Breaking: IND vs WI ಮೊದಲ ಟಿ20 ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ

ಟ್ರಿನಿಡಾಡ್‌ನ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿಯಲ್ಲಿ ಐದು ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯದಲ್ಲಿ ಭಾರತವು ವೆಸ್ಟ್ ಇಂಡೀಸ್ ಅನ್ನು ಎದುರಿಸಲಿದೆ. ಶಿಖರ್ ಧವನ್ ನಾಯಕತ್ವದಲ್ಲಿ ಏಕದಿನ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದ ನಂತರ, ಭಾರತ ತಂಡವು ಈಗ ಟಿ20 ಪಂದ್ಯಗಳಲ್ಲಿ ಅದೇ ರೀತಿಯ ಫಲಿತಾಂಶವನ್ನು ನಿರೀಕ್ಷಿಸುತ್ತದೆ.
ಇತ್ತಂಡಗಳ ನಡುವೆ ನಡೆಯುವ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಟ್ರಿನಿಡಾಡ್‌ನ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ನಿಕೋಲಸ್ ಪೂರನ್ ನಾಯಕ ನಿಕೋಲಸ್ ಪೂರನ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ. ಹೀಗಾಗಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.
ಏಕದಿನ ಸರಣಿಗೆ ವಿಶ್ರಾಂತಿ ಪಡೆದಿದ್ದ ಪೂರ್ಣಾವಧಿ ನಾಯಕ ರೋಹಿತ್ ಶರ್ಮಾ, ವಿಕೆಟ್ ಕೀಪರ್ ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ ಮತ್ತು ದಿನೇಶ್ ಕಾರ್ತಿಕ್ ತಂಡಕ್ಕೆ ಮರಳಿರುವುದು ಭಾರತ ತಂಡಕ್ಕೆ ಬಲ ನೀಡಲಿದೆ.
ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಮೂರು ತಿಂಗಳಿಗಿಂತ ಕಡಿಮೆ ಸಮಯ ಉಳಿದಿದ್ದು, ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ನೇತೃತ್ವದ ಭಾರತ ಸುಮಾರು 16 ಪಂದ್ಯಗಳನ್ನು ಆಡಲಿದೆ. (ವೆಸ್ಟ್ ಇಂಡೀಸ್ ವಿರುದ್ಧ 5 ಪಂದ್ಯ, ಏಷ್ಯಾ ಕಪ್‌ನಲ್ಲಿ (ಫೈನಲ್ ಸೇರಿ) 5 ಪಂದ್ಯ, ಆಸ್ಟ್ರೇಲಿಯಾ ವಿರುದ್ಧ 3 ಪಂದ್ಯ, ದಕ್ಷಿಣ ಆಫ್ರಿಕಾ ವಿರುದ್ಧ 3 ಟಿ20 ಪಂದ್ಯಗಳನ್ನಾಡಲಿದೆ.

ಭಾರತೀಯ ವಿಕೆಟ್ ಕೀಪರ್ ಮತ್ತು ಬ್ಯಾಟರ್ ಸಂಜು ಸ್ಯಾಮ್ಸನ್ ಅವರುವೆಸ್ಟ್ ಇಂಡೀಸ್ ಟಿ20 ಸರಣಿಗಾಗಿ ಕೆಎಲ್ ರಾಹುಲ್ ಬದಲಿಗೆ ಭಾರತ ಟಿ20 ತಂಡಕ್ಕೆ ಆಯ್ಕೆಯಾಗಿದ್ದಾರೆ. ಕೆಎಲ್ ರಾಹುಲ್ ಅವರನ್ನು ಈ ಹಿಂದೆ ತಂಡದಲ್ಲಿ ಹೆಸರಿಸಲಾಗಿತ್ತು ಮತ್ತು ಟಿ20 ಸರಣಿಯಲ್ಲಿ ಅವರ ಭಾಗವಹಿಸುವಿಕೆಯು ಫಿಟ್‌ನೆಸ್‌ಗೆ ಒಳಪಟ್ಟಿತ್ತು. ಆದರೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆ ವಿಶ್ರಾಂತಿ ನೀಡಲಾಗಿದೆ.
ಇತ್ತೀಚೆಗೆ ವೆಸ್ಟ್ ಇಂಡೀಸ್ ವಿರುದ್ಧ ಮುಕ್ತಾಯಗೊಂಡ ಏಕದಿನ ಸರಣಿಯಲ್ಲಿ ಸಂಜು ಸ್ಯಾಮ್ಸನ್ ತಂಡದ ಭಾಗವಾಗಿದ್ದರು. ತಂಡವು 3-0 ಅಂತರದಲ್ಲಿ ಗೆದ್ದಿತ್ತು. ಅದರೆ ಮೊದಲ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅವಕಾಶ ಸಿಕ್ಕಿಲ್ಲ.
ಮತ್ತೊಂದೆಡೆ ನಿಕೋಲಸ್ ಪೂರನ್ ನಾಯಕತ್ವದ ವೆಸ್ಟ್ ಇಂಡೀಸ್ ಕೆಲವು ಫಿಟ್‌ನೆಸ್ ಕಳವಳಗಳಿಂದ ಏಕದಿನ ಪಂದ್ಯಗಳನ್ನು ಕಳೆದುಕೊಂಡಿದ್ದ ಸ್ಟಾರ್ ಬ್ಯಾಟರ್ ಶಿಮ್ರಾನ್ ಹೆಟ್ಮೆಯರ್ ಅವರು ವಾಪಸ್ ಬಂದಿದ್ದಾರೆ. ದೀರ್ಘಕಾಲದವರೆಗೆ ಟಿ20 ಕ್ರಿಕೆಟ್‌ನಲ್ಲಿ ವೆಸ್ಟ್ ಇಂಡೀಸ್ ಪ್ರಬಲ ತಂಡವಾಗಿತ್ತು.
ಭಾರತ ಮತ್ತು ವೆಸ್ಟ್ ಇಂಡೀಸ್ ಆಡುವ 11ರ ಬಳಗ
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜಾ, ರವಿ ಬಿಷ್ಣೋಯಿ, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್.
ವೆಸ್ಟ್ ಇಂಡೀಸ್ ತಂಡ: ಶಮರ್ಹ್ ಬ್ರೂಕ್ಸ್, ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ನಿಕೋಲಸ್ ಪೂರನ್ (ನಾಯಕ/ವಿಕೆಟ್ ಕೀಪರ್), ಕೈಲ್ ಮೇಯರ್ಸ್, ಜೇಸನ್ ಹೋಲ್ಡರ್, ಅಕೇಲ್ ಹೊಸೈನ್, ಓಡಿಯನ್ ಸ್ಮಿತ್, ಅಲ್ಜಾರಿ ಜೋಸೆಫ್, ಓಬೆಡ್ ಮೆಕಾಯ್, ಕೀಮೋ ಪಾಲ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications