ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs WI: ಸರಣಿ ಆರಂಭಕ್ಕೂ ಮುನ್ನವೇ ಭಾರತಕ್ಕೆ ಹಿನ್ನಡೆ; ಜಡೇಜಾ, ಕೆಎಲ್ ರಾಹುಲ್ ತಂಡದಿಂದ ಔಟ್!

IND vs WI: Big blow to Team India as KL Rahul and Ravindra Jadeja are out of West Indies series

ಇಂಗ್ಲೆಂಡ್ ಪ್ರವಾಸ ಮುಕ್ತಾಯವಾದ ನಂತರ ಇದೀಗ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ಪ್ರವಾಸವನ್ನು ಕೈಗೊಂಡಿದ್ದು, ಕೆರಿಬಿಯನ್ನರ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಹಾಗೂ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಕಣಕ್ಕಿಳಿಯಲಿದೆ.

ಭಾರತ vs ವಿಂಡೀಸ್ ಏಕದಿನ ಸರಣಿಯ ತಂಡ, ವೇಳಾಪಟ್ಟಿ; ನೇರಪ್ರಸಾರ ಈ ಒಂದು ಚಾನೆಲ್‌ನಲ್ಲಿ ಮಾತ್ರ!ಭಾರತ vs ವಿಂಡೀಸ್ ಏಕದಿನ ಸರಣಿಯ ತಂಡ, ವೇಳಾಪಟ್ಟಿ; ನೇರಪ್ರಸಾರ ಈ ಒಂದು ಚಾನೆಲ್‌ನಲ್ಲಿ ಮಾತ್ರ!

ಬಿಸಿಸಿಐ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿ ಹಾಗೂ ಟ್ವೆಂಟಿ ಸರಣಿಗಳಿಗೆ ಪ್ರತ್ಯೇಕವಾಗಿ 2 ತಂಡಗಳನ್ನು ಪ್ರಕಟಿಸಿತ್ತು. ಏಕದಿನ ಸರಣಿಗೆ ರೋಹಿತ್ ಶರ್ಮಾ ವಿಶ್ರಾಂತಿ ಕಾರಣದಿಂದಾಗಿ ಅಲಭ್ಯರಾಗಿದ್ದ ಕಾರಣ ನಾಯಕತ್ವವನ್ನು ಶಿಖರ್ ಧವನ್ ಅವರ ಹೆಗಲಿಗೆ ಬಿಸಿಸಿಐ ಹಾಕಿತ್ತು ಹಾಗೂ ಉಪನಾಯಕನ ಸ್ಥಾನವನ್ನು ರವೀಂದ್ರ ಜಡೇಜಾಗೆ ನೀಡಿತ್ತು. ಆದರೆ ಇದೀಗ ರವೀಂದ್ರ ಜಡೇಜಾ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಅಲಭ್ಯರಾಗಿದ್ದು, ತಂಡದ ಮತ್ತೋರ್ವ ಆಟಗಾರ ಕೂಡ ಟೂರ್ನಿಯಿಂದ ಔಟ್ ಆಗಿರುವ ಸುದ್ದಿ ಹೊರಬಿದ್ದಿದೆ.

ಭಾರತ ಮತ್ತು ವಿಂಡೀಸ್ ನಡುವೆ ನಡೆದಿರುವ ಏಕದಿನ ಪಂದ್ಯಗಳಲ್ಲಿ ಹೆಚ್ಚು ಗೆದ್ದಿರುವ ಬಲಿಷ್ಠ ತಂಡ ಯಾವುದು?ಭಾರತ ಮತ್ತು ವಿಂಡೀಸ್ ನಡುವೆ ನಡೆದಿರುವ ಏಕದಿನ ಪಂದ್ಯಗಳಲ್ಲಿ ಹೆಚ್ಚು ಗೆದ್ದಿರುವ ಬಲಿಷ್ಠ ತಂಡ ಯಾವುದು?

ಇತ್ತೀಚಿಗಷ್ಟೆ ತೊಡೆಸಂದು ಗಾಯದ ಸಮಸ್ಯೆಯಿಂದಾಗಿ ಟೀಮ್ ಇಂಡಿಯಾದ ಹಲವು ಸರಣಿಗಳನ್ನು ಕೈ ತಪ್ಪಿಸಿಕೊಂಡಿದ್ದ ಕೆಎಲ್ ರಾಹುಲ್ ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಟಿ ಟ್ವೆಂಟಿ ಸರಣಿಯಿಂದ ಹೊರಬಿದ್ದಿದ್ದಾರೆ. ಈ ಕುರಿತಾದ ಮತ್ತಷ್ಟು ಮಾಹಿತಿ ಕೆಳಕಂಡಂತಿದೆ.

ಕೆ ಎಲ್ ರಾಹುಲ್ ಅವರಿಗೆ ಕೊರೋನಾವೈರಸ್

ಕೆ ಎಲ್ ರಾಹುಲ್ ಅವರಿಗೆ ಕೊರೋನಾವೈರಸ್

ತೊಡೆಸಂದು ಗಾಯದ ಸಮಸ್ಯೆಯಿಂದಾಗಿ ಇತ್ತೀಚೆಗಿನ ಹಲವು ಸರಣಿಗಳಲ್ಲಿ ಕಣಕ್ಕಿಳಿಯದೇ ಇದ್ದ ಟೀಮ್ ಇಂಡಿಯಾದ ದೀರ್ಘಾವಧಿಯ ಉಪನಾಯಕ ಕೆಎಲ್ ರಾಹುಲ್ ವೆಸ್ಟ್ ಇಂಡೀಸ್ ವಿರುದ್ಧದ 5 ಪಂದ್ಯಗಳ ಟಿ ಟ್ವೆಂಟಿ ಸರಣಿಗೆ ಪ್ರಕಟವಾಗಿದ್ದ ಭಾರತ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದರು. ಸರಣಿಗೂ ಮುನ್ನ ಫಿಟ್ ಆದರೆ ಮಾತ್ರ ಕೆ ಎಲ್ ರಾಹುಲ್ ಅವರಿಗೆ ಸರಣಿಯಲ್ಲಿ ಕಣಕ್ಕಿಳಿಯುವ ಅವಕಾಶ ಲಭಿಸಲಿದೆ ಎನ್ನಲಾಗಿತ್ತು. ಆದರೆ ಇದೀಗ ಕೆಎಲ್ ರಾಹುಲ್ ಕೊರೊನಾ ಸೋಂಕಿಗೆ ಒಳಗಾಗಿರುವ ವಿಷಯ ಹೊರಬಿದ್ದಿದ್ದು, ಕೆಎಲ್ ರಾಹುಲ್ ವೆಸ್ಟ್ ಇಂಡೀಸ್ ವಿರುದ್ಧದ ಟಿ ಟ್ವೆಂಟಿ ಸರಣಿಯಿಂದ ಹೊರಗುಳಿಯಲಿದ್ದಾರೆ.

ರವೀಂದ್ರ ಜಡೇಜಾ ಕೂಡ ಔಟ್

ರವೀಂದ್ರ ಜಡೇಜಾ ಕೂಡ ಔಟ್

ವೆಸ್ಟ್ ಇಂಡೀಸ್‌ ವಿರುದ್ಧದ ಏಕದಿನ ಸರಣಿಗೆ ಪ್ರಕಟವಾಗಿದ್ದ ತಂಡದಲ್ಲಿ ಉಪನಾಯಕನಾಗಿ ಸ್ಥಾನ ಪಡೆದುಕೊಂಡಿದ್ದ ರವೀಂದ್ರ ಜಡೇಜಾ ಮಂಡಿ ನೋವಿನಿಂದ ಬಳಲುತ್ತಿದ್ದು ಗಾಯಕ್ಕೊಳಗಾಗಿದ್ದಾರೆ. ಹೀಗಾಗಿ ರವೀಂದ್ರ ಜಡೇಜಾ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಈ ಮೂಲಕ ಕೆಎಲ್ ರಾಹುಲ್ ಟಿ ಟ್ವೆಂಟಿ ಸರಣಿಯಿಂದ ಹೊರ ಬಿದ್ದರೆ, ರವೀಂದ್ರ ಜಡೇಜಾ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಳಿಗೆ ಪ್ರಕಟವಾಗಿದ್ದ ತಂಡಗಳು

ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಳಿಗೆ ಪ್ರಕಟವಾಗಿದ್ದ ತಂಡಗಳು

ಏಕದಿನ ಸರಣಿಗೆ ಪ್ರಕಟವಾಗಿದ್ದ ಭಾರತ ತಂಡ: ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್‌ವಾಡ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರವೀಂದ್ರ ಜಡೇಜಾ (ಉಪನಾಯಕ), ಅಕ್ಷರ್ ಪಟೇಲ್, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅವೇಶ್ ಖಾನ್, ಅರ್ಷದೀಪ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ


ಟಿ ಟ್ವೆಂಟಿ ಸರಣಿಗೆ ಪ್ರಕಟವಾಗಿದ್ದ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಕೆಎಲ್ ರಾಹುಲ್, ದಿನೇಶ್ ಕಾರ್ತಿಕ್, ರಿಷಬ್ ಪಂತ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಭುವನೇಶ್ವರ್ ಕುಮಾರ್ , ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್

Story first published: Friday, July 22, 2022, 9:07 [IST]
Other articles published on Jul 22, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X