IND vs WI 2nd ODI: ಭಾರತ vs ವೆಸ್ಟ್ ಇಂಡೀಸ್ ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ; ಟಿವಿ, ಲೈವ್ ಸ್ಟ್ರೀಮ್
ಶನಿವಾರ, ಜುಲೈ 29ರಂದು ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆಯುವ 2ನೇ ಏಕದಿನ ಪಂದ್ಯದಲ್ಲಿ ಆತಿಥೇಯ ವೆಸ್ಟ್ ಇಂಡೀಸ್ ಮತ್ತು ಪ್ರವಾಸಿ ಭಾರತ ತಂಡಗಳು ಸೆಣಸಾಡಲಿವೆ.
ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಈಗಾಗಲೇ ಮೊದಲ ಏಕದಿನ ಪಂದ್ಯದಲ್ಲಿ ಶಾಯ್ ಹೋಪ್ ನಾಯಕತ್ವದ ವೆಸ್ಟ್ ಇಂಡೀಸ್ ವಿರುದ್ಧ ಗೆಲ್ಲುವ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ. ಇದೀಗ 2ನೇ ಪಂದ್ಯವನ್ನು ಗೆದ್ದು ಸರಣಿಯನ್ನು ವಶಪಡಿಸಿಕೊಳ್ಳುವ ಗುರಿ ಹೊಂದಿದೆ.

ಎರಡು ದಿನಗಳ ಹಿಂದೆ ಮೊದಲ ಏಕದಿನ ಪಂದ್ಯದಲ್ಲಿ ಆಲ್‌ರೌಂಡ್ ಪ್ರದರ್ಶನ ನೀಡಿದ ನಂತರ ಭಾರತ ತಂಡ, ಎರಡನೇ ಪಂದ್ಯವನ್ನೂ ಗೆಲ್ಲುವ ನೆಚ್ಚಿನ ತಂಡವಾಗಿದೆ.
ಕೇವಲ 22.5 ಓವರ್‌ಗಳಲ್ಲಿ 115 ರನ್‌ಗಳ ಗುರಿಯನ್ನು ಬೆನ್ನತ್ತಿದ ಭಾರತ ತಂಡವು ವೆಸ್ಟ್ ಇಂಡೀಸ್ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿತು. 2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಗೆ ಅರ್ಹತೆ ಪಡೆಯಲು ವಿಫಲವಾದ ವೆಸ್ಟ್ ಇಂಡೀಸ್ ತಂಡಕ್ಕೆ ಇದು ಮತ್ತೊಂದು ಹೀನಾಯ ಸೋಲಾಗಿದೆ. ಏಕೆಂದರೆ 23 ಓವರ್‌ಗಳಲ್ಲಿ ಕೇವಲ 114 ರನ್‌ಗಳಿಗೆ ಆಲೌಟ್ ಆಯಿತು.
ಬೌಲರ್‌ಗಳಿಗೆ ಸಹಾಯಕವಾದ ಪಿಚ್‌ನಲ್ಲಿ ಪ್ರತಿರೋಧ ನೀಡಿದ ಕೆರಿಬಿಯನ್ ಪಡೆ, ಕಡಿಮೆ ಮೊತ್ತವನ್ನು ರಕ್ಷಿಸುವ ಸಂದರ್ಭದಲ್ಲಿ ಭಾರತದ ಐದು ವಿಕೆಟ್‌ಗಳನ್ನು ಪಡೆದರು. ಆದರೆ, ಭಾರತದ ಗೆಲುವನ್ನು ತಡೆಯಲು ಆ ಪ್ರಯತ್ನ ಸಾಕಾಗಲಿಲ್ಲ.
ಎರಡನೇ ಪಂದ್ಯದ ಕುರಿತು ಮಾತನಾಡುವುದಾದರೆ, ಭಾರತ ತಂಡದ ಆಡುವ 11ರ ಬಳಗವನ್ನು ಆಯ್ಕೆ ಮಾಡುವುದು ದೊಡ್ಡ ತಲೆನೋವಾಗಿದೆ. ಸೂರ್ಯಕುಮಾರ್ ಯಾದವ್ ಮೊದಲ ಏಕದಿನ ಪಂದ್ಯದಲ್ಲಿ ದೊಡ್ಡ ರನ್ ಗಳಿಸಲು ವಿಫಲವಾಗಿದ್ದು, ರೋಹಿತ್ ಶರ್ಮಾ ಮತ್ತು ರಾಹುಲ್ ದ್ರಾವಿಡ್ ಆಯ್ಕೆ ಮಾಡುವ 11ರ ಬಳಗದ ಮೇಲೆ ಎಲ್ಲರ ಕಣ್ಣುಗಳು ನೆಟ್ಟಿವೆ.
ಏಕದಿನ ಪಂದ್ಯಗಳಲ್ಲಿ 66ರ ಸರಾಸರಿಯಲ್ಲಿ ರನ್ ಗಳಿಸಿರುವ ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಮತ್ತು ಇಶಾನ್ ಕಿಶನ್ ಆಯ್ಕೆಯಾದಾಗ ಬೆಂಚ್ ಕಾಯಿಸಿದರು. 2ನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ಗೆ ಆಡುವ ಅವಕಾಶ ಸಿಗುತ್ತದೆಯೇ ಎಂಬ ಕುತೂಹಲ ಮೂಡಿಸಿದೆ.
ಮತ್ತೊಂದೆಡೆ, ವೆಸ್ಟ್ ಇಂಡೀಸ್ ತಂಡದಲ್ಲಿ ಕೀಸಿ ಕಾರ್ಟಿ ಮತ್ತು ವೇಗಿ ಓಶಾನೆ ಥಾಮಸ್ ಅವರನ್ನು ಆಡುವ 11ರ ಬಳಗಕ್ಕೆ ಸೇರಿಸಿಕೊಳ್ಳಬಹುದು. ಕೀಸಿ ಕಾರ್ಟಿ ಅವರು ಶ್ರೀಲಂಕಾ ವಿರುದ್ಧ ಕೊನೆಯ ಬಾರಿಗೆ ಆಡಿದ್ದಾಗ 87 ರನ್ ಗಳಿಸಿದರು. ಓಶಾನೆ ಥಾಮಸ್ ವೇಗದ ದಾಳಿ ಹೊಂದಿದ್ದಾನೆ ಮತ್ತು ಎದುರಾಳಿ ಜೊತೆಯಾಟ ಮುರಿಯುವಲ್ಲಿ ಸಹಾಯ ಮಾಡಬಹುದು.
ಭಾರತ ಮತ್ತು ವೆಸ್ಟ್ ಇಂಡೀಸ್ 2ನೇ ಏಕದಿನ ಪಂದ್ಯದ ವಿವರ
ಸ್ಥಳ ಮತ್ತು ದಿನಾಂಕ: ಭಾರತ ಮತ್ತು ವೆಸ್ಟ್ ಇಂಡೀಸ್ 2ನೇ ಏಕದಿನ ಪಂದ್ಯವು ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ಶನಿವಾರ, ಜುಲೈ 29ರಂದು ನಡೆಯಲಿದೆ.
ಪಂದ್ಯದ ಸಮಯ: ಭಾರತ ಮತ್ತು ವೆಸ್ಟ್ ಇಂಡೀಸ್ 2ನೇ ಏಕದಿನ ಪಂದ್ಯವು ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭವಾಗಲಿದೆ.
ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ
ಭಾರತ ಮತ್ತು ವೆಸ್ಟ್ ಇಂಡೀಸ್ 2ನೇ ಏಕದಿನ ಪಂದ್ಯವನ್ನು ಡಿಡಿ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರಪ್ರಸಾರ ಮಾಡಲಿದೆ. ಇನ್ನು ಜಿಯೋ ಸಿನಿಮಾ ವೆಬ್‌ಸೈಟ್ ಮತ್ತು ಅಪ್ಲಿಕೇಶನ್‌ನಲ್ಲಿ ಲೈವ್‌ಸ್ಟ್ರೀಮಿಂಗ್ ಆಗಿ ಉಚಿತವಾಗಿ ವೀಕ್ಷಿಸಬಹುದು.
ಭಾರತ ಮತ್ತು ವೆಸ್ಟ್ ಇಂಡೀಸ್ ಸಂಭಾವ್ಯ ಆಡುವ 11ರ ಬಳಗ
ವೆಸ್ಟ್ ಇಂಡೀಸ್: ಬ್ರಾಂಡನ್ ಕಿಂಗ್, ಅಲಿಕ್ ಅಥಾನಾಜೆ, ಶಾಯ್ ಹೋಪ್ (ನಾಯಕ/ ವಿಕೆಟ್ ಕೀಪರ್), ಕೀಸಿ ಕಾರ್ಟಿ, ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ರೊಮಾರಿಯೊ ಶೆಫರ್ಡ್, ಡೊಮಿನಿಕ್ ಡ್ರೇಕ್ಸ್, ಯಾನಿಕ್ ಕ್ಯಾರಿಯಾ, ಗುಡಾಕೇಶ್ ಮೋಟಿ, ಜೇಡನ್ ಸೀಲ್ಸ್.
ಭಾರತ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications