Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ವೆಸ್ಟ್ ಇಂಡೀಸ್ ಪ್ರವಾಸದ ಸಂಪೂರ್ಣ ವೇಳಾಪಟ್ಟಿ ಮತ್ತು ಪ್ರಕಟವಾಗಿರುವ ಭಾರತ ತಂಡದ ಬಗ್ಗೆ ತಿಳಿಯಿರಿ

IND vs WI: India tour of West Indies 2022 time table and squad details in Kannada

ಸದ್ಯ ವೆಸ್ಟ್ ಇಂಡೀಸ್ ತವರು ನೆಲದಲ್ಲಿ ಪ್ರವಾಸಿ ಬಾಂಗ್ಲಾದೇಶದ ವಿರುದ್ಧ ಸೆಣಸಾಟವನ್ನು ನಡೆಸುತ್ತಿದ್ದರೆ ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡು ಆಂಗ್ಲರ ವಿರುದ್ದ ಕಣಕ್ಕಿಳಿದಿದೆ. ಹೀಗೆ ಈ ಸರಣಿಗಳು ಮುಕ್ತಾಯಗೊಂಡ ನಂತರ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಪರಸ್ಪರ ಸೀಮಿತ ಓವರ್ ಸರಣಿಗಳಲ್ಲಿ ಮುಖಾಮುಖಿಯಾಗಲಿವೆ.

ಜುಲೈ 22ರಿಂದ ಆಗಸ್ಟ್ 7ರವರೆಗೆ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವೆ 3 ಪಂದ್ಯಗಳ ಏಕದಿನ ಸರಣಿ ಹಾಗೂ 5 ಪಂದ್ಯಗಳ ಟಿ ಟ್ವೆಂಟಿ ಸರಣಿ ಜರುಗಲಿವೆ. ಈ ಸರಣಿಗಳಿಗಾಗಿ ಈಗಾಗಲೇ ಬಿಸಿಸಿಐ ಟೀಮ್ ಇಂಡಿಯಾವನ್ನು ಪ್ರಕಟಿಸಿದ್ದು, ಪ್ರಸ್ತುತ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಸೆಣಸಾಟ ಮುಕ್ತಾಯಗೊಂಡ ನಂತರ ಟೀಮ್ ಇಂಡಿಯಾ ಕೆರಿಬಿಯನ್ ನಾಡಿಗೆ ಹಾರಲಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಶಿಖರ್ ಧವನ್ ನಾಯಕತ್ವದ ತಂಡ ಹಾಗೂ ಟಿ ಟ್ವೆಂಟಿ ಸರಣಿಗೆ ರೋಹಿತ್ ಶರ್ಮಾ ನಾಯಕತ್ವದ ತಂಡವನ್ನು ಪ್ರಕಟಿಸಿರುವ ಬಿಸಿಸಿಐ ತಂಡದಲ್ಲಿ ಕೆಲ ಪ್ರಮುಖ ಬದಲಾವಣೆಗಳನ್ನೂ ಕೂಡ ಮಾಡಿದೆ. ಹೀಗೆ 2 ಪ್ರತ್ಯೇಕ ಭಾರತ ತಂಡಗಳು ವೆಸ್ಟ್ ಇಂಡೀಸ್ ಪ್ರವಾಸವನ್ನು ಕೈಗೊಳ್ಳಲಿದ್ದು, ಈ ಪ್ರವಾಸದಲ್ಲಿ ನಡೆಯಲಿರುವ ಎಲ್ಲಾ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಹಾಗೂ ಪ್ರಕಟವಾಗಿರುವ ತಂಡಗಳ ಕುರಿತಾದ ವಿವರ ಮುಂದೆ ಇದೆ ಓದಿ.

ವೆಸ್ಟ್ ಇಂಡೀಸ್ ಪ್ರವಾಸದ ಸಂಪೂರ್ಣ ವೇಳಾಪಟ್ಟಿ

ವೆಸ್ಟ್ ಇಂಡೀಸ್ ಪ್ರವಾಸದ ಸಂಪೂರ್ಣ ವೇಳಾಪಟ್ಟಿ

ಭಾರತ vs ವೆಸ್ಟ್ ಇಂಡೀಸ್‌ ಏಕದಿನ ಸರಣಿಯ ವೇಳಾಪಟ್ಟಿ

• ಪ್ರಥಮ ಏಕದಿನ ಪಂದ್ಯ ಜುಲೈ 22ರಂದು ಪೋರ್ಟ್ ಆಫ್ ಸ್ಪೇನ್ ನ ಕ್ವೀನ್ಸ್ ಪಾರ್ಕ್ ಓವಲ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

• ದ್ವಿತೀಯ ಏಕದಿನ ಪಂದ್ಯ ಜುಲೈ 24ರಂದು ಪೋರ್ಟ್ ಆಫ್ ಸ್ಪೇನ್ ನ ಕ್ವೀನ್ಸ್ ಪಾರ್ಕ್ ಓವಲ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

• ತೃತೀಯ ಏಕದಿನ ಪಂದ್ಯ ಜುಲೈ 27ರಂದು ಪೋರ್ಟ್ ಆಫ್ ಸ್ಪೇನ್ ನ ಕ್ವೀನ್ಸ್ ಪಾರ್ಕ್ ಓವಲ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ vs ವೆಸ್ಟ್ ಇಂಡೀಸ್‌ ಟಿ20 ಸರಣಿಯ ವೇಳಾಪಟ್ಟಿ

• ಪ್ರಥಮ ಟಿ ಟ್ವೆಂಟಿ ಪಂದ್ಯ ಜುಲೈ 29ರಂದು ಟರೌಬಾದ ಬ್ರಿಯಾನ್ ಲಾರಾ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

• ದ್ವಿತೀಯ ಟಿ ಟ್ವೆಂಟಿ ಪಂದ್ಯ ಆಗಸ್ಟ್ 1ರಂದು ಬಾಸೆಟೆರೆಯ ವಾರ್ನರ್ ಪಾರ್ಕ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

• ಮೂರನೇ ಟಿ ಟ್ವೆಂಟಿ ಪಂದ್ಯ ಆಗಸ್ಟ್ 2ರಂದು ಬಾಸೆಟೆರೆಯ ವಾರ್ನರ್ ಪಾರ್ಕ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

• ನಾಲ್ಕನೇ ಟಿ ಟ್ವೆಂಟಿ ಪಂದ್ಯ ಆಗಸ್ಟ್ 6ರಂದು ಫ್ಲೋರಿಡಾದ ಸೆಂಟ್ರಲ್ ಬ್ರೊವಾರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯಲಿದೆ.

• ಐದನೇ ಟಿ ಟ್ವೆಂಟಿ ಪಂದ್ಯ ಆಗಸ್ಟ್ 7ರಂದು ಫ್ಲೋರಿಡಾದ ಸೆಂಟ್ರಲ್ ಬ್ರೊವಾರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯಲಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಪ್ರಕಟವಾದ ಭಾರತ ತಂಡ

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಪ್ರಕಟವಾದ ಭಾರತ ತಂಡ

ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್‌), ಸಂಜು ಸ್ಯಾಮ್ಸನ್ ( ವಿಕೆಟ್ ಕೀಪರ್‌ ), ರವೀಂದ್ರ ಜಡೇಜಾ (ಉಪನಾಯಕ), ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.

West Indies ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ | *Cricket | OneIndia Kannada
ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಪ್ರಕಟವಾದ ಭಾರತ ತಂಡ

ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಪ್ರಕಟವಾದ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಇಶನ್ ಕಿಶನ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ಡಿ ಹೂಡಾ, ಎಸ್ ಅಯ್ಯರ್, ಡಿ ಕಾರ್ತಿಕ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

( ಕೆಎಲ್ ರಾಹುಲ್ ಮತ್ತು ಕುಲದೀಪ್ ಯಾದವ್ ಸಂಪೂರ್ಣವಾಗಿ ಫಿಟ್ ಆಗಿದ್ದರೆ ಮಾತ್ರ ಈ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರೆ )

Story first published: Friday, July 15, 2022, 10:09 [IST]
Other articles published on Jul 15, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+