IND vs WI: ತನ್ನ ಅಂತಿಮ ಗುರಿ ಏನೆಂದು ಬಹಿರಂಗಪಡಿಸಿದ ಮ್ಯಾಚ್ ಫಿನಿಶರ್ ದಿನೇಶ್ ಕಾರ್ತಿಕ್

ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡಿರುವ ಟೀಂ ಇಂಡಿಯಾ 3 ಪಂದ್ಯಗಳ ಏಕದಿನ ಸರಣಿ ಜಯದ ನಂತರ, 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯರ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದು, ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ.
ಟ್ರಿನಿಡಾಡ್‌ನ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ಐದು ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯದಲ್ಲಿ ಭಾರತವು ವೆಸ್ಟ್ ಇಂಡೀಸ್ ವಿರುದ್ಧ 68 ರನ್‌ಗಳ ಅಂತರದ ಸುಲಭ ಜಯ ಸಾಧಿಸುವುದರ ಮೂಲಕ ಭಾರತ ತಂಡ ಶುಭಾರಂಭ ಮಾಡಿದೆ.
IND vs WI: ಮೊದಲ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ
ನಾಯಕ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಆತಿಥೇಯ ತಂಡದ ವಿರುದ್ಧ ಉತ್ತಮ ಮೊತ್ತ ಕಲೆಹಾಕಿತ್ತು. ನಾಯಕ ರೋಹಿತ್ ಶರ್ಮಾ ಅವರ ಅರ್ಧ ಶತಕ ಮತ್ತು ಕೊನೆಯಲ್ಲಿ ದಿನೇಶ್ ಕಾರ್ತಿಕ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 190 ರನ್ ಗಳಿಸಿ, ಎದುರಾಳಿ ತಂಡಕ್ಕೆ 191 ರನ್‌ಗಳ ಬೃಹತ್ ಗುರಿ ನೀಡಿತ್ತು. ಆದರೆ
ಭಾರತ ನೀಡಿದ್ದ 191 ರನ್‌ಗಳ ಗುರಿ ಬೆನ್ನತ್ತಿದ ಆತಿಥೇಯ ವೆಸ್ಟ್ ಇಂಡೀಸ್ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 122 ರನ್ ಗಳಿಸಿ ಸೋಲೊಪ್ಪಿಕೊಂಡಿತು.

ಮೂರು ವರ್ಷಗಳ ನಂತರ ತಂಡಕ್ಕೆ ಮರಳಿದ ದಿನೇಶ್ ಕಾರ್ತಿಕ್
ಅನುಭವಿ ವಿಕೆಟ್‌ಕೀಪರ್ ದಿನೇಶ್ ಕಾರ್ತಿಕ್ ಅವರು ಪ್ರಸ್ತುತ ಭಾರತೀಯ ತಂಡದಲ್ಲಿ ತಾವು ಸಂಪೂರ್ಣವಾಗಿ ಆನಂದಿಸುತ್ತಿರುವುದಾಗಿ ತಿಳಿಸಿದರು. ಅನುಭವಿ ವಿಕೆಟ್ ಕೀಪರ್- ಬ್ಯಾಟ್ಸ್‌ಮನ್ ಕಾರ್ತಿಕ್ ತಂಡದ ವಾತಾವರಣದಲ್ಲಿ ಶಾಂತತೆಯನ್ನು ತರಲು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ನಾಯಕ ರೋಹಿತ್ ಶರ್ಮಾ ಅವರಿಗೆ ಮನ್ನಣೆ ನೀಡಿದ್ದಾರೆ.
ದಿನೇಶ್ ಕಾರ್ತಿಕ್ ಸುಮಾರು ಮೂರು ವರ್ಷಗಳ ನಂತರ ಭಾರತ ಕ್ರಿಕೆಟ್ ತಂಡಕ್ಕೆ ಮರಳಿದರು ಮತ್ತು ಈಗಾಗಲೇ ಕೆಲವು ನಿರ್ಣಾಯಕ ಪ್ರದರ್ಶನಗಳನ್ನು ನೀಡಿದ್ದಾರೆ. ಬಲಗೈ ಆಟಗಾರ ದಕ್ಷಿಣ ಆಫ್ರಿಕಾ ವಿರುದ್ಧ ತನ್ನ ಮೊದಲ ಟಿ20 ಪಂದ್ಯದಲ್ಲಿ ಅರ್ಧ ಶತಕವನ್ನು ಗಳಿಸಿದರು, ನಂತರ ಅವರು ತಂಡದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.

ದಿನೇಶ್ ಕಾರ್ತಿಕ್ 19 ಎಸೆತಗಳಲ್ಲಿ