ಭಾರತ vs ವಿಂಡೀಸ್ ಏಕದಿನ ಸರಣಿಯ ತಂಡ, ವೇಳಾಪಟ್ಟಿ; ನೇರಪ್ರಸಾರ ಈ ಒಂದು ಚಾನೆಲ್‌ನಲ್ಲಿ ಮಾತ್ರ!

ಇತ್ತೀಚೆಗಷ್ಟೇ ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡು ಏಕದಿನ ಹಾಗೂ ಟಿ ಟ್ವೆಂಟಿ ಎರಡೂ ಸರಣಿಯಲ್ಲೂ ಗೆದ್ದಿದ್ದ ಟೀಂ ಇಂಡಿಯಾ ಆಂಗ್ಲರಿಗೆ ತವರಿನಲ್ಲೇ ಮುಖಭಂಗವನ್ನು ಮಾಡಿತ್ತು. ಹೀಗೆ ಇಂಗ್ಲೆಂಡ್ ವಿರುದ್ಧ ಅಬ್ಬರದ ಜಯ ಸಾಧಿಸಿದ ಟೀಮ್ ಇಂಡಿಯಾ ಇದೀಗ ವೆಸ್ಟ್ ಇಂಡೀಸ್ ವಿರುದ್ಧ ಸೆಣಸಾಟ ನಡೆಸಲು ಕೆರೆಬಿಯನ್ ನಾಡಿಗೆ ಬಂದಿಳಿದಿದೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಐದು ಪಂದ್ಯಗಳ ಟಿ ಟ್ವೆಂಟಿ ಸರಣಿಗಳು ಜರುಗಲಿವೆ. ಮೊದಲಿಗೆ ಇತ್ತಂಡಗಳ ನಡುವೆ ಏಕದಿನ ಸರಣಿ ನಡೆಯಲಿದ್ದು, ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಸೇರಿದಂತೆ ತಂಡದ ಹಲವು ಆಟಗಾರರು ವೆಸ್ಟ್ ಇಂಡೀಸ್ ವಿರುದ್ಧದ ಈ ಏಕದಿನ ಸರಣಿಯಿಂದ ವಿಶ್ರಾಂತಿಗಾಗಿ ಹೊರಗುಳಿದಿದ್ದು, ಶಿಖರ್ ಧವನ್ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ.
ಇತ್ತ ಟೀಮ್ ಇಂಡಿಯಾ ತನ್ನ ಕೊನೆಯ ಏಕದಿನ ಸರಣಿಯಲ್ಲಿ ಇಂಗ್ಲೆಂಡ್ ತಂಡವನ್ನು ಅವರದ್ದೇ ನೆಲದಲ್ಲಿ ಮಣಿಸಿದ್ದರೆ, ವೆಸ್ಟ್ ಇಂಡೀಸ್ ಬಾಂಗ್ಲಾದೇಶದ ವಿರುದ್ಧ 0-3 ಅಂತರದಲ್ಲಿ ತನ್ನ ತವರಿನಲ್ಲೇ ಸೋತು ವೈಟ್‌ವಾಷ್ ಮುಖಭಂಗಕ್ಕೊಳಗಾದ ಅನುಭವವನ್ನು ಹೊಂದಿದೆ. ಹೀಗೆ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ತಂಡಕ್ಕಿಂತ ಉತ್ತಮ ಸ್ಥಾನದಲ್ಲಿದೆ ಎಂದೇ ಹೇಳಬಹುದಾಗಿದೆ.
ಇತ್ತಂಡಗಳ ನಡುವಿನ ಏಕದಿನ ಸರಣಿ ನಾಳೆ ( ಜುಲೈ 22 ) ನಡೆಯಲಿರುವ ಪ್ರಥಮ ಏಕದಿನ ಪಂದ್ಯದ ಮೂಲಕ ಆರಂಭವಾಗಲಿದ್ದು, ಸರಣಿಯ ಸಂಪೂರ್ಣ ವೇಳಾಪಟ್ಟಿ, ತಂಡಗಳು ಮತ್ತು ನೇರಪ್ರಸಾರದ ಕುರಿತ ಮಾಹಿತಿ ಈ ಕೆಳಕಂಡಂತಿದೆ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿಯ ವೇಳಾಪಟ್ಟಿ
• ಪ್ರಥಮ ಏಕದಿನ ಪಂದ್ಯ - ಜುಲೈ 22 - ಪೋರ್ಟ್ ಆಫ್ ಸ್ಪೇನ್ ನ ಕ್ವೀನ್ಸ್ ಪಾರ್ಕ್ ಓವಲ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ
• ದ್ವಿತೀಯ ಏಕದಿನ ಪಂದ್ಯ - ಜುಲೈ 24 - ಪೋರ್ಟ್ ಆಫ್ ಸ್ಪೇನ್ ನ ಕ್ವೀನ್ಸ್ ಪಾರ್ಕ್ ಓವಲ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ
• ತೃತೀಯ ಏಕದಿನ ಪಂದ್ಯ - ಜುಲೈ 27 - ಪೋರ್ಟ್ ಆಫ್ ಸ್ಪೇನ್ ನ ಕ್ವೀನ್ಸ್ ಪಾರ್ಕ್ ಓವಲ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ

ಪ್ರಕಟವಾದ ಸ್ಕ್ವಾಡ್
ಭಾರತ ತಂಡ: ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ ( ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ), ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.
ವೆಸ್ಟ್ ಇಂಡೀಸ್ ತಂಡ: ನಿಕೋಲಸ್ ಪೂರನ್ (ನಾಯಕ), ಶಾಯ್ ಹೋಪ್ (ಉಪನಾಯಕ), ಶಮರ್ ಬ್ರೂಕ್ಸ್, ಕೀಸಿ ಕಾರ್ಟಿ, ಜೇಸನ್ ಹೋಲ್ಡರ್, ಅಕೇಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರ್ಯಾಂಡನ್ ಕಿಂಗ್, ಕೈಲ್ ಮೇಯರ್ಸ್, ಗುಡಾಕೇಶ್ ಮೋಟಿ, ಕೀಮೋ ಪಾಲ್, ರೋವ್‌ಮನ್ ಪೊವೆಲ್, ಜೇಡನ್ ಸೀಲ್ಸ್

ನೇರಪ್ರಸಾರ ಈ ಚಾನೆಲ್‌ನಲ್ಲಿ ಮಾತ್ರ
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿಯ ಎಲ್ಲಾ ಪಂದ್ಯಗಳೂ ಸಹ ಒಂದೇ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಎಲ್ಲಾ ಪಂದ್ಯಗಳೂ ಸಹ ಭಾರತೀಯ ಕಾಲಮಾನದ ಪ್ರಕಾರ ಸಂಜೆ 7ಕ್ಕೆ ಆರಂಭವಾಗಲಿವೆ. ಇನ್ನು ಈ ಪಂದ್ಯದ ನೇರಪ್ರಸಾರ ಡಿಡಿ ಚಾನೆಲ್‌ನಲ್ಲಿ ಮಾತ್ರ ಲಭ್ಯವಿರಲಿದೆ ಹಾಗೂ ಮೊಬೈಲ್‌ನಲ್ಲಿ ಫ್ಯಾನ್‌ಕೋಡ್ ಅಪ್ಲಿಕೇಶನ್‌ನಲ್ಲಿ ಮಾತ್ರ ನೇರಪ್ರಸಾರವಿರಲಿದೆ. ಹೌದು, ಇತ್ತಂಡಗಳ ನಡುವಿನ ಸರಣಿಯ ನೇರಪ್ರಸಾರ ಡಿಡಿ ಚಾನೆಲ್ ಮತ್ತು ಫ್ಯಾನ್ ಕೋಡ್ ಹೊರತುಪಡಿಸಿ ಉಳಿದ ಯಾವುದೇ ಚಾನೆಲ್ ಮತ್ತು ಮೊಬೈಲ್ ಅಪ್ಲಿಕೇಶನ್‌ನಲ್ಲಿ ಲಭ್ಯವಿರುವುದಿಲ್ಲ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications