತ: ಶಿಖರ್ ಧವನ್ (ನಾಯಕ), ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ದೀಪಕ್ ಹೂಡಾ, ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಾಲ್, ಅವೇಶ್ ಖಾನ್
ಬೆಂಚ್: ಋತುರಾಜ್ ಗಾಯಕ್ವಾಡ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಇಶಾನ್ ಕಿಶನ್

Story first published: Monday, July 25, 2022, 16:41 [IST]
Other articles published on Jul 25, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X