Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs WI 5th T20: ಭಾರತ vs ವೆಸ್ಟ್ ಇಂಡೀಸ್ ಸರಣಿ ನಿರ್ಣಾಯಕ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ

ಭಾನುವಾರ, ಆಗಸ್ಟ್ 13ರಂದು ಫ್ಲೋರಿಡಾದ ಲಾಡರ್‌ಹಿಲ್‌ನಲ್ಲಿ ನಡೆಯುತ್ತಿರುವ ಐದನೇ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ಪ್ರವಾಸಿ ಭಾರತ ಮತ್ತು ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧ ಸೆಣಸಾಡುತ್ತಿವೆ.

ಟಾಸ್ ಗೆದ್ದ ಭಾರತ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ರೋವ್ಮನ್ ಪೊವೆಲ್ ನಾಯಕತ್ವದ ವೆಸ್ಟ್ ಇಂಡೀಸ್ ತಂಡ ಮೊದಲು ಬೌಲಿಂಗ್ ಮಾಡುತ್ತಿದೆ.

IND vs WI: India vs West Indies Series Decider 5th T20 Match Toss Report And Playing 11

ಮೊದಲ ಎರಡು ಪಂದ್ಯಗಳನ್ನು ವೆಸ್ಟ್ ಇಂಡೀಸ್ ತಂಡ ಗೆದ್ದಿದ್ದರೆ, ಮೂರು ಮತ್ತು ನಾಲ್ಕನೇ ಪಂದ್ಯಗಳಲ್ಲಿ ಭಾರತ ಗೆಲುವು ಸಾಧಿಸಿತು. ಈ ಮೂಲಕ ಸರಣಿಯು 2-2 ಅಂತರದಲ್ಲಿ ಸಮಬಲಗೊಂಡಿದೆ. ಹೀಗಾಗಿ ಇಂದಿನ ಅಂತಿಮ ಪಂದ್ಯವು ಸರಣಿ ನಿರ್ಣಾಯಕವಾಗಿದೆ.

ಇಂದಿನ ಪಂದ್ಯವನ್ನು ಗೆಲ್ಲುವ ತಂಡ 3-2 ಅಂತರದಲ್ಲಿ ಐದು ಪಂದ್ಯಗಳ ಟಿ20 ಸರಣಿಯನ್ನು ವಶಪಡಿಸಿಕೊಳ್ಳಲಿದೆ. ಸದ್ಯದ ಪರಿಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಭಾರತ ತಂಡ ಗೆಲ್ಲುವ ನೆಚ್ಚಿನ ತಂಡವಾಗಿದೆ.

ಪಂದ್ಯದ ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ
ಭಾರತ vs ವೆಸ್ಟ್ ಇಂಡೀಸ್ ನಡುವಿನ 5ನೇ ಟಿ20 ಪಂದ್ಯವನ್ನು ದೂರದರ್ಶನ (ಡಿಡಿ ಸ್ಪೋರ್ಟ್ಸ್) ನೆಟ್‌ವರ್ಕ್‌ನಲ್ಲಿ ನೇರಪ್ರಸಾರವಾಗಲಿದೆ. ಇನ್ನು ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮ್ ಆಗಿ ವೀಕ್ಷಿಸಬಹುದು.

ಭಾರತ vs ವೆಸ್ಟ್ ಇಂಡೀಸ್ ಸಂಭಾವ್ಯ ಆಡುವ 11ರ ಬಳಗ

ಭಾರತ: ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್ (ಉಪನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಶ್‌ದೀಪ್ ಸಿಂಗ್, ಯುಜ್ವೇಂದ್ರ ಚಹಾಲ್, ಮುಖೇಶ್ ಕುಮಾರ್.

ವೆಸ್ಟ್ ಇಂಡೀಸ್: ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಶಾಯ್ ಹೋಪ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ರೋವ್ಮನ್ ಪೊವೆಲ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ರೊಮಾರಿಯೋ ಶೆಫರ್ಡ್, ರೋಸ್ಟನ್ ಚೇಸ್, ಅಕೇಲ್ ಹೋಸೇನ್, ಅಲ್ಜಾರಿ ಜೋಸೆಫ್.

Story first published: Sunday, August 13, 2023, 19:41 [IST]
Other articles published on Aug 13, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+