ಭಾರತ ಮತ್ತು ವಿಂಡೀಸ್ ನಡುವೆ ನಡೆದಿರುವ ಏಕದಿನ ಪಂದ್ಯಗಳಲ್ಲಿ ಹೆಚ್ಚು ಗೆದ್ದಿರುವ ಬಲಿಷ್ಠ ತಂಡ ಯಾವುದು?

ಇತ್ತೀಚೆಗಷ್ಟೆ ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡು ಟಿ ಟ್ವೆಂಟಿ ಹಾಗೂ ಏಕದಿನ ಎರಡೂ ಸರಣಿಗಳಲ್ಲಿಯೂ ಭರ್ಜರಿ ಗೆಲುವು ಕಂಡಿದ್ದ ಟೀಮ್ ಇಂಡಿಯಾ ಇದೀಗ ವೆಸ್ಟ್ ಇಂಡೀಸ್ ಪ್ರವಾಸವನ್ನು ಕೈಗೊಂಡಿದ್ದು, ಕೆರೆಬಿಯನ್ನರ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಐದು ಪಂದ್ಯಗಳ ಟಿ ಟ್ವೆಂಟಿ ಸರಣಿಗಳಲ್ಲಿ ಕಣಕ್ಕಿಳಿಯುತ್ತಿದೆ. ಮೊದಲಿಗೆ ಇತ್ತಂಡಗಳ ನಡುವಿನ ಏಕದಿನ ಸರಣಿ ನಡೆಯಲಿದ್ದು, ಇಂಗ್ಲೆಂಡ್ ಪ್ರವಾಸ ಕೈಗೊಂಡಿದ್ದ ಹಲವು ಪ್ರಮುಖ ಆಟಗಾರರು ಸದ್ಯದ ವೆಸ್ಟ್ ಇಂಡೀಸ್ ಪ್ರವಾಸದಿಂದ ವಿಶ್ರಾಂತಿಯ ಕಾರಣದಿಂದಾಗಿ ಹೊರಗುಳಿದಿದ್ದಾರೆ. ನಾಯಕ ರೋಹಿತ್ ಶರ್ಮಾ ಏಕದಿನ ಸರಣಿಯಿಂದ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದು, ಟಿ ಟ್ವೆಂಟಿ ಸರಣಿಗೆ ಮರಳಲಿದ್ದಾರೆ. ಹೀಗಾಗೆ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ನಾಯಕನಾಗಿ ಶಿಖರ್ ಧವನ್ ಮುನ್ನಡೆಸಲಿದ್ದಾರೆ.
ನಾಳೆ ನಡೆಯಲಿರುವ ಪ್ರಥಮ ಏಕದಿನ ಪಂದ್ಯದ ಮೂಲಕ ಸರಣಿ ಆರಂಭವಾಗಲಿದ್ದು, ಭಾರತ ಮತ್ತು ವೆಸ್ಟ್ ಇಂಡೀಸ್ ಎರಡೂ ತಂಡಗಳೂ ಈಗಾಗಲೇ ಪ್ರಕಟವಾಗವೆ. ಸದ್ಯ ವೆಸ್ಟ್ ಇಂಡೀಸ್‌ನ ಟ್ರಿನಿಡಾಡ್ ಮತ್ತು ಟೊಬ್ಯಾಗೋ ತಲುಪಿರುವ ಧವನ್ ನಾಯಕತ್ವದ ಟೀಮ್ ಇಂಡಿಯಾ ಅಭ್ಯಾಸವನ್ನು ಆರಂಭಿಸಿದೆ. ಪ್ರಥಮ ಪಂದ್ಯ ನಾಳೆ ( ಜುಲೈ 22 ) ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 7 ಗಂಟೆಗೆ ಆರಂಭವಾಗಲಿದ್ದು ಟ್ರಿನಿಡಾಡ್ ಅಂಡ್ ಟೊಬ್ಯಾಗೊದ ಪೋರ್ಟ್ ಆಫ್ ಸ್ಪೇನ್‌ನಲ್ಲಿರುವ ಕ್ವೀನ್ಸ್ ಪಾರ್ಕ್ ಓವಲ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ಜರುಗಲಿದೆ.
ಇನ್ನು ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವೆ ನಡೆಯಲಿರುವ 137ನೇ ಅಂತರರಾಷ್ಟ್ರೀಯ ಏಕದಿನ ಪಂದ್ಯ ಇದಾಗಿದ್ದು, ಇತ್ತಂಡಗಳ ನಡುವೆ ಇಲ್ಲಿಯವರೆಗೂ ನಡೆದಿರುವ 136 ಏಕದಿನ ಪಂದ್ಯಗಳ ಪೈಕಿ ಯಾವ ತಂಡ ಎಷ್ಟು ಪಂದ್ಯಗಳಲ್ಲಿ ಗೆದ್ದಿದೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.

ಭಾರತ ಮತ್ತು ವಿಂಡೀಸ್ ಏಕದಿನ ಮುಖಾಮುಖಿಯಲ್ಲಿ ಹೆಚ್ಚು ಗೆದ್ದವರು
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಲ್ಲಿಯವರೆಗೂ ಒಟ್ಟು 136 ಅಂತರರಾಷ್ಟ್ರೀಯ ಏಕದಿನ ಪಂದ್ಯಗಳು ಜರುಗಿದ್ದು, ಈ ಪೈಕಿ ಟೀಮ್ ಇಂಡಿಯಾ 67 ಪಂದ್ಯಗಳಲ್ಲಿ ಗೆಲುವನ್ನು ಸಾಧಿಸಿದ್ದರೆ, ವೆಸ್ಟ್ ಇಂಡೀಸ್ 63 ಪಂದ್ಯಗಳಲ್ಲಿ ಗೆದ್ದಿದೆ, 4 ಪಂದ್ಯಗಳು ಯಾವುದೇ ಫಲಿತಾಂಶವಿಲ್ಲದೇ ಅಂತ್ಯಗೊಂಡಿವೆ ಮತ್ತು ಉಳಿದ 2 ಪಂದ್ಯಗಳು ಡ್ರಾನಲ್ಲಿ ಮುಕ್ತಾಯಗೊಂಡಿವೆ. ಈ ಮೂಲಕ ಇತ್ತಂಡಗಳ ನಡುವಿನ ಒಟ್ಟಾರೆ ಏಕದಿನ ಮುಖಾಮುಖಿಯಲ್ಲಿ ವೆಸ್ಟ್ ಇಂಡೀಸ್ ತಂಡದ ವಿರುದ್ಧ ಟೀಮ್ ಇಂಡಿಯಾ ಮೇಲುಗೈ ಸಾಧಿಸಿದೆ.

ಏಕದಿನ ಸರಣಿಗೆ ಪ್ರಕಟವಾಗಿರುವ ತಂಡಗಳು
ಭಾರತ ತಂಡ: ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ ( ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ), ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.
ವೆಸ್ಟ್ ಇಂಡೀಸ್ ತಂಡ: ನಿಕೋಲಸ್ ಪೂರನ್ (ನಾಯಕ), ಶಾಯ್ ಹೋಪ್ (ಉಪನಾಯಕ), ಶಮರ್ ಬ್ರೂಕ್ಸ್, ಕೀಸಿ ಕಾರ್ಟಿ, ಜೇಸನ್ ಹೋಲ್ಡರ್, ಅಕೇಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರ್ಯಾಂಡನ್ ಕಿಂಗ್, ಕೈಲ್ ಮೇಯರ್ಸ್, ಗುಡಾಕೇಶ್ ಮೋಟಿ, ಕೀಮೋ ಪಾಲ್, ರೋವ್‌ಮನ್ ಪೊವೆಲ್, ಜೇಡನ್ ಸೀಲ್ಸ್

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿಯ ವೇಳಾಪಟ್ಟಿ
• ಪ್ರಥಮ ಏಕದಿನ ಪಂದ್ಯ ಜುಲೈ 22ರಂದು ಪೋರ್ಟ್ ಆಫ್ ಸ್ಪೇನ್ ನ ಕ್ವೀನ್ಸ್ ಪಾರ್ಕ್ ಓವಲ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
• ದ್ವಿತೀಯ ಏಕದಿನ ಪಂದ್ಯ ಜುಲೈ 24ರಂದು ಪೋರ್ಟ್ ಆಫ್ ಸ್ಪೇನ್ ನ ಕ್ವೀನ್ಸ್ ಪಾರ್ಕ್ ಓವಲ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
• ತೃತೀಯ ಏಕದಿನ ಪಂದ್ಯ ಜುಲೈ 27ರಂದು ಪೋರ್ಟ್ ಆಫ್ ಸ್ಪೇನ್ ನ ಕ್ವೀನ್ಸ್ ಪಾರ್ಕ್ ಓವಲ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications