IND vs WI 2nd T20: ಭಾರತ vs ವೆಸ್ಟ್ ಇಂಡೀಸ್ 2ನೇ ಟಿ20 ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಯ ಎರಡನೇ ಪಂದ್ಯ ಆರಂಭವಾಗಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಆತಿಥೇಯ ವೆಸ್ಟ್ ಇಂಡೀಸ್ ತಂಡ ಆರಂಭದಲ್ಲಿ ಬೌಲಿಂಗ್ ದಾಳಿ ನಡೆಸುವ ಸವಾಲು ಪಡೆದುಕೊಂಡಿದೆ.
ಇನ್ನು ಈ ಪಂದ್ಯದಲ್ಲಿ ಆತಿಥೆಯ ವೆಸ್ಟ್ ಇಂಡೀಸ್ ತಂಡ ಯಾವುದೇ ಬದಲಾವಣೆಯಿಲ್ಲದೆ ಕಣಕ್ಕಿಳಿದಿದ್ದರೆ ಟೀಮ್ ಇಂಡಿಯಾ ಒಂದು ಬದಲಾವಣೆ ಮಾಡಿಕೊಂಡಿದೆ. ಸ್ಪಿನ್ನರ್ ಕುಲ್‌ದೀಪ್ ಯಾದವ್ ಗಾಯಕ್ಕೆ ತುತ್ತಾಗಿರುವ ಕಾರಣ ಅವರ ಸ್ಥಾನದಲ್ಲಿ ರವಿ ಬಿಷ್ಣೋಯ್‌ಗೆ ಅವಕಾಶ ದೊರೆತಿದೆ. ಕುಲ್‌ದೀಪ್ ಯಾದವ್ ಕೈಗೆ ಗಾಯವಾಗಿದೆ ಎಂದು ನಾಯಕ ಹಾರ್ದಿಕ್ ಪಾಂಡ್ಯ ಮಾಹಿತಿ ನೀಡಿದ್ದಾರೆ.

ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಿನ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತೀವ್ರ ಪೈಪೋಟಿ ನೀಡಿದ ಹೊರತಾಗಿಯೂ ಆಘಾತಕಾರಿ ಸೋಲು ಅನುಭವಿಸಿತ್ತು. ಇದೀಗ ಎರಡು ತಮಡಗಳು ಮತ್ತೊಮ್ಮೆ ಮುಖಾಮುಖಿಯಾಗಿದೆ. ಟೀಮ್ ಇಂಡಿಯಾ ಮೊದಲ ಪಂದ್ಯದಲ್ಲಿ ಅನುಭವಿಸಿದ ಆಘಾತಕಾರಿ ಸೋಲಿಗೆ ಪ್ರತಿಯಾಗಿ ಈ ಪಂದ್ಯದಲ್ಲಿ ಗೆದ್ದು ಸರಣಿಯನ್ನು ಸಮಬಲಗೊಳಿಸುವ ಲೆಕ್ಕಾಚಾರದಲ್ಲಿದಲ್ಲಿದೆ.
ಇನ್ನು ಸರಣಿಯ ಮೊದಲ ಪಂದ್ಯ ಟ್ರಿನಿಡಾಡ್‌ನ ಬ್ರಿಯಾನ್ ಲಾರಾ ಕ್ರೀಡಾಂಗಣದಲ್ಲಿ ಆಯೋಜನೆಯಾಗಿದ್ದರೆ ಇಂದಿನ ಪಂದ್ಯ ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆಯಲಿದ್ದು ಆಯೋಜನೆಯಾಗಲಿದೆ. ರಾತ್ರಿ 8 ಗಂಟೆಗೆ ಪಂದ್ಯ ಆರಂಭವಾಗಲಿದ್ದು 7:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಡಿಡಿ ಸ್ಪೋರ್ಟ್ಸ್‌ನಲ್ಲಿ ಈ ಪಂದ್ಯದ ನೇರಪ್ರಸಾರವನ್ನು ವೀಕ್ಷಿಸುವ ಅವಕಾಶವಿದೆ. ಅಲ್ಲದೆ ಫ್ಯಾನ್ ಕೋಡ್ ಹಾಗೂ ಜಿಯೋ ಜಿನಿಮಾದಲ್ಲಿಯೂ ಈ ಪಂದ್ಯದ ಲೈವ್‌ಸ್ಟ್ರೀಮಿಂಗ್ ವೀಕ್ಷಿಸಬಹುದು.
ವೆಸ್ಟ್ ಇಂಡೀಸ್ ಆಡುವ ಬಳಗ: ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಜಾನ್ಸನ್ ಚಾರ್ಲ್ಸ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ರೋವ್ಮನ್ ಪೊವೆಲ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ರೊಮಾರಿಯೋ ಶೆಫರ್ಡ್, ಜೇಸನ್ ಹೋಲ್ಡರ್, ಅಕೇಲ್ ಹೋಸೇನ್, ಅಲ್ಜಾರಿ ಜೋಸೆಫ್, ಓಬೆಡ್ ಮೆಕಾಯ್
ಬೆಂಚ್: ಶಾಯ್ ಹೋಪ್, ರೋಸ್ಟನ್ ಚೇಸ್, ಒಶಾನೆ ಥಾಮಸ್, ಓಡಿಯನ್ ಸ್ಮಿತ್
ಟೀಮ್ ಇಂಡಿಯಾ ಆಡುವ ಬಳಗ: ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಾಲ್, ಮುಖೇಶ್ ಕುಮಾರ್, ರವಿ ಬಿಷ್ಣೋಯ್
ಬೆಂಚ್: ಯಶಸ್ವಿ ಜೈಸ್ವಾಲ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಕುಲದೀಪ್ ಯಾದವ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications