ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ ಮತ್ತು ವಿಂಡೀಸ್ ಒಟ್ಟಾರೆ ಏಕದಿನ ಮುಖಾಮುಖಿಯಲ್ಲಿ ಹೆಚ್ಚು ಪಂದ್ಯ ಗೆದ್ದಿರುವ ಬಲಿಷ್ಠ ತಂಡ ಯಾವುದು?

IND vs WI: India vs West Indies ODI head to head and Queens Park Oval head to head record details

ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡು ಟಿ ಟ್ವೆಂಟಿ ಹಾಗೂ ಏಕದಿನ ಎರಡೂ ಸರಣಿಗಳಲ್ಲಿಯೂ ಜಯ ಸಾಧಿಸಿದ್ದ ಟೀಮ್ ಇಂಡಿಯಾ ಇದೀಗ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ನಿರತವಾಗಿದ್ದು, ಕೆರಿಬಿಯನ್ನರ ವಿರುದ್ಧ ಕೂಡ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರಿಸಿದೆ.

IND vs WI 2nd ODI: ಟೀಂ ಇಂಡಿಯಾ ಪ್ರದರ್ಶನ ನೋಡಿ ನಾಯಕ ರೋಹಿತ್ ಶರ್ಮಾ ಹೇಳಿದ್ದೇನು?IND vs WI 2nd ODI: ಟೀಂ ಇಂಡಿಯಾ ಪ್ರದರ್ಶನ ನೋಡಿ ನಾಯಕ ರೋಹಿತ್ ಶರ್ಮಾ ಹೇಳಿದ್ದೇನು?

ಈ ಪ್ರವಾಸದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವೆ 3 ಪಂದ್ಯಗಳ ಏಕದಿನ ಸರಣಿ ಹಾಗೂ 5 ಪಂದ್ಯಗಳ ಟಿ ಟ್ವೆಂಟಿ ಸರಣಿ ಆಯೋಜನೆಯಾಗಿದ್ದು, ಮೊದಲಿಗೆ ನಡೆಯುತ್ತಿರುವ ಏಕದಿನ ಸರಣಿಯಲ್ಲಿ ಮೊದಲೆರಡು ಪಂದ್ಯಗಳನ್ನು ಗೆದ್ದಿರುವ ಭಾರತ ತಂಡ ಈಗಾಗಲೇ ಸರಣಿಯನ್ನು ವಶಪಡಿಸಿಕೊಂಡಿದೆ. 2-0 ಅಂತರದಲ್ಲಿ ಸರಣಿಯಲ್ಲಿ ಮುನ್ನಡೆ ಸಾಧಿಸಿರುವ ಟೀಮ್ ಇಂಡಿಯಾ ಇದೀಗ ವಿಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯವನ್ನೂ ಕೂಡ ಗೆದ್ದು, ಸರಣಿಯಲ್ಲಿ ವೈಟ್ ವಾಷ್ ಸಾಧನೆ ಮಾಡುವತ್ತ ಕಣ್ಣಿಟ್ಟಿದ್ದು, ವೆಸ್ಟ್ ಇಂಡೀಸ್ ಈ ಪಂದ್ಯದಲ್ಲಿ ಗೆದ್ದು ವೈಟ್ ವಾಷ್ ಮುಖಭಂಗದಿಂದ ಪಾರಾಗುವ ಯೋಜನೆಯಲ್ಲಿದೆ.

ಕಳೆದೆರಡು ವಿಶ್ವಕಪ್ ಸೋಲಿಗೆ ಇದುವೇ ಪ್ರಮುಖ ಕಾರಣ: ಸತ್ಯ ಬಿಚ್ಚಿಟ್ಟ ರವಿಶಾಸ್ತ್ರಿಕಳೆದೆರಡು ವಿಶ್ವಕಪ್ ಸೋಲಿಗೆ ಇದುವೇ ಪ್ರಮುಖ ಕಾರಣ: ಸತ್ಯ ಬಿಚ್ಚಿಟ್ಟ ರವಿಶಾಸ್ತ್ರಿ

ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ ಏಕದಿನ ಸರಣಿಯ ಎಲ್ಲಾ ಪಂದ್ಯಗಳೂ ಕ್ವೀನ್ಸ್ ಪಾರ್ಕ್ ಓವಲ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿಯೇ ಆಯೋಜನೆಗೊಂಡಿದ್ದು, ಈ ಕ್ರೀಡಾಂಗಣಗಳಲ್ಲಿ ಇತ್ತಂಡಗಳ ನಡುವೆ ಇಲ್ಲಿಯವರೆಗೂ ನಡೆದಿರುವ ಏಕದಿನ ಪಂದ್ಯಗಳಲ್ಲಿ ಯಾವ ತಂಡ ಎಷ್ಟು ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಒಟ್ಟಾರೆ ಏಕದಿನ ಮುಖಾಮುಖಿಯಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದು ಬಲಿಷ್ಠ ತಂಡ ಎನಿಸಿಕೊಂಡಿದೆ ಎಂಬುದರ ಕುರಿತಾದ ಮಾಹಿತಿ ಮುಂದೆ ಇದೆ ಓದಿ.

ಇತ್ತಂಡಗಳ ನಡುವಿನ ಒಟ್ಟಾರೆ ಏಕದಿನ ಮುಖಾಮುಖಿ

ಇತ್ತಂಡಗಳ ನಡುವಿನ ಒಟ್ಟಾರೆ ಏಕದಿನ ಮುಖಾಮುಖಿ

ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವೆ ಕ್ರಿಕೆಟ್ ಇತಿಹಾಸದಲ್ಲಿ ಇಲ್ಲಿಯವರೆಗೂ ಒಟ್ಟು 138 ಏಕದಿನ ಪಂದ್ಯಗಳು ನಡೆದಿದ್ದು, ಈ ಪೈಕಿ ಟೀಮ್ ಇಂಡಿಯಾ 69 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ವೆಸ್ಟ್ ಇಂಡೀಸ್ 63 ಪಂದ್ಯಗಳಲ್ಲಿ ಗೆದ್ದಿದೆ, 4 ಪಂದ್ಯಗಳು ಯಾವುದೇ ಫಲಿತಾಂಶವಿಲ್ಲದೇ ಅಂತ್ಯಗೊಂಡಿದ್ದರೆ, ಉಳಿದೆರಡು ಪಂದ್ಯಗಳು ಟೈ ಆಗಿವೆ. ಈ ಮೂಲಕ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ ಒಟ್ಟಾರೆ ಏಕದಿನ ಮುಖಾಮುಖಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೀಮ್ ಇಂಡಿಯಾ ಸ್ಪಷ್ಟ ಮೇಲುಗೈ ಸಾಧಿಸಿದೆ.

ಕ್ವೀನ್ಸ್ ಪಾರ್ಕ್ ಓವಲ್ ಮುಖಾಮುಖಿ

ಕ್ವೀನ್ಸ್ ಪಾರ್ಕ್ ಓವಲ್ ಮುಖಾಮುಖಿ

ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ ಏಕದಿನ ಸರಣಿ ನಡೆಯುತ್ತಿರುವ ಕ್ವೀನ್ಸ್ ಪಾರ್ಕ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇತ್ತಂಡಗಳ ನಡುವೆ ಇಲ್ಲಿಯವರೆಗೂ ಒಟ್ಟು 30 ಏಕದಿನ ಪಂದ್ಯಗಳು ಜರುಗಿದ್ದು, ಈ ಪೈಕಿ ವೆಸ್ಟ್ ಇಂಡೀಸ್ ತಂಡ 16 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಟೀಮ್ ಇಂಡಿಯಾ 14 ಪಂದ್ಯಗಳಲ್ಲಿ ಗೆಲುವು ಕಂಡಿದೆ. ಈ ಮೂಲಕ ಈ ಕ್ರೀಡಾಂಗಣದ ಮುಖಾಮುಖಿಯಲ್ಲಿ ಭಾರತ ತಂಡಕ್ಕಿಂತ ವೆಸ್ಟ್ ಇಂಡೀಸ್ ಮೇಲುಗೈ ಹೊಂದಿದೆ.

ಸತತ ಸರಣಿ ಸೋಲಿನ ಮುಖಭಂಗ

ಸತತ ಸರಣಿ ಸೋಲಿನ ಮುಖಭಂಗ

ಸದ್ಯ ಈ ಏಕದಿನ ಸರಣಿಯಲ್ಲಿಯೂ ಭಾರತ ತಂಡಕ್ಕೆ ಶರಣಾಗಿರುವ ವೆಸ್ಟ್ ಇಂಡೀಸ್ ಟೀಮ್ ಇಂಡಿಯಾ ವಿರುದ್ಧ ಸತತ 12 ಏಕದಿನ ಸರಣಿಯಲ್ಲಿ ಸೋತ ಕೆಟ್ಟ ದಾಖಲೆಯನ್ನು ಬರೆದಿದೆ. ಹೌದು, ಕ್ರಿಕೆಟ್ ಇತಿಹಾಸದಲ್ಲಿ ತಂಡವೊಂದು ನಿರ್ದಿಷ್ಟ ತಂಡವೊಂದರ ವಿರುದ್ಧ ಸತತವಾಗಿ ಅತಿ ಹೆಚ್ಚು ಏಕದಿನ ಸರಣಿಗಳನ್ನು ಸೋತ ತಂಡ ಎಂಬ ಕೆಟ್ಟ ದಾಖಲೆಯನ್ನು ವೆಸ್ಟ್ ಇಂಡೀಸ್ ಭಾರತದ ವಿರುದ್ಧ ಹೊಂದಿದೆ. ಈ ಹಿಂದೆ ಜಿಂಬಾಬ್ವೆ ತಂಡ ಪಾಕಿಸ್ತಾನದ ವಿರುದ್ಧ ಸತತ 11 ಏಕದಿನ ಸರಣಿಗಳಲ್ಲಿ ಸೋತ ಕೆಟ್ಟ ದಾಖಲೆಯನ್ನು ಹೊಂದಿತ್ತು. ಆದರೆ ಈ ಸರಣಿಯಲ್ಲಿ ಸೋತಿರುವ ವೆಸ್ಟ್ ಇಂಡೀಸ್ ಈ ಕೆಟ್ಟ ದಾಖಲೆಯನ್ನು ತನ್ನ ಹೆಸರಿಗೆ ಬರೆದುಕೊಂಡಿದೆ.

Story first published: Tuesday, July 26, 2022, 11:24 [IST]
Other articles published on Jul 26, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X