For Quick Alerts
ALLOW NOTIFICATIONS  
For Daily Alerts
 

IND vs WI: ಭಾರತ ವಿರುದ್ಧ ಸರಣಿಗೂ ಮುನ್ನ ಹೆಣಗಾಡುತ್ತಿರುವ ವಿಂಡೀಸ್ ತಂಡಕ್ಕೆ ಬ್ರಿಯಾನ್ ಲಾರಾ ಮೆಂಟರ್

2023ರ ಐಸಿಸಿ ಏಕದಿನ ವಿಶ್ವಕಪ್ ಅರ್ಹತಾ ಸುತ್ತಿನಲ್ಲಿ ಮುಖಭಂಗ ಅನುಭವಿಸಿ, ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯುವ ಮುಖ್ಯ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದ ನಂತರ, ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡವು ತವರಿನಲ್ಲಿ ಭಾರತವನ್ನು ಎದುರಿಸಲು ಸಿದ್ಧವಾಗಿದೆ.

ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಜುಲೈ 12ರಂದು ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆರಂಭಿಸಲಿವೆ. ಟೆಸ್ಟ್ ಪಂದ್ಯಗಳ ನಂತರ, ಉಭಯ ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿ ಮತ್ತು ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮುಖಾಮುಖಿಯಾಗಲಿವೆ.

ಜಿಂಬಾಬ್ವೆಯಲ್ಲಿ ವಿಶ್ವಕಪ್ ಅರ್ಹತಾ ಪಂದ್ಯಗಳಲ್ಲಿ ನಿರಾಸೆ ಅನುಭವಿಸಿದ ವೆಸ್ಟ್ ಇಂಡೀಸ್ ತಂಡದ ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ ಹಾಗೂ ಮಾಜಿ ಆಟಗಾರ ಬ್ರಿಯಾನ್ ಲಾರಾ ಬಹು-ಮಾದರಿಯ ಸರಣಿಗಾಗಿ ಮೆಂಟರ್ ಆಗಿ ವೆಸ್ಟ್ ತಂಡವನ್ನು ಸೇರಿಕೊಂಡಿದ್ದಾರೆ.

Brian Lara Appointed As Mentor For West Indies

ಬ್ರಿಯಾನ್ ಲಾರಾ ಅವರು ಕೆರಿಬಿಯನ್ ತಂಡದೊಂದಿಗೆ ಕಾರ್ಯಕ್ಷಮತೆಯ ಮಾರ್ಗದರ್ಶಕರಾಗಿ ತಮ್ಮ ಅನುಭವವನ್ನು ಧಾರೆ ಎರೆಯಲಿದ್ದಾರೆ. ಇತ್ತೀಚೆಗೆ ದಿನಗಳಲ್ಲಿ ವೆಸ್ಟ್ ಇಂಡೀಸ್ ತಂಡದ ಪ್ರದರ್ಶನ ಅತ್ಯಂತ ನಿರಾಶಾದಾಯಕವಾಗಿದೆ.

ಕಳೆದ 48 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಎರಡು ಬಾರಿಯ ಚಾಂಪಿಯನ್ ವೆಸ್ಟ್ ಇಂಡೀಸ್ ತಂಡ ಏಕದಿನ ವಿಶ್ವಕಪ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಬ್ರಿಯಾನ್ ಲಾರಾ ಅವರ ಉಪಸ್ಥಿತಿಯು ತಂಡದ ಪ್ರದರ್ಶನವನ್ನು ಸುಧಾರಿಸುವ ನಿರೀಕ್ಷೆಯಿದೆ.

ಒಂದು ಕಾಲದ ಕ್ರಿಕೆಟ್ ದಿಗ್ಗಜ ಬ್ರಿಯಾನ್ ಲಾರಾ ವೆಸ್ಟ್ ಇಂಡೀಸ್ ತಂಡದ ಪರ 131 ಟೆಸ್ಟ್ ಮತ್ತು 299 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಅವರು 52.88ರ ಸರಾಸರಿಯಲ್ಲಿ 11,953 ರನ್‌ಗಳನ್ನು ಗಳಿಸಿದ್ದಾರೆ.

