IND vs WI 3rd ODI: ಭಾರತ vs ವೆಸ್ಟ್ ಇಂಡೀಸ್ ಸರಣಿ ನಿರ್ಣಾಯಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
ಮಂಗಳವಾರ, ಆಗಸ್ಟ್ 1ರಂದು ಟ್ರಿನಿಡಾಡ್‌ನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಸರಣಿಯ ಅಂತಿಮ ಏಕದಿನ ಪಂದ್ಯದಲ್ಲಿ ಆತಿಥೇಯ ವೆಸ್ಟ್ ಇಂಡೀಸ್ ಮತ್ತು ಪ್ರವಾಸಿ ಭಾರತ ತಂಡಗಳು ಮುಖಾಮುಖಿಯಾಗಿವೆ.

ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡದ ನಾಯಕ ಶಾಯ್ ಹೋಪ್ ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ. ಆದ್ದರಿಂದ ಹಾರ್ದಿಕ್ ಪಾಂಡ್ಯ ನಾಯಕತ್ವದ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.
ಸರಣಿ ನಿರ್ಣಾಯಕ ಪಂದ್ಯಕ್ಕೂ ನಾಯಕ ರೋಹಿತ್ ಶರ್ಮಾ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಭಾರತ ತಂಡದಲ್ಲಿ ಬದಲಾವಣೆ ಮುಂದುವರೆದಿದ್ದು, ಮೂರನೇ ಪಂದ್ಯದಲ್ಲಿ ಎರಡು ಬದಲಾವಣೆಗಳಾಗಿವೆ. ಉಮ್ರಾನ್ ಮಲಿಕ್ ಮತ್ತು ಅಕ್ಷರ್ ಪಟೇಲ್ ಬದಲಿಗೆ ರುತುರಾಜ್ ಗಾಯಕ್ವಾಡ್ ಮತ್ತು ಜಯದೇವ್ ಉನದ್ಕತ್ ಆಡುವ 11ರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.
ಇನ್ನು ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಪ್ರಯೋಗವನ್ನು ಮುಂದುವರೆಸಿದೆ. ಆದರೆ ಕಳೆದ ಪಂದ್ಯದಲ್ಲಿ ವಿಫಲರಾಗಿದ್ದ ಸಂಜು ಸ್ಯಾಮ್ಸನ್ ಮತ್ತು ಸೂರ್ಯಕುಮಾರ್ ಯಾದವ್ ಇಬ್ಬರಿಗೂ ಅವಕಾಶ ನೀಡಲಾಗಿದೆ.
ಭಾರತ ತಂಡ 2006ರಿಂದ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿಯನ್ನು ಸೋತಿಲ್ಲ. ಮೂರನೇ ಪಂದ್ಯದಲ್ಲೂ ನಾಯಕ ರೋಹಿತ್ ಶರ್ಮಾ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಿದ ನಂತರ ಅಪರೂಪದ ಸರಣಿ ಸೋಲುವ ಭೀತಿಯಲ್ಲಿದೆ.
ಮೂರು ಪಂದ್ಯಗಳ ಏಕದಿನ ಸರಣಿ ನಂತರ, ಉಭಯ ತಂಡಗಳು ಐದು ಪಂದ್ಯಗಳ ಟಿ20 ಸರಣಿಯಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ.
ಭಾರತ vs ವೆಸ್ಟ್ ಇಂಡೀಸ್ ಆಡುವ 11ರ ಬಳಗ
ಭಾರತ: ಹಾರ್ದಿಕ್ ಪಾಂಡ್ಯ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಯದೇವ್ ಉನಾದ್ಕಟ್, ಮುಖೇಶ್ ಕುಮಾರ್.
ವೆಸ್ಟ್ ಇಂಡೀಸ್: ಬ್ರ್ಯಾಂಡನ್ ಕಿಂಗ್, ಕೈಲ್ ಮೇಯರ್ಸ್, ಅಲಿಕ್ ಅಥಾನಾಜೆ, ಶಾಯ್ ಹೋಪ್ (ನಾಯಕ/ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮೆಯರ್, ಕೀಸಿ ಕಾರ್ಟಿ, ರೊಮಾರಿಯೋ ಶೆಫರ್ಡ್, ಯಾನಿಕ್ ಕ್ಯಾರಿಯಾ, ಅಲ್ಜಾರಿ ಜೋಸೆಫ್, ಗುಡಾಕೇಶ್ ಮೋಟಿ, ಜೇಡನ್ ಸೀಲ್ಸ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications