IND vs WI 4ನೇ ಟಿ20: ಮಳೆಯಿಂದ ವಿಳಂಬವಾದ ಪಂದ್ಯ, ಟೀಮ್ ಇಂಡಿಯಾದಲ್ಲಿ ಭಾರೀ ಬದಲಾವಣೆ; ಲೈವ್ ಸ್ಕೋರ್

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 5 ಪಂದ್ಯಗಳ ಟ್ವೆಂಟಿ ಸರಣಿಯ ಮೊದಲ 3 ಪಂದ್ಯಗಳು ವೆಸ್ಟ್ ಇಂಡೀಸ್ ನೆಲದಲ್ಲಿ ಮುಕ್ತಾಯಗೊಂಡಿದ್ದು, ಸರಣಿಯ ಕೊನೆಯ 2 ಪಂದ್ಯಗಳು ಯುನೈಟೆಡ್ ಸ್ಟೇಟ್ಸ್‌ನಲ್ಲಿ ಆಯೋಜನೆಗೊಂಡಿವೆ. ಫ್ಲೋರಿಡಾದ ಸೆಂಟ್ರಲ್ ಬ್ರೊವಾರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ಟರ್ಫ್ ಗ್ರೌಂಡ್ ಕ್ರೀಡಾಂಗಣದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ ನಾಲ್ಕನೇ ಟಿ ಟ್ವೆಂಟಿ ಪಂದ್ಯ ನಡೆಯುತ್ತಿದ್ದು, ಮಳೆಯ ಕಾರಣದಿಂದಾಗಿ ಪಂದ್ಯ 30 ನಿಮಿಷ ತಡವಾಗಿ ಆರಂಭಗೊಂಡಿದೆ.
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ವೆಸ್ಟ್ ಇಂಡೀಸ್ ತಂಡದ ನಾಯಕ ನಿಕೋಲಸ್ ಪೂರನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಎದುರಾಳಿ ಟೀಮ್ ಇಂಡಿಯಾವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ. ಇನ್ನು ಈ ಪಂದ್ಯದಲ್ಲಿ ಕಣಕ್ಕಿಳಿಯಲಿರುವ ಭಾರತ ತಂಡದಲ್ಲಿ 3 ಪ್ರಮುಖ ಬದಲಾವಣೆಗಳಾಗಿದ್ದು, ಹಾರ್ದಿಕ್ ಪಾಂಡ್ಯ ಬದಲಾಗಿ ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್ ಬದಲಾಗಿ ರವಿ ಬಿಷ್ಣೋಯಿ ಹಾಗೂ ಶ್ರೇಯಸ್ ಅಯ್ಯರ್ ಬದಲಾಗಿ ಸಂಜು ಸ್ಯಾಮ್ಸನ್ ಕಣಕ್ಕಿಳಿಯುತ್ತಿದ್ದಾರೆ.
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ನಾಲ್ಕನೇ ಟಿ ಟ್ವೆಂಟಿ ಪಂದ್ದದ ಲೈವ್ ಸ್ಕೋರ್ ಅಪ್‌ಡೇಟ್ ಇಲ್ಲಿದೆ

ಭಾರತ ಆಡುವ ಬಳಗ
ರೋಹಿತ್ ಶರ್ಮಾ(ನಾಯಕ), ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್, ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಅವೇಶ್ ಖಾನ್, ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್

ವೆಸ್ಟ್ ಇಂಡೀಸ್ ಆಡುವ ಬಳಗ
ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ನಿಕೋಲಸ್ ಪೂರನ್ (ನಾಯಕ), ರೋವ್‌ಮನ್ ಪೊವೆಲ್, ಶಿಮ್ರಾನ್ ಹೆಟ್ಮೆಯರ್, ಡೆವೊನ್ ಥಾಮಸ್ (ವಿಕೆಟ್ ಕೀಪರ್), ಜೇಸನ್ ಹೋಲ್ಡರ್, ಡೊಮಿನಿಕ್ ಡ್ರೇಕ್ಸ್, ಅಕೆಲ್ ಹೋಸೇನ್, ಅಲ್ಜಾರಿ ಜೋಸೆಫ್, ಒಬೆಡ್ ಮೆಕಾಯ್

ಸರಣಿ ವಶಪಡಿಸಿಕೊಳ್ಳುವತ್ತ ಟೀಮ್ ಇಂಡಿಯಾ ಚಿತ್ತ, ಸೂರ್ಯಕುಮಾರ್ ಯಾದವ್‌ಗೆ ಬಹುಮುಖ್ಯವಾದ ಪಂದ್ಯ
ಇನ್ನು ಈಗಾಗಲೇ ನಡೆದಿರುವ 3 ಟಿ ಟ್ವೆಂಟಿ ಪಂದ್ಯಗಳ ಪೈಕಿ 2 ಪಂದ್ಯಗಳಲ್ಲಿ ಜಯ ಸಾಧಿಸಿರುವ ಟೀಮ್ ಇಂಡಿಯಾ ಸರಣಿಯಲ್ಲಿ 2-1 ಅಂತರದ ಮುನ್ನಡೆಯನ್ನು ಕಾಯ್ದುಕೊಂಡಿದ್ದು, ಈ ನಾಲ್ಕನೇ ಟಿ ಟ್ವೆಂಟಿ ಪಂದ್ಯವನ್ನು ಗೆದ್ದು ಸರಣಿ ಕೈವಶ ಮಾಡಿಕೊಳ್ಳುವತ್ತ ಕಣ್ಣಿಟ್ಟಿದ್ದರೆ, ಅತ್ತ ಕೇವಲ ಒಂದೇ ಒಂದು ಪಂದ್ಯದಲ್ಲಿ ಮಾತ್ರ ಜಯ ಸಾಧಿಸಿರುವ ವೆಸ್ಟ್ ಇಂಡೀಸ್ ಈ ನಾಲ್ಕನೇ ಟಿ ಟ್ವೆಂಟಿ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸಿ ಐದನೇ ಪಂದ್ಯವನ್ನು ಸರಣಿಯ ನಿರ್ಣಾಯಕ ಪಂದ್ಯವನ್ನಾಗಿ ಮಾಡುವತ್ತ ಚಿತ್ತ ನೆಟ್ಟಿದೆ.ಅಷ್ಟೇ ಅಲ್ಲದೇ ಇಂದು ಮತ್ತು ನಾಳೆ ( ಆಗಸ್ಟ್ 7 ) ನಡೆಯಲಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರನೇ ಮತ್ತು ನಾಲ್ಕನೇ ಟಿ ಟ್ವೆಂಟಿ ಪಂದ್ಯಗಳತ್ತ ಬಿಸಿಸಿಐ ಆಯ್ಕೆಗಾರರು ಕಣ್ಣಿಟ್ಟಿದ್ದು ಈ ಪಂದ್ಯಗಳು ಮುಕ್ತಾಯವಾದ ನಂತರ ಮುಂಬರುವ ಏಷ್ಯಾ ಕಪ್ ಟೂರ್ನಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಿದೆ. ಹೀಗಾಗಿ ಈ ಎರಡು ಪಂದ್ಯಗಳಲ್ಲಿ ಕಣಕ್ಕಿಳಿಯುವ ಆಟಗಾರರು ಉತ್ತಮ ಪ್ರದರ್ಶನ ನೀಡಿ ಆಯ್ಕೆಗಾರರ ಮನ ಗೆಲ್ಲಬೇಕಿದೆ.
ಇನ್ನು ಐಸಿಸಿ ಟಿ ಟ್ವೆಂಟಿ ಬ್ಯಾಟ್ಸ್‌ಮನ್ ಶ್ರೇಯಾಂಕ ಪಟ್ಟಿಯಲ್ಲಿ 816 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ದ್ವಿತೀಯ ಸ್ಥಾನದಲ್ಲಿರುವ ಸೂರ್ಯಕುಮಾರ್ ಯಾದವ್ ಈ ಪಂದ್ಯದಲ್ಲಿ 50 ರನ್ ಗಳಿಸಿದರೆ 818 ಅಂಕಗಳನ್ನು ಪಡೆದುಕೊಂಡು ಅಗ್ರ ಸ್ಥಾನದಲ್ಲಿರುವ ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಅವರನ್ನು ಹಿಂದಿಕ್ಕಲಿದ್ದು, ನಂಬರ್ 1 ಟಿ ಟ್ವೆಂಟಿ ಬ್ಯಾಟ್ಸ್‌ಮನ್ ಆಗಿ ಹೊರಹೊಮ್ಮಲಿದ್ದಾರೆ. ಹೀಗಾಗಿ ಈ ಟಿ ಟ್ವೆಂಟಿ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅರ್ಧಶತಕ ಬಾರಿಸಿದರೆ ಉತ್ತುಂಗಕ್ಕೆ ಏರಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications