For Quick Alerts
ALLOW NOTIFICATIONS  
For Daily Alerts
 

ಗಾಯಕ್ವಾಡ್ or ಜೈಸ್ವಾಲ್: ಪೂಜಾರ ಸ್ಥಾನದಲ್ಲಿ ಯಾರಿಗೆ ಅವಕಾಶ?: ತಲೆಕೆಡಿಸಿಕೊಂಡ ಕೋಚ್ ದ್ರಾವಿಡ್!

ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡಿರುವ ಭಾರತ ತಂಡ ಮೊದಲಿಗೆ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದ್ದು ಆರತಣಿಗಾಗಿ ಟೀಮ್ ಇಂಡಿಯಾ ಈಗ ಸಿದ್ಧತೆ ನಡೆಸುತ್ತಿದೆ. ಟೀಮ್ ಇಂಡಿಯಾದ ಬಹುತೇಕ ಆಟಗಾರರು ಕೆರಿಬಿಯನ್ ನಾಡು ತಲುಪಿದ್ದು ಅಭ್ಯಾಸ ಆರಂಭಿಸಿದ್ದಾರೆ. ಈ ಸರಣಿಯ ಆರಂಭಕ್ಕೂ ಮುನ್ನ ಭಾರತ ಎರಡು ದಿನಗಳ ಅಭ್ಯಾಸ ಪಂದ್ಯವೊಂದನ್ನು ಆಡಲಿದ್ದು ಆ ಮೂಲಕ ಸರಣಿಗೆ ಸಿದ್ಧತೆ ನಡೆಸಲಿದೆ.

ಇನ್ನು ಈ ಸರಣಿಗೆ ಪ್ರಕಟಿಸಿರುವ ತಂಡದಲ್ಲಿ ಅನುಭವಿ ಆಟಗಾರ ಚೇತೇಶ್ವರ್ ಪೂಜಾರ ಅವರನ್ನು ಹೊರಗಿಡಲಾಗಿದೆ. ಹೀಗಾಗಿ ಯುವ ಆಟಗಾರರಿಗೆ ತಂಡದಲ್ಲಿ ಅವಕಾಶ ದೊರೆತಿದ್ದು ಯಶಸ್ವಿ ಜೈಸ್ವಾಲ್ ಹಾಗೂ ಋತುರಾಜ್ ಗಾಯಕ್ವಾಡ್ ಭಾರತ ತಂಡದಲ್ಲಿ ಮೊದಲ ಬಾರಿಗೆ ಅವಕಾಶ ಪಡೆದುಕೊಂಡಿದ್ದಾರೆ. ಇದೀಗ ಪೂಜಾರ ಅವರ ಸ್ಥಾನದಲ್ಲಿ ಈ ಇಬ್ಬರ ಪೈಕಿ ಯಾರಿಗೆ ಅವಕಾಶ ದೊರೆಯಲಿದೆ ಎಂಬುದು ಕುತೂಹಲ ಮೂಡಿಸಿದ್ದು ಕೋಚ್ ದ್ರಾವಿಡ್ ಹಾಗೂ ನಾಯಕ ರೋಹಿತ್ ಶರ್ಮಾ ಈ ನಿಟ್ಟಿನಲ್ಲಿ ಯಾವ ನಿಲುವು ತೆಗೆದುಕೊಳ್ಳಲಿದ್ದಾರೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

Ind vs WI: Gaikwad or Jaiswal? who will replace Pujara in 1st Test against West Indies

ಟೀಮ್ ಇಂಡಿಉಆದ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಶುಬ್ಮನ್ ಗಿಲ್ ಕಣಕ್ಕಿಳಿದರೆ ನಾಳ್ಕನೇ ಕ್ರಮಾಂಖದಲ್ಲಿ ವಿರಾಟ್ ಕೊಹ್ಲಿ ಆಡುವುದು ಸ್ಪಷ್ಟ. ಹೀಗಾಗಿ ಅನುಭವಿ ಪೂಜಾರ ಸ್ಥಾನದಲ್ಲಿ ಕಣಕ್ಕಿಳಿಯಲು ಯಶಸ್ವಿ ಜೈಸ್ವಾಲ್ ಹಾಗೂ ಋತುರಾಜ್ ಗಾಯಕ್ವಾಡ್ ಇಬ್ಬರು ಕುಡ ಅರ್ಹರಾಗಿದ್ದು ಯಾರು ಅವಕಾಶ ಗಿಟ್ಟಿಸಿಕೊಂಡು ಆ ಜವಾಬ್ಧಾರಿಯನ್ನು ಸಮರ್ಥವಾಗಿ ನಿಭಾಯಿಸಲಿದ್ದಾರೆ ಎಂಬುದು ಕಾದು ನೋಡಬೇಕಿದೆ.

ಜುಲೈ 12ರಿಂದ ಆರಂಭವಾಗಲಿರುವ ಮೊದಲ ಟೆಸ್ಟ್ ಪಂದ್ಯದ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದುಕೊಳ್ಳಲು ಈ ಇಬ್ಬರು ಆಟಗಾರರು ಕೂಡ ಕಾತರರಾಗಿದ್ದಾರೆ. ಪ್ರಥಮದರ್ಜೆ ಕ್ರಿಕೆಟ್ನಲ್ಲಿ ಈ ಇಬ್ಬರು ಆಟಗಾರರು ಕೂಡ ಉತ್ತಮ ಪ್ರದರ್ಶನ ನಿಡಿ ಗಮನಸೆಳೆದಿದ್ದು ಐಪಿಎಲ್‌ನಲ್ಲಿಯೂ ತಮ್ಮ ಸ್ಥಿರ ಪ್ರದರ್ಶನ ನೀಡಿ ಎಲ್ಲರ ಗಮನಸೆಳೆದಿದ್ದರು. ಹೀಗಾಗಿ ಈ ಇಬ್ಬರನ್ನು ಒಬ್ಬ ಆಟಗಾರನನ್ನು ಪೂಜಾರ ಅವರಂಥಾ ಆಟಗಾರನ ಸ್ಥಾನಕ್ಕೆ ಆಯ್ಕೆ ಮಾಡುವುದು ಕೋಚ್ ದ್ರಾವಿಡ್‌ಗೆ ನಿಜಕ್ಕೂ ಸವಾಲಿನ ಕೆಲಸವಾಗಲಿದೆ.

ಇಬ್ಬರು ಆಟಗಾರರು ಕೂಡ ದೇಶೀಯ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಅದರಲ್ಲೂ 21ರ ಹರೆಯದ ಯಶಸ್ವಿ ಜೈಸ್ವಾಲ್ ದೇಶೀಯ ಕ್ರಿಕೆಟ್‌ನಲ್ಲಿ ಅಮೋಘ ಅಂಕಿಅಂಶಗಳನ್ನು ಹೊಂದಿದ್ದು ಅವರಿಗೆ ಅವಕಾಶ ದೊರೆಯಲಿದೆ ಎಂಬುದು ಕೆಲ ಕ್ರಿಕೆಟ್ ಅಭಿಮಾನಿಗಳ ವಾದವಾಗಿದೆ. ಇನ್ನು ಋತುರಾಜ್ ಗಾಯಕ್ವಾಡ್ ಅವರ ಬ್ಯಾಟಿಂಗ್ ಕೌಶಲ್ಯ ಅದ್ಭುತವಾಗಿದ್ದು ಟೆಸ್ಟ್ ಮಾದರಿಯಲ್ಲಿಯೂ ಮಿಂಚುವ ವಿಶ್ವಾಸ ಮೂಡಿಸಿದ್ದಾರೆ.

ಇನ್ನು ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ವಿರಾಟ್ ಕೊಹ್ಲಿ ಹಾಗೂ ಅಜಿಂಕ್ಯಾ ರಹಾನೆ ನಾಲ್ಕು ಹಾಗೂ ಐದನೇ ಕ್ರಮಾಂಖದ ಜವಾಬ್ಧಾರಿ ವಹಿಸಿಕೊಳ್ಳಳಿದ್ದಾರೆ. ಅಜಿಂಕ್ಯಾ ರಹಾನೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ತಂಡಕ್ಕೆ ಅದ್ಭುತ ಕಮ್‌ಬ್ಯಾಕ್ ಮಾಡಿದ್ದು ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿಯೂ ಮಿಂಚುವ ವಿಶ್ವಾಸ ಮೂಡಿಸಿದ್ದಾರೆ. ಇನ್ನು ಈ ಸರಣಿಯಲ್ಲಿ ರಹಾನೆ ತಂಡದ ಉಪನಾಯಕನ ಜವಾಬ್ಧಾರಿಯನ್ನು ಕೂಡ ನಿರ್ವಹಿಸಲಿದ್ದಾರೆ ಎಂಬುದು ಗಮನಾರ್ಹ.

ಟೀಮ್ ಇಂಡಿಯಾ ಟೆಸ್ಟ್ ತಂಡ ಹೀಗಿದೆ
ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ.

Story first published: Tuesday, July 4, 2023, 11:00 [IST]
Other articles published on Jul 4, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+