ಟೆಸ್ಟ್ ಕ್ರಿಕೆಟ್ ಸ್ವರೂಪದಲ್ಲಿ 34 ಶತಕಗಳು ಮತ್ತು 48 ಅರ್ಧ ಶತಕಗಳನ್ನು ದಾಖಲಿಸಿದ್ದಾರೆ. ಅವರ ಗರಿಷ್ಠ ಸ್ಕೋರ್ 400 ರನ್ ಆಗಿದೆ. ಏಕದಿನ ಪಂದ್ಯಗಳಲ್ಲಿ ಬ್ರಿಯಾನ್ ಲಾರಾ 40.48ರ ಸರಾಸರಿಯಲ್ಲಿ 19 ಶತಕಗಳು ಮತ್ತು 63 ಅರ್ಧ ಶತಕಗಳನ್ನು ಒಳಗೊಂಡಂತೆ 10,405 ರನ್ ಬಾರಿಸಿದ್ದಾರೆ.

ಪ್ರಸ್ತುತ ವೆಸ್ಟ್ ಇಂಡೀಸ್ ತಂಡದೊಂದಿಗೆ ಬ್ರಿಯಾನ್ ಲಾರಾ ಅವರು ಸೇರಿಕೊಂಡಿರುವುದನ್ನು ಗಮನಿಸಿದರೆ, ಇದು ನಿಸ್ಸಂದೇಹವಾಗಿ ತಂಡದ ನೈತಿಕ ಸ್ಥೈರ್ಯ ಹೆಚ್ಚಾಗಲಿದೆ. ಮಾಜಿ ಕ್ರಿಕೆಟಿಗ ಬ್ರಿಯಾನ್ ಲಾರಾ ಅವರು ಸದ್ಯ ಹೆಣಗಾಡುತ್ತಿರುವ ಕೆರಿಬಿಯನ್ ತಂಡವನ್ನು ಪುನಶ್ಚೇತನಗೊಳಿಸುವತ್ತ ಗಮನ ನೀಡಲಿದ್ದಾರೆ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯವು ಜುಲೈ 12ರಂದು ನಡೆದರೆ, ಜುಲೈ 20ರಂದು ಎರಡನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ.

ಬಳಿಕ ಜುಲೈ 27ರಿಂದ ಪ್ರಾರಂಭವಾಗುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಇತ್ತಂಡಗಳು ಸೆಣಸಾಡಲಿದ್ದು, ಜುಲೈ 29ರಂದು ಎರಡನೇ ಏಕದಿನ ಪಂದ್ಯ ಮತ್ತು ಆಗಸ್ಟ್ 1ರಂದು ಮೂರನೇ ಏಕದಿನ ಪಂದ್ಯ ನಡೆಯಲಿದೆ.

ನಂತರ 5 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದ್ದು, ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟಿ20 ಪಂದ್ಯ ಆಗಸ್ಟ್ 3ರಂದು ನಡೆಯಲಿದೆ. ಆಗಸ್ಟ್ 6ರಂದು ಎರಡನೇ ಪಂದ್ಯ, ಆಗಸ್ಟ್ 8ರಂದು ಮೂರನೇ ಪಂದ್ಯ, ಆಗಸ್ಟ್ 12ರಂದು ನಾಲ್ಕನೇ ಟಿ20 ಪಂದ್ಯ ಮತ್ತು ಆಗಸ್ಟ್ 13ರಂದು ಪ್ರವಾಸದ ಅಂತಿಮ ಟಿ20 ಪಂದ್ಯವನ್ನು ನಿಗದಿಪಡಿಸಲಾಗಿದೆ.

Story first published: Tuesday, July 4, 2023, 17:44 [IST]
Other articles published on Jul 4, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+