ರೋಚಕ ಸೆಣೆಸಾಟದಲ್ಲಿ ಭಾರತಕ್ಕೆ ಮತ್ತೊಂದು ಸೋಲುಣಿಸಿದ ವಿಂಡೀಸ್
ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿಯೂ ಟೀಮ್ ಇಂಡಿಯಾ ಸೋಲು ಅನುಭವಿಸಿದೆ. ರೋಚಕವಾಗಿ ನಡೆದ ಕಾದಾಟದಲ್ಲಿ ಟೀಮ್ ಇಂಡಿಯಾ ಕೊನೆಯ ಹಂತದಲ್ಲಿ ಗೆಲುವಿನ ವಿಶ್ವಾಸ ಮೂಡಿಸಿತಾದರೂ ಗೆಲುವಿನ ಗೆರೆ ದಾಟಲು ಸಾಧ್ಯವಾಗಲಿಲ್ಲ. ವೆಸ್ಟ್ ಇಂಡಿಸ್ 2 ವಿಕೆಟ್‌ಗಳ ಅಂತರದಿಂದ ಪಂದ್ಯವನ್ನು ಗೆದ್ದುಕೊಂಡಿದೆ. ಈ ಮೂಲಕ ಭಾರತ ಈ ಸರಣಿಯಲ್ಲಿ 0-2 ಅಂತರದಿಂದ ಹಿಂದುಳಿದಿದೆ.
ಈ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿದ ಭಾರತ 153 ರನ್‌ಗಳ ಗುರಿಯನ್ನು ನಿಗದಿಪಡಿಸಿತು. ಈ ಗುರಿಯನ್ನು ಬೆನ್ನಟ್ಟಿದ ವಿಂಡೀಸ್ ತಂಡ 8 ವಿಕೆಟ್‌ಗಳನ್ನು ಕಳೆದುಕೊಂಡು ಗೆಲುವಿನ ಗುರಿ ತಲುಪಿದ್ದು ಇನ್ನೂ 7 ಎಸೆತಗಳು ಬಾಕಿಯಿರುವಂತೆಯೇ ಗೆದ್ದುಬೀಗಿದೆ. ಈ ಮೂಲಕ ಸರಣಿಯಲ್ಲಿ ಮುನ್ನಡೆ ಸಾಧಿಸಿತು.

ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ನಡೆಸಿದ ಭಾರತ ತಂಡದ ಪರವಾಗಿ ಶುಬ್ಮನ್ ಗಿಲ್ ಮತ್ತೊಂದು ನೀರಸ ಪ್ರದರ್ಶನ ನೀಡಿದ್ದಾರೆ. ಗಿಲ್ ಈ ಪಂದ್ಯದಲ್ಲಿ ಕೇವಲ 7 ರನ್‌ಗಳಿಗೆ ವಿಕೆಟ್ ಕಳೆದುಕೊಂಡರು. ಅದಾದ ಬಳಿಕ ಸೂರ್ಯಕುಮಾರ್ ಯಾದವ್ ರನೌಟ್ ಆಗುವ ಮೂಲಕ ಮತ್ತೊಂದು ಆಘಾತ ನೀಡಿದರು. ನಂತರ ಇಶಾನ್ ಕಿಶನ್ ಹಾಗೂ ತಿಲಕ್ ವರ್ಮಾ ಜವಾಬ್ಧಾರಿಯುತ ಜೊತೆಯಾಟವೊಂದನ್ನು ನೀಡಿ ಗಮನಸೆಳೆದರು. ಆದರೆ ಇಶಾನ್ 27 ರನ್‌ಗಳಿಗೆ ತಮ್ಮ ವಿಕೆಟ್ ಕಳೆದುಕೊಂಡರು.
ನಂತರ ಸಂಜು ಸ್ಯಾಮ್ಸನ್ ಮುನ್ನುಗ್ಗು ಬಾರಿಸಲು ಹೋಗಿ 7 ರನ್‌ಗೆ ಸ್ಟಂಪ್ ಔಟ್ ಆದರು. ಇನ್ನು ತಿಲಕ್ ವರ್ಮಾ ಈ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದು ಜವಾಬ್ಧಾರಿಯುತ ಆಟ ನೀಡಿದರು. 41 ಎಸೆತ ಎದುರಿಸಿದ ತಿಲಕ್ 51 ರನ್ ಬಾರಿಸಿ ತಮ್ಮ ಚೊಚ್ಚಲ ಅರ್ಧ ಶತಕ ಸಿಡಿಸಿ ಗಮನಸೆಳೆದರು. ಇನ್ನು ನಾಯಕ ಹಾರ್ದಿಕ್ ಪಾಂಡ್ಯ ಅವರ ಬ್ಯಾಟ್‌ನಿಮದ 24 ರನ್‌ಗಳ ಕೊಡುಗೆ ಬಂದಿತು. ಅಂತಿಮವಾಗಿ ಭಾರತ 7 ವಿಕೆಟ್ ಕಳೆದುಕೊಂಡು 152 ರನ್‌ಗಳನ್ನು ಗಳಿಸುವಲ್ಲಿ ಯಶಸ್ವಿಯಾಯಿತು.
ಈ ಗುರಿಯನ್ನು ಬೆನ್ನಟ್ಟಿದ ವೆಸ್ಟ್ ಇಂಡೀಸ್ ತಂಡ ಕೂಡ ಕಳಪೆ ಆರಂಭವನ್ನು ಪಡೆಯಿತಾದರೂ ನಿಕೋಲಸ್ ಪೂರನ್ ಭರ್ಜರಿ ಪ್ರದರ್ಶನ ನೀಡುವ ಮೂಲಕ ತಂಡಕ್ಕೆ ಆಸರೆಯಾದರು. ಅಬರಿಗೆ ನಾಯಕ ರೋವ್ಮನ್ ಪೋವೆಲ್ ಹಾಗೂ ಶಿಮ್ರಾನ್ ಹೆಟ್ಮೇಯರ್ ಉತ್ತಮವಾಗಿ ಸಾಥ್ ನಿಡಿದರು. ಒಂದು ಹಂತದಲ್ಲಿ ಸುಲಭವಾಗಿ ಗೆಲುವಿನ ಸ್ಥಿತಿಯಲ್ಲಿದ್ದ ವೆಸ್ಟ್ ಇಂಡೀಸ್ ತಂಡ 125 ರನ್‌ಗಳಿಸಿದ್ದಾಗ ನಿಕೋಲಸ್ ಪೂರನ್ ವಿಕೆಟ್ ಕಳೆದುಕೊಂಡ ಬಳಿಕ ನಾಟಕೀಯ ಕುಸಿತ ಕಂಡಿತು. 126 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡಿದ್ದ ವಿಂಡೀಸ್ 129 ರನ್ ಗಳಿಸುವಷ್ಟರಲ್ಲಿ 8 ವಿಕೆಟ್‌ಗಳನ್ನು ಕಳೆದುಕೊಂಡಿತ್ತು.
ಈ ಹಂತದಲ್ಲಿ ಟೀಮ್ ಇಂಡಿಯಾಗೆ ಮತ್ತೆ ಗೆಲುವಿನ ವಿಶ್ವಾಸ ಮೂಡಿತ್ತು. ಆದರೆ ಅಕೀಲ್ ಹುಸೇನ್ ಹಾಗೂ ಅಲ್ಜಾರಿ ಜೋಸೆಪ್ ಅದಕ್ಕೆ ಅವಕಾಶ ನೀಡಲಿಲ್ಲ. ಅಗತ್ಯವಿದ್ದ 24 ರನ್‌ಗಳನ್ನು ವಿಕೆಟ್ ಕಳೆದುಕೊಳ್ಳದೆಯೇ ಇನ್ನೂ 7 ಎಸೆತಗಳು ಬಾಕಿಯಿರುವಂತೆ ವಿಂಡೀಸ್ ಈ ಪಂದ್ಯದಲ್ಲಿ ಗೆದ್ದು ಬೀಗಿದೆ. ಈ ಮೂಲಕ ಐದು ಪಂದ್ಯಗಳ ಸರಣಿಯಲ್ಲಿ ವೆಸ್ಟ್ ಇಂಡೀಸ್ ತಂಡ 2-0 ಅಂತರದ ಮುನ್ನಡೆ ಪಡೆದುಕೊಂಡಿದೆ.
ವೆಸ್ಟ್ ಇಂಡೀಸ್ ಆಡುವ ಬಳಗ: ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಜಾನ್ಸನ್ ಚಾರ್ಲ್ಸ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ರೋವ್ಮನ್ ಪೊವೆಲ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ರೊಮಾರಿಯೋ ಶೆಫರ್ಡ್, ಜೇಸನ್ ಹೋಲ್ಡರ್, ಅಕೇಲ್ ಹೋಸೇನ್, ಅಲ್ಜಾರಿ ಜೋಸೆಫ್, ಓಬೆಡ್ ಮೆಕಾಯ್
ಬೆಂಚ್: ಶಾಯ್ ಹೋಪ್, ರೋಸ್ಟನ್ ಚೇಸ್, ಒಶಾನೆ ಥಾಮಸ್, ಓಡಿಯನ್ ಸ್ಮಿತ್
ಟೀಮ್ ಇಂಡಿಯಾ ಆಡುವ ಬಳಗ: ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಾಲ್, ಮುಖೇಶ್ ಕುಮಾರ್, ರವಿ ಬಿಷ್ಣೋಯ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications