ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs WI: ಮುಂದುವರೆದ ಸೋಲಿಲ್ಲದ ಸರದಾರ ರೋಹಿತ್ ಪಾರುಪತ್ಯ; ಮತ್ತೊಂದು ಸರಣಿ ಗೆದ್ದ ಭಾರತ

IND vs WI: India beat West Indies by 59 runs in 4th T20 and clinched the series

ವೆಸ್ಟ್ ಇಂಡೀಸ್ ಪ್ರವಾಸವನ್ನು ಕೈಗೊಂಡು ಕೆರಿಬಿಯನ್ನರ ವಿರುದ್ಧದ ಏಕದಿನ ಸರಣಿಯಲ್ಲಿ ವೈಟ್ ವಾಶ್ ಸಾಧನೆ ಮಾಡಿದ್ದ ಟೀಮ್ ಇಂಡಿಯಾ ಇದೀಗ ವಿಂಡೀಸ್ ವಿರುದ್ಧದ ಟಿ ಟ್ವೆಂಟಿ ಸರಣಿಯನ್ನೂ ಸಹ ವಶಪಡಿಸಿಕೊಂಡಿದೆ. ಉಭಯ ತಂಡಗಳ ನಡುವೆ ಆಯೋಜನೆಯಾಗಿರುವ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯ ಪೈಕಿ ವೆಸ್ಟ್ ಇಂಡೀಸ್ ನೆಲದಲ್ಲಿ ನಡೆದ ಮೊದಲ 3 ಪಂದ್ಯಗಳಲ್ಲಿ 2 ಪಂದ್ಯಗಳನ್ನು ಗೆದ್ದು ಸರಣಿಯಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದ ಟೀಮ್ ಇಂಡಿಯಾ ನಿನ್ನೆ ( ಆಗಸ್ಟ್ 6 ) ಫ್ಲೋರಿಡಾದ ಸೆಂಟ್ರಲ್ ಬ್ರೊವಾರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ಟರ್ಫ್ ಗ್ರೌಂಡ್ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಟಿ ಟ್ವೆಂಟಿ ಪಂದ್ಯದಲ್ಲಿ 59 ರನ್‌ಗಳ ಬೃಹತ್ ಗೆಲುವನ್ನು ಸಾಧಿಸುವುದರ ಮೂಲಕ ಸರಣಿಯಲ್ಲಿ 3-1 ಅಂತರದಲ್ಲಿ ಮುನ್ನಡೆ ಸಾಧಿಸುವುದರ ಜತೆಗೆ ಸರಣಿಯನ್ನು ವಶಪಡಿಸಿಕೊಂಡಿದೆ. ಈ ಸರಣಿ ಗೆಲ್ಲುವುದರ ಮೂಲಕ ಟೀಮ್ ಇಂಡಿಯಾ ರೋಹಿತ್ ಶರ್ಮಾ ಪೂರ್ಣವಧಿ ನಾಯಕನಾಗಿ ಆಯ್ಕೆಯಾದ ನಂತರ ರೋಹಿತ್ ನಾಯಕತ್ವದಡಿಯಲ್ಲಿ ನಡೆದ ಎಲ್ಲಾ ಎಂಟು ಸರಣಿಗಳನ್ನು ಗೆದ್ದಂತಾಗಿದೆ. ಈ ಮೂಲಕ ರೋಹಿತ್ ಶರ್ಮಾ ಪೂರ್ಣಾವಧಿ ನಾಯಕನಾಗಿ ತಮ್ಮ ಗೆಲುವಿನ ನಾಗಲೋಟವನ್ನು ಮುಂದುವರೆಸಿದ್ದು, ಒಂದೇ ಒಂದು ಸರಣಿಯಲ್ಲೂ ಸೋಲದೇ ಸೋಲಿಲ್ಲದ ಸರದಾರನಾಗಿ ಮಿಂಚುತ್ತಿದ್ದಾರೆ.

CWG 2022: ಅಬ್ಬರಿಸಿದ ಸ್ಮೃತಿ ಮಂಧಾನ; ಕಾಮನ್‍ವೆಲ್ತ್ ಕ್ರಿಕೆಟ್‍ನಲ್ಲಿ ಫೈನಲ್‌ ಪ್ರವೇಶಿಸಿದ ಭಾರತ ವನಿತೆಯರುCWG 2022: ಅಬ್ಬರಿಸಿದ ಸ್ಮೃತಿ ಮಂಧಾನ; ಕಾಮನ್‍ವೆಲ್ತ್ ಕ್ರಿಕೆಟ್‍ನಲ್ಲಿ ಫೈನಲ್‌ ಪ್ರವೇಶಿಸಿದ ಭಾರತ ವನಿತೆಯರು

ಈ ಪಂದ್ಯದಲ್ಲಿ ಟಾಸ್ ಗೆದ್ದಿದ್ದ ವೆಸ್ಟ್ ಇಂಡೀಸ್‌ ತಂಡದ ನಾಯಕ ನಿಕೋಲಸ್ ಪೂರನ್ ಫೀಲ್ಡಿಂಗ್ ಆಯ್ದುಕೊಳ್ಳುವುದರ ಮೂಲಕ ಭಾರತ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಉತ್ತಮ ಬ್ಯಾಟಿಂಗ್‌ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 191 ರನ್ ಕಲೆಹಾಕಿ ಎದುರಾಳಿ ವೆಸ್ಟ್ ಇಂಡೀಸ್ ತಂಡಕ್ಕೆ 192 ರನ್‌ಗಳ ಗುರಿಯನ್ನು ನೀಡಿತ್ತು. ಆದರೆ ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾದ ವೆಸ್ಟ್ ಇಂಡೀಸ್ 19.1 ಓವರ್‌ಗಳಲ್ಲಿ 132 ರನ್‌ಗಳಿಗೆ ಆಲ್ ಔಟ್ ಆಯಿತು. ಈ ಮೂಲಕ ಟೀಮ್ ಇಂಡಿಯಾ 59 ರನ್‌ಗಳ ಜಯವನ್ನು ಸಾಧಿಸಿದೆ.

ಟೀಮ್ ಇಂಡಿಯಾ ಇನ್ನಿಂಗ್ಸ್

ಟೀಮ್ ಇಂಡಿಯಾ ಇನ್ನಿಂಗ್ಸ್

ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ 53 ರನ್‌ಗಳ ಜತೆಯಾಟವಾಡಿ ತಂಡಕ್ಕೆ ಉತ್ತಮ ಆರಂಭವನ್ನು ಕಟ್ಟಿಕೊಟ್ಟರು. ರೋಹಿತ್ ಶರ್ಮಾ 16 ಎಸೆತಗಳಲ್ಲಿ 33 ರನ್ ಕಲೆಹಾಕಿದರೆ, ಸೂರ್ಯಕುಮಾರ್ ಯಾದವ್ 24 ರನ್ ಬಾರಿಸಿದರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದೀಪಕ್ ಹೂಡಾ 21 ರನ್, ರಿಷಭ್ ಪಂತ್ 44 ರನ್ ಮತ್ತು ದಿನೇಶ್ ಕಾರ್ತಿಕ್ 6 ರನ್ ಕಲೆ ಹಾಕಿದರು. ಅಂತಿಮವಾಗಿ ಸಂಜು ಸ್ಯಾಮ್ಸನ್ ಅಜೇಯ 30 ರನ್ ಬಾರಿಸಿದರೆ ಅಕ್ಷರ್ ಪಟೇಲ್ 8 ಎಸೆತಗಳಲ್ಲಿ ಅಜೇಯ 20 ರನ್ ಚಚ್ಚಿದರು.

ವೆಸ್ಟ್ ಇಂಡೀಸ್‌ ಇನ್ನಿಂಗ್ಸ್‌

ವೆಸ್ಟ್ ಇಂಡೀಸ್‌ ಇನ್ನಿಂಗ್ಸ್‌

ಟೀಮ್ ಇಂಡಿಯಾ ನೀಡಿದ ಕಠಿಣ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಬ್ರೆಂಡನ್ ಕಿಂಗ್ 13 ರನ್ ಗಳಿಸಿದರೆ, ಕೈಲ್ ಮೇಯರ್ಸ್ 14 ರನ್ ಕಲೆ ಹಾಕಿದರು. ಇನ್ನುಳಿದಂತೆ ಡೆವಾನ್ ಥಾಮಸ್ 1 ರನ್, ನಾಯಕ ನಿಕೋಲಸ್ ಪೂರನ್ 24 ರನ್, ರೋವ್ಮನ್ ಪೊವೆಲ್ 24 ರನ್, ಶಿಮ್ರಾನ್ ಹೆಟ್ಮಾಯೆರ್ 19 ರನ್, ಜೇಸನ್ ಹೋಲ್ಡರ್ 13 ರನ್, ಅಖೈಲ್ ಹೊಸೈನ್ 3 ರನ್, ಡೊಮಿನಿಕ್ ಡ್ರೇಕ್ಸ್ 5 ರನ್, ಒಬೆಡ್ ಮೆಕ್ ಕಾಯ್ 2 ರನ್ ಮತ್ತು ಅಲ್ಜಾರಿ ಜೋಸೆಫ್ ಅಜೇಯ 6 ರನ್ ಬಾರಿಸಿದರು.

ಭಾರತದ ಪರ ಅರ್ಷದೀಪ್ ಸಿಂಗ್ 3 ವಿಕೆಟ್ ಪಡೆದರೆ, ರವಿ ಬಿಷ್ಣೋಯಿ, ಅವೇಶ್ ಖಾನ್ ಮತ್ತು ಅಕ್ಷರ್ ಪಟೇಲ್ ತಲಾ 2 ವಿಕೆಟ್‍ಗಳನ್ನು ಪಡೆದರು.

ಆಡುವ ಬಳಗಗಳು

ಆಡುವ ಬಳಗಗಳು

ಭಾರತ ಆಡುವ ಬಳಗ

ರೋಹಿತ್ ಶರ್ಮಾ(ನಾಯಕ), ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್, ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಅವೇಶ್ ಖಾನ್, ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್

ವೆಸ್ಟ್ ಇಂಡೀಸ್ ಆಡುವ ಬಳಗ

ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ನಿಕೋಲಸ್ ಪೂರನ್ (ನಾಯಕ), ರೋವ್‌ಮನ್ ಪೊವೆಲ್, ಶಿಮ್ರಾನ್ ಹೆಟ್ಮೆಯರ್, ಡೆವೊನ್ ಥಾಮಸ್ (ವಿಕೆಟ್ ಕೀಪರ್), ಜೇಸನ್ ಹೋಲ್ಡರ್, ಡೊಮಿನಿಕ್ ಡ್ರೇಕ್ಸ್, ಅಕೆಲ್ ಹೋಸೇನ್, ಅಲ್ಜಾರಿ ಜೋಸೆಫ್, ಒಬೆಡ್ ಮೆಕಾಯ್

Story first published: Sunday, August 7, 2022, 9:01 [IST]
Other articles published on Aug 7, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X