Ind vs WI: ಜೈಸ್ವಾಲ್, ರೋಹಿತ್ ಶತಕ: ಬೃಹತ್ ಮೊತ್ತದತ್ತ ಟೀಮ್ ಇಂಡಿಯಾ
ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದ ಎರಡನೇ ದಿನ ಸಂಪೂರ್ಣವಾಗಿ ಬ್ಯಾಟಿಂಗ್ ಮಾಡಿದ್ದು ವೆಸ್ಟ್ ಇಂಡೀಸ್ ತಂಡ ಭಾರೀ ನಿರಾಸೆ ಅನುಭವಿಸಿದೆ. ಇಡೀ ದಿನ ವೆಸ್ಟ್ ಇಂಡೀಸ್ ಬೌಲರ್‌ಗಳು ಕೇವಲ ಎರಡು ವಿಕೆಟ್ ಪಡೆಯಲು ಮಾತ್ರವೇ ಯಶಸ್ವಿಯಾದರು. ಇತ್ತ ಭಾರತದ ಪರವಾಗಿ ಇಬ್ಬರು ಆರಂಭಿಕ ಆಟಗಾರರು ಕೂಡ ಶತಕ ಪೂರ್ಣಗೊಳಿಸಿ ಮಿಂಚಿದ್ದಾರೆ.
ವೆಸ್ಟ್ ಇಂಡೀಸ್ ಮೊದಲ ಇನ್ನಿಂಗ್ಸ್‌ನಲ್ಲಿ ಗಳಿಸಿದ 150 ರನ್‌ಗಳ ಮೊತ್ತವನ್ನು ಭಾರತ ಯಾವುದೇ ವಿಕೆಟ್ ಕಳೆದುಕೊಳ್ಳದೆ ಮುನ್ನಡೆ ಪಡೆಯುವ ಮೂಲಕ ಟೆಸ್ಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ತಂಡ ಈ ಸಾಧನೆ ಮಾಡಿದಂತಾಗಿದೆ. ಯಶಸ್ವಿ ಜೈಸ್ವಾಲ್ ತಮ್ಮ ಶತಕವನ್ನು ಪೂರ್ಣಗೊಳಿಸುವ ಮೂಲಕ ಚೊಚ್ಚಲ ಪಂದ್ಯದಲ್ಲಿಯೇ ಈ ಸಾಧನೆ ಮಾಡಿದ ಆಟಗಾರರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಎರಡನೇ ದಿನವಿಡೀ ಬ್ಯಾಟಿಂಗ್ ಮಾಡಿದ ಜೈಸ್ವಾಲ್ ವಿಕೆಟ್ ಕಳೆದುಕೊಳ್ಳದೆ 143 ರನ್‌ಗಳನ್ನು ಗಳಿಸಿದ್ದು ಮೂರನೇ ದಿನಕ್ಕೆ ಕ್ರೀಸ್ ಕಾಯ್ದಿರಿಸಿದ್ದಾರೆ.

ಇನ್ನು ಮತ್ತೊಂದೆಡೆ ನಾಯಕ ರೋಹಿತ್ ಶರ್ಮಾ ಕೂಡ ಭರ್ಜರಿ ಶತಕವನ್ನು ಪೂರ್ಣಗೊಳಿಸಿದರು. 221 ಎಸೆತಗಳನ್ನು ಎದುರಿಸಿದ ಅವರು 103 ರನ್‌ಗಳಿಸಿದ ಸಂದರ್ಭದಲ್ಲಿ ತಮ್ಮ ವಿಕೆಟ್ ಕಳೆದುಕೊಂಡರು. ಈ ಮೂಲಕ ಮೊದಲ ಯಶಸ್ಸು ಸಾಧಿಸಿತು ವೆಸ್ಟ್ ಇಂಡೀಸ್. ನಂತರ ಬಂದ ಶುಬ್ಮನ್ ಗಿಲ್ ಹೆಚ್ಚು ಕಾಲ ಕ್ರೀಸ್‌ನಲ್ಲಿ ಉಳಿಯಲಿಲ್ಲ. 11 ಎಸೆತ ಎದುರಿಸಿದ ಗಿಲ್ 6 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು.
ಅದಾದ ಬಳಿಕ ಮಾಜಿ ನಾಯಕ ವಿರಾಟ್ ಕೊಹ್ಲಿ ಕ್ರೀಸ್‌ಗಿಳಿದಿದ್ದು ಬ್ಯಾಟಿಂಗ್ ನಡೆಸಿದ್ದಾರೆ. ಜೈಸ್ವಾಲ್ ಜೊತೆ ಸೇರಿಕೊಂಡು ಭಾರತದ ಪರವಾಗಿ ಮತ್ತೊಂದು ಬೃಹತ್ ಜೊತೆಯಾಟ ದೊರೆತಿದೆ. ದಿನದಾಟ ಅಂತ್ಯದ ವೇಳೆಗೆ ಟೀಮ್ ಇಂಡಿಯಾ 312 ರನ್‌ಗಳನ್ನು ಗಳಿಸಿದ್ದು ಎರಡು ವಿಕೆಟ್ ಕಳೆದುಕೊಂಡಿತು. ಜೈಸ್ವಾಲ್ 143 ರನ್‌ಗಳನ್ನು ಗಳಿಸಿ ಮೂರನೇ ದಿನಕ್ಕೆ ಕ್ರೀಸ್ ಕಾಯ್ದಿರಿಸಿದ್ದು ವಿರಾಟ್ ಕೊಹ್ಲಿ 36 ರನ್‌ಗಳಿಸಿ ಅಜೇಯವಾಗುಳಿದಿದ್ದಾರೆ.
ಮೂರನೇ ದಿನ ಭಾರತ ತನ್ನ ಸ್ಕೋರನ್ನು ಷ್ಟು ವಿಸ್ತರಿಸಲಿದೆ ಎಂಬುದು ಕುತೂಹಲ ಮೂಡಿಸಿದ್ದು ಚೊಚ್ಚ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಇನ್ನು ಯಾವೆಲ್ಲಾ ದಾಖಲೆಗಳ ಮೇಲೆ ಕಣ್ಣಿಟ್ಟಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಇನ್ನು ವಿರಾಟ್ ಕೊಹ್ಲಿಯಿಂದ ಎಷ್ಟು ರನ್‌ಗಳು ಹರಿದು ಬರಲಿದೆ ಎಂಬುದು ಕೂಡ ಪ್ರಶ್ನೆಯಾಗಿದೆ.
ವೆಸ್ಟ್ ಇಂಡೀಸ್ ಆಡುವ ಬಳಗ: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಟಗೆನರೈನ್ ಚಂದ್ರಪಾಲ್, ರೇಮನ್ ರೈಫರ್, ಜೆರ್ಮೈನ್ ಬ್ಲಾಕ್‌ವುಡ್, ಅಲಿಕ್ ಅಥಾನಾಜೆ, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಜೇಸನ್ ಹೋಲ್ಡರ್, ರಹಕೀಮ್ ಕಾರ್ನ್‌ವಾಲ್, ಅಲ್ಜಾರಿ ಜೋಸೆಫ್, ಕೆಮರ್ ರೋಚ್, ಜೋಮೆಲ್ ವಾರಿಕನ್
ಬೆಂಚ್: ಕಿರ್ಕ್ ಮೆಕೆಂಜಿ, ಶಾನನ್ ಗೇಬ್ರಿಯಲ್
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಯದೇವ್ ಉನದ್ಕತ್, ಮೊಹಮ್ಮದ್ ಸಿರಾಜ್
ಬೆಂಚ್: ಋತುರಾಜ್ ಗಾಯಕ್ವಾಡ್, ಶ್ರೀಕರ್ ಭರತ್, ಅಕ್ಷರ್ ಪಟೇಲ್, ನವದೀಪ್ ಸೈನಿ, ಮುಖೇಶ್ ಕುಮಾರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications