ಅಕ್ಷರ್, ಬಿಷ್ಣೋಯ್, ಕುಲ್ದೀಪ್ ಆರ್ಭಟ!: ಟಿ20 ಕ್ರಿಕೆಟ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ ಸ್ಪಿನ್ನರ್‌ಗಳು!

ವೆಸ್ಟ್ ಇಂಡೀಸ್ ವಿರುದ್ಧದ ಅಂತಿಮ ಪಂದ್ಯದಲ್ಲಿಯೂ ಭಾರತ 88 ರನ್‌ಗಳನ್ನು ಗೆದ್ದುಕೊಂಡಿದೆ. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 4-1 ಅಂತರದಿಂದ ತನ್ನ ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಅಂತಿಮ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಭಾರತದ ಸ್ಪಿನ್ನರ್‌ಗಳು ನೀಡಿದ ಪ್ರದರ್ಶನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ರಸದೌತಣ ನೀಡಿದೆ. ಈ ಅಮೋಘ ಪ್ರದರ್ಶನದೊಂದಿಗೆ ಭಾರತದ ಸ್ಪಿನ್ನರ್‌ಗಳು ಐತಿಹಾಸಿಕ ಸಾಧನೆಯೊಂದನ್ನು ಮಾಡಿದ್ದಾರೆ.

ಭಾರತ ತಂಡ ನೀಡಿದ ಬೃಹತ್ ಮೊತ್ತವನ್ನು ಬೆನ್ನಟ್ಟಿದ ವೆಸ್ಟ್ ಇಂಡೀಸ್ ತಂಡಕ್ಕೆ ಆರಂಭದಿಂದಲೇ ಆಘಾತ ಎದುರಾಯಿತು. ವೆಸ್ಟ್ ಇಂಡೀಸ್ ತಂಡದ ಅಗ್ರ ಕ್ರಮಾಂಕದ ಮೇಲೆ ಅಕ್ಷರ್ ಪಟೇಲ್ ಸವಾರಿ ಮಾಡಿ ಕೆಡವಿ ಹಾಕಿದರು. ನಂತರ ಅಕ್ಷರ್ ಪಟೇಲ್ ಜೊತೆಗೆ ಕುಲ್‌ದೀಪ್ ಯಾದವ್ ಹಾಗೂ ರವಿ ಬಿಷ್ಣೋಯ್ ಸೇರಿಕೊಂಡು ವಿಂಡೀಸ್ ದಾಂಡಿಗರ ಸದ್ದಡಗಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಹಿಂದೆಂದೂ ಮಾಡಿರದ ಸಾಧನೆಯನ್ನು ಭಾರತದ ಸ್ಪಿನ್ನರ್‌ಗಳು ಮಾಡಿದ್ದಾರೆ.

ಕಾಮನ್‌ವೆಲ್ತ್‌ ಗೇಮ್ಸ್‌ 2022: 11ನೇ ದಿನದಲ್ಲಿ ಭಾರತದ ಪ್ರಮುಖ ಸ್ಪರ್ಧೆಗಳ ವೇಳಾಪಟ್ಟಿಕಾಮನ್‌ವೆಲ್ತ್‌ ಗೇಮ್ಸ್‌ 2022: 11ನೇ ದಿನದಲ್ಲಿ ಭಾರತದ ಪ್ರಮುಖ ಸ್ಪರ್ಧೆಗಳ ವೇಳಾಪಟ್ಟಿ

ಐತಿಹಾಸಿಕ ಸಾಧನೆ ಮಾಡಿದ ಸ್ಪಿನ್ನರ್‌ಗಳು

ಐತಿಹಾಸಿಕ ಸಾಧನೆ ಮಾಡಿದ ಸ್ಪಿನ್ನರ್‌ಗಳು

ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ 189 ರನ್‌ಗಳ ಗುರಿಯನ್ನು ಬೆನ್ನಟ್ಟಲು ಆರಂಭಿಸಿದ ವೆಸ್ಟ್ ಇಂಡೀಸ್ ತಂಡ ಕೇವಲ 100 ರನ್‌ಗೆ ಆಲೌಟ್ ಆಯಿತು. ಇದಕ್ಕೆ ಕಾರಣ ಭಾರತದ ಯುವ ಸ್ಪಿನ್ ಬೌಲಿಂಗ್ ವಿಭಾಗ. ವೆಸ್ಟ್ ಇಂಡೀಸ್‌ನ ಎಲ್ಲಾ ಹತ್ತು ವಿಕೆಟ್‌ಗಳನ್ನು ಕೂಡ ಭಾರತ ತಂಡದ ಮೂವರು ಸ್ಪಿನ್ನರ್‌ಗಳೇ ತಮ್ಮ ಬುಟ್ಟಿಗೆ ಹಾಕಿಕೊಂಡಿದ್ದಾರೆ. ಅಕ್ಷರ್ ಪಟೇಲ್ ಹಾಗೂ ಕುಲ್‌ದೀಪ್ ಯಾದವ್ ತಲಾ ಮೂರು ವಿಕೆಟ್ ಪಡೆದರೆ ರವಿ ಬಿಷ್ಣೋಯ್ ನಾಲ್ಕು ವಿಕೆಟ್ ಪಡೆದರು. ಈ ಮೂಲಕ ಎಲ್ಲಾ ಹತ್ತು ವಿಕೆಟ್‌ಗಳನ್ನು ಕೂಡ ಸ್ಪಿನ್ನರ್‌ಗಳ ತಮ್ಮ ಮಧ್ಯೆಯೇ ಹಂಚಿಕೊಂಡಿದ್ದಾರೆ. ಟಿ20 ಕ್ರಿಕೆಟ್‌ನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಈ ವಿಶೇಷ ಸಾಧನೆ ದಾಖಲಾಗಿದೆ.

ಅಗ್ರ ಕ್ರಮಾಂಕವನ್ನು ಅಗ್ಗಕ್ಕೆ ಕೆಡವಿದ ಅಕ್ಷರ್

ಅಗ್ರ ಕ್ರಮಾಂಕವನ್ನು ಅಗ್ಗಕ್ಕೆ ಕೆಡವಿದ ಅಕ್ಷರ್

ಫ್ಲೋರಿಡಾದಲ್ಲಿ ನಡೆದ ಪಂದ್ಯದಲ್ಲಿ ಭಾರತದ ಪರವಾಗಿ ಮೊದಲಿಗೆ ಬೌಲಿಂಗ್ ದಾಳಿಗೆ ಇಳಿದಿದ್ದು ಅಕ್ಷರ್ ಪಟೇಲ್. ತಮ್ಮ ಮೊದಲ ಓವರ್‌ನಲ್ಲಿಯೇ ಅಕ್ಷರ್ ಪರಾಕ್ರಮ ತೋರಲು ಆರಂಭಿಸಿದ್ದರು. ಆರಂಭಿಕನಾಗಿ ಕಣಕ್ಕಿಳಿದಿದ್ದ ಜೇಸನ್ ಹೋಲ್ಡರ್ ಅವರನ್ನು ಶೂನ್ಯಕ್ಕೆ ಔಟ್ ಮಾಡಿದ ಅಕ್ಷರ್ ನಂತರ ಬ್ರೂಕ್ಸ್ ಹಾಗೂ ಡೆವೋನ್ ಥೋಮಸ್ ವಿಕೆಟ್ ಕೂಡ ಕಬಳಿಸಿದರು. ತಂಡದ ಮೊತ್ತ 33 ಆಗುವಷ್ಟರಲಲಿ ಈ ಮೂವರು ಕೂಡ ಫೆವಿಲಿಯನ್‌ಗೆ ಸೇರಿಕೊಂಡಿದ್ದರು. ನಂತರ ಕುಲ್‌ದೀಪ್ ಯಾದವ್ ಹಾಗೂ ರವಿ ಬಿಷ್ಣೋಯ್ ತಮ್ಮ ಚಾಕಚಕ್ಯತೆ ಪ್ರದರ್ಶಿಸಿ ಮಿಂಚಿದರು.

ಸರಣಿಶ್ರೇಷ್ಠ ಪ್ರಶಸ್ತಿ ಗೆದ್ದ ಅರ್ಷ್‌ದೀಪ್

ಸರಣಿಶ್ರೇಷ್ಠ ಪ್ರಶಸ್ತಿ ಗೆದ್ದ ಅರ್ಷ್‌ದೀಪ್

ಇನ್ನು ಅಂತಿಮ ಪಂದ್ಯದ ಆರಂಭದಲ್ಲಿಯೇ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿ ಮಿಂಚಿದ ಅಕ್ಷರ್ ಪಟೇಲ್ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇನ್ನು ಈ ಸರಣಿಯಲ್ಲಿ ಭಾರತದ ಪರವಾಗಿ ಅಮೋಘ ಬೌಲಿಂಗ್ ಪ್ರದರ್ಶನ ನೀಡಿದ ಯುವ ಬೌಲರ್ ಅರ್ಷ್‌ದೀಪ್ ಸಿಂಗ್ ಸರಣಿ ಶ್ರೇಷ್ಠ ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ಈ ಸರಣಿಯಲ್ಲಿ ಅರ್ಷ್‌ದೀಪ್ ಸಿಂಗ್ 7 ವಿಕೆಟ್ ಸಂಪಾದಿಸಿ ಮಿಂಚಿದ್ದು ಡೆತ್ ಓವರ್‌ನಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದಿದ್ದಾರೆ.

ಪ್ಲೇಯಿಂಗ್ XI ಹೀಗಿತ್ತು

ಪ್ಲೇಯಿಂಗ್ XI ಹೀಗಿತ್ತು

ವೆಸ್ಟ್ ಇಂಡಿಸ್ ಪ್ಲೇಯಿಂಗ್ XI: ಶಮರ್ ಬ್ರೂಕ್ಸ್, ಶಿಮ್ರಾನ್ ಹೆಟ್ಮೆಯರ್, ನಿಕೋಲಸ್ ಪೂರನ್ (ನಾಯಕ), ಡೆವೊನ್ ಥಾಮಸ್ (ವಿಕೆಟ್ ಕೀಪರ್), ಜೇಸನ್ ಹೋಲ್ಡರ್, ಓಡಿಯನ್ ಸ್ಮಿತ್, ಕೀಮೋ ಪಾಲ್, ಡೊಮಿನಿಕ್ ಡ್ರೇಕ್ಸ್, ಒಬೆಡ್ ಮೆಕಾಯ್, ಹೇಡನ್ ವಾಲ್ಷ್, ರೋವ್‌ಮನ್ ಪೊವೆಲ್
ಬೆಂಚ್: ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಅಕೀಲ್ ಹೊಸೈನ್, ಅಲ್ಜಾರಿ ಜೋಸೆಫ್, ರೊಮಾರಿಯೋ ಶೆಫರ್ಡ್

ಭಾರತ ತಂಡ ಪ್ಲೇಯಿಂಗ್ XI: ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ (ನಾಯಕ), ದೀಪಕ್ ಹೂಡಾ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅವೇಶ್ ಖಾನ್, ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್
ಬೆಂಚ್: ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಭುವನೇಶ್ವರ್ ಕುಮಾರ್, ರವಿಚಂದ್ರನ್ ಅಶ್ವಿನ್, ಹರ್ಷಲ್ ಪಟೇಲ್, ರವೀಂದ್ರ ಜಡೇಜಾ

For Quick Alerts
ALLOW NOTIFICATIONS
For Daily Alerts
Story first published: Monday, August 8, 2022, 13:24 [IST]
Other articles published on Aug 8, 2022

Latest Videos

  + More
  POLLS
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Yes No
  Settings X