IND vs WI 1st T20: ಭಾರತ vs ವೆಸ್ಟ್ ಇಂಡೀಸ್ ಮೊದಲ ಟಿ20 ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
ಗುರುವಾರ, ಆಗಸ್ಟ್ 3ರಂದು ಟ್ರಿನಿಡಾಡ್‌ನ ತರೂಬಾದ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ಆರಂಭವಾಗಿರುವ ಐದು ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯದಲ್ಲಿ ಪ್ರವಾಸಿ ಭಾರತ ಮತ್ತು ಆತಿಥೇಯ ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಿವೆ.
ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡದ ನಾಯಕ ರೋವ್ಮನ್ ಪೊವೆಲ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಭಾರತ ತಂಡ ಮೊದಲು ಬೌಲಿಂಗ್ ಮಾಡಲಿದೆ.

ಇತ್ತೀಚೆಗೆ ಮುಕ್ತಾಯಗೊಂಡ ಉಭಯ ತಂಡಗಳ ನಡುವಿನ ಏಕದಿನ ಸರಣಿಯಲ್ಲಿ ಭಾರತ ತಂಡವು 2-1 ಅಂತರದಲ್ಲಿ ಗೆಲುವು ಸಾಧಿಸಿತು. ಇದೀಗ ಟಿ20 ಸರಣಿಯಲ್ಲಿ ಅದೇ ಪ್ರಾಬಲ್ಯ ಸಾಧಿಸಲು ಎದುರು ನೋಡುತ್ತಿದೆ.
ಐದು ಪಂದ್ಯಗಳ ಟಿ20 ಸರಣಿಯಲ್ಲಿ ಪ್ರವಾಸಿ ಭಾರತೀಯ ಯುವ ಆಟಗಾರರಿಗೆ ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ಅತ್ಯುತ್ತಮ ವೇದಿಕೆಯಾಗಿದೆ. ಮತ್ತೊಂದೆಡೆ, ಆತಿಥೇಯ ವೆಸ್ಟ್ ಇಂಡೀಸ್ ತಂಡವು ಭಾರತ ಯುವ ತಂಡಕ್ಕೆ ಸವಾಲು ಹಾಕಲು ಎದುರು ನೋಡುತ್ತಿದೆ.

ಇನ್ನು ಈ ಪಂದ್ಯದಲ್ಲಿ ತಿಲಕ್ ವರ್ಮಾ ಮತ್ತು ಮುಖೇಶ್ ಕುಮಾರ್ ಅವರು ಭಾರತ ತಂಡದ ಆಡುವ 11ರ ಬಳಗದಲ್ಲಿ ಕಾಣಿಸಿಕೊಳ್ಳುವ ಮೂಲಕ ಟಿ20 ಕ್ರಿಕೆಟ್‌ಗೆ ಚೊಚ್ಚಲ ಪ್ರವೇಶ ಮಾಡಿದರು.
ಭಾರತ vs ವೆಸ್ಟ್ ಇಂಡೀಸ್ ಆಡುವ 11ರ ಬಳಗ
ವೆಸ್ಟ್ ಇಂಡೀಸ್: ಕೈಲ್ ಮೇಯರ್ಸ್, ಬ್ರಾಂಡನ್ ಕಿಂಗ್, ಜಾನ್ಸನ್ ಚಾರ್ಲ್ಸ್ (ವಿಕೆಟ್ ಕೀಪರ್), ನಿಕೋಲಸ್ ಪೂರನ್, ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್ (ನಾಯಕ), ಜೇಸನ್ ಹೋಲ್ಡರ್, ರೊಮಾರಿಯೋ ಶಫರ್ಡ್, ಅಕೀಲ್ ಹೊಸೈನ್, ಅಲ್ಝಾರಿ ಜೋಸೆಫ್, ಒಮೆಡ್ ಮಕಾಯ್.
ಭಾರತ: ಶುಭ್ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಹಾಲ್, ಅರ್ಶ್‌ದೀಪ್ ಸಿಂಗ್, ಮುಖೇಶ್ ಕುಮಾರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications