Breaking: IND vs WI: ಮೊದಲ ಏಕದಿನ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ

ಇಂಗ್ಲೆಂಡ್ ಪ್ರವಾಸದಲ್ಲಿ ಟಿ20 ಹಾಗೂ ಏಕದಿನ ಎರಡೂ ಸರಣಿಗಳಲ್ಲಿ ಆಂಗ್ಲರ ವಿರುದ್ಧ ಗೆದ್ದು ಬೀಗಿದ್ದ ಟೀಂ ಇಂಡಿಯಾ ಇದೀಗ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡಿದೆ. ಇಂದಿನಿಂದ ಕೆರಿಬಿಯನ್ನರ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಹಾಗೂ 5 ಪಂದ್ಯಗಳ ಟಿ20 ಸರಣಿಯಲ್ಲಿ ಸೆಣಸಾಟ ನಡೆಸಲಿದೆ.
ಇತ್ತಂಡಗಳ ನಡುವಿನ ಮೊದಲ ಏಕದಿನ ಪಂದ್ಯ ಇಂದು (ಜುಲೈ 22) ಪೋರ್ಟ್ ಆಫ್ ಸ್ಪೇನ್ ನ ಕ್ವೀನ್ಸ್ ಪಾರ್ಕ್ ಓವಲ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ವೆಸ್ಟ್ ಇಂಡೀಸ್ ತಂಡದ ನಾಯಕ ನಿಕೋಲಸ್ ಪೂರನ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ. ಹೀಗಾಗಿ ಶಿಖರ್ ಧವನ್ ನಾಯಕತ್ವದ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ಶಿಖರ್ ಧವನ್ ತಂಡವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ
ಇಂಗ್ಲೆಂಡ್ ಪ್ರವಾಸ ಕೈಗೊಂಡಿದ್ದ ಟೀಂ ಇಂಡಿಯಾದ ಕೆಲ ಪ್ರಮುಖ ಆಟಗಾರರು ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಳಿಂದ ಹೊರಗುಳಿದಿದ್ದಾರೆ. ಏಕದಿನ ಸರಣಿಗೆ ದೀರ್ಘಾವಧಿ ನಾಯಕ ರೋಹಿತ್ ಶರ್ಮಾ ಕೂಡ ವಿಶ್ರಾಂತಿ ಕಾರಣದಿಂದಾಗಿ ಅಲಭ್ಯರಾಗಲಿದ್ದು, ಶಿಖರ್ ಧವನ್ ತಂಡವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ. ಏಕದಿನ ಸರಣಿ ಮುಕ್ತಾಯವಾದ ನಂತರ ರೋಹಿತ್ ಶರ್ಮಾ ತಂಡಕ್ಕೆ ಮರಳಲಿದ್ದು, ಟಿ20 ಸರಣಿಯಲ್ಲಿ ತಂಡವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ.
ರುತುರಾಜ್ ಗಾಯಕ್ವಾಡ್ ಮತ್ತು ಇಶಾನ್ ಕಿಶನ್ ನಡುವೆ ಭಾರತಕ್ಕೆ ಯಾರು ಓಪನಿಂಗ್ ಮಾಡುತ್ತಾರೆ ಎಂದು ಅನೇಕ ಕ್ರಿಕೆಟ್ ಪಂಡಿತರು ಭವಿಷ್ಯ ನುಡಿಯುತ್ತಿದ್ದರೆ, ಟೀಮ್ ಮ್ಯಾನೇಜ್‌ಮೆಂಟ್ ಶುಭಮನ್ ಗಿಲ್ ಅವರನ್ನು ಮುಂದುವರಿಸಲು ನಿರ್ಧರಿಸಿದೆ.

ರವೀಂದ್ರ ಜಡೇಜಾ ಏಕದಿನ ಪಂದ್ಯದಿಂದ ಹೊರಗೆ
ಭಾರತ ತಂಡದ ಉಪನಾಯಕರಾಗಿ ಶ್ರೇಯಸ್ ಅಯ್ಯರ್ ನೇಮಕಗೊಂಡಿದ್ದು, ರವೀಂದ್ರ ಜಡೇಜಾ ಗಾಯದಿಂದಾಗಿ ಮೊದಲ 2 ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಕಣಕ್ಕಿಳಿಯಲಿದ್ದರೆ, ವಿಕೆಟ್ ಕೀಪರ್ ಜವಾಬ್ದಾರಿಯನ್ನು ಸಂಜು ಸ್ಯಾಮ್ಸನ್‌ಗೆ ನೀಡಲಾಗಿದೆ.
ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧ ಮಿಂಚಿದ್ದ ದೀಪಕ್ ಹೂಡಾ ಸ್ಥಾನ ಪಡೆದುಕೊಂಡಿದ್ದಾರೆ. ಆಲ್‌ರೌಂಡರ್ ರೂಪದಲ್ಲಿ ಅಕ್ಷರ್ ಪಟೇಲ್ ಕಾಣಿಸಿಕೊಂಡಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ ಇದ್ದಾರೆ.

ಜೇಸನ್ ಹೋಲ್ಡರ್‌ಗೆ ಕೋವಿಡ್-19 ಪಾಸಿಟಿವ್
ಇನ್ನು ಆತಿಥೇಯ ವೆಸ್ಟ್ ಇಂಡೀಸ್‌ನಲ್ಲಿ ನಿಕೋಲಸ್ ಪೂರನ್ ನಾಯಕನಾಗಿದ್ದು, ಶಾಯ್ ಹೋಪ್ ವಿಕೆಟ್ ಕೀಪರ್ ಜವಾಬ್ದಾರಿ ಹೊತ್ತಿದ್ದಾರೆ. ಇದೇ ವೇಳೆ ಕೋವಿಡ್-19 ಪಾಸಿಟಿವ್ ವರದಿಯಿಂದಾಗಿ ಜೇಸನ್ ಹೋಲ್ಡರ್ ಈ ಪಂದ್ಯವನ್ನು ತಪ್ಪಿಸಿಕೊಂಡಿದ್ದಾರೆ ಎಂದು ನಿಕೋಲಸ್ ಪೂರನ್ ಟಾಸ್‌ನಲ್ಲಿ ದೃಢಪಡಿಸಿದರು. ಉಳಿದಂತೆ ಅಕೆಲ್ ಹೊಸೈನ್, ರೊಮಾರಿಯೋ ಶೆಫರ್ಡ್, ಅಲ್ಜಾರಿ ಜೋಸೆಫ್, ಗುಡಕೇಶ್ ಮೋಟಿ, ಜೇಡನ್ ಸೀಲ್ಸ್ ಸ್ಥಾನ ಪಡೆದಿದ್ದಾರೆ.

ಭಾರತ vs ವೆಸ್ಟ್ ಇಂಡೀಸ್ ಆಡುವ 11ರ ಬಳಗ
ವೆಸ್ಟ್ ಇಂಡೀಸ್: ಶಾಯ್ ಹೋಪ್ (ವಿಕೆಟ್ ಕೀಪರ್), ಬ್ರಾಂಡನ್ ಕಿಂಗ್, ಶಮರ್ ಬ್ರೂಕ್ಸ್, ಕೈಲ್ ಮೇಯರ್ಸ್, ನಿಕೋಲಸ್ ಪೂರನ್ (ನಾಯಕ), ರೋವ್ಮನ್ ಪೊವೆಲ್, ಅಕೆಲ್ ಹೊಸೈನ್, ರೊಮಾರಿಯೋ ಶೆಫರ್ಡ್, ಅಲ್ಜಾರಿ ಜೋಸೆಫ್, ಗುಡಕೇಶ್ ಮೋಟಿ, ಜೇಡನ್ ಸೀಲ್ಸ್
ಭಾರತ: ಶಿಖರ್ ಧವನ್ (ನಾಯಕ), ಶುಭ್‌ಮನ್ ಗಿಲ್, ಶ್ರೇಯಸ್ ಅಯ್ಯರ್ (ಉಪನಾಯಕ), ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ದೀಪಕ್ ಹೂಡಾ, ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications