Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs WI: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ; ರೋಹಿತ್, ಕೊಹ್ಲಿಗಿಲ್ಲ ಸ್ಥಾನ

ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಬುಧವಾರ, ಜುಲೈ 5ರಂದು ಭಾರತ ತಂಡವನ್ನು ಪ್ರಕಟಿಸಿದೆ.

ಭಾರತ ಟಿ20 ತಂಡಕ್ಕೆ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ನಾಯಕರಾಗಿದ್ದು, ಅನುಭವಿ ಹಾಗೂ ಖಾಯಂ ನಾಯಕ ರೋಹಿತ್ ಶರ್ಮಾ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.

IND vs WI T20 Series

ಯುವ ಬ್ಯಾಟರ್‌ಗಳಾದ ಯಶಸ್ವಿ ಜೈಸ್ವಾಲ್ ಮತ್ತು ತಿಲಕ್ ವರ್ಮಾ ಅವರು ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. 5 ಪಂದ್ಯಗಳ ಟಿ20 ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಿದರೆ, ಸೂರ್ಯಕುಮಾರ್ ಯಾದವ್ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ.

ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್ ಕೂಡ ಭಾರತದ ಟಿ20 ತಂಡಕ್ಕೆ ವಾಪಸಾತಿ ಮಾಡಿದ್ದಾರೆ. ಮಂಗಳವಾರದಂದು ಬಿಸಿಸಿಐನ ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನಕ್ಕೇರಿದ ಅಜಿತ್ ಅಗರ್ಕರ್ ನೇತೃತ್ವದಲ್ಲಿ ಆಯ್ಕೆಯಾದ ಮೊದಲ ತಂಡ ಇದಾಗಿದೆ.

IND vs WI: Hardik Pandya-led Team India Squad Announced For T20 Series Against West Indies

ಯಶಸ್ವಿ ಜೈಸ್ವಾಲ್ ಹೊರತಾಗಿ, ಇಶಾನ್ ಕಿಶನ್ ಮತ್ತು ಶುಭ್ಮನ್ ಗಿಲ್ ತಂಡದ ಇತರ ಆರಂಭಿಕ ಆಟಗಾರರಾಗಿದ್ದಾರೆ. ಇಶಾನ್ ಕಿಶನ್ ಮತ್ತು ಸಂಜು ಸ್ಯಾಮ್ಸನ್ ವಿಕೆಟ್ ಕೀಪಿಂಗ್ ಆಯ್ಕೆಯಾಗಿದ್ದಾರೆ. ಸೂರ್ಯಕುಮಾರ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯ ಭಾರತ ತಂಡದಲ್ಲಿರುವ ಇಬ್ಬರು ಹಿರಿಯ ಆಟಗಾರರಾಗಿದ್ದಾರೆ.

ಆಯ್ಕೆ ಸಮಿತಿಯು ನಾಲ್ವರು ವೇಗಿಗಳಾದ ಅರ್ಷ್‌ದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್ ಮತ್ತು ನಾಲ್ವರು ಸ್ಪಿನ್ನರ್‌ಗಳಾದ ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ರವಿ ಬಿಷ್ಣೋಯ್ ಅವರಿಗೆ ಮಣೆ ಹಾಕಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಭಾರತ ಟಿ20 ತಂಡದ ಆಯ್ಕೆಗೆ ಮುನ್ನ ಕೋಲ್ಕತ್ತಾ ನೈಟ್ ರೈಡರ್ಸ್ ಸ್ಫೋಟಕ ಬ್ಯಾಟ್ಸ್‌ಮನ್ ರಿಂಕು ಸಿಂಗ್ ಅವರ ಹೆಸರು ಚಾಲ್ತಿಯಲ್ಲಿತ್ತು. ಆದರೆ ಅವರನ್ನು ಆಯ್ಕೆ ಮಾಡಲಾಗಿಲ್ಲ.

IND vs WI: Hardik Pandya-led Team India Squad Announced For T20 Series Against West Indies

"ಹಿರಿಯ ಪುರುಷರ ಆಯ್ಕೆ ಸಮಿತಿಯು ವೆಸ್ಟ್ ಇಂಡೀಸ್ ಮತ್ತು ಯುಎಸ್ಎಯ ಫ್ಲೋರಿಡಾದಲ್ಲಿ ನಡೆಯಲಿರುವ ಐದು ಪಂದ್ಯಗಳ ಟಿ20 ಸರಣಿಗೆ ಭಾರತ ತಂಡವನ್ನು ಬುಧವಾರ ಆಯ್ಕೆ ಮಾಡಿದೆ," ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ

ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯ ಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.

Story first published: Wednesday, July 5, 2023, 21:31 [IST]
Other articles published on Jul 5, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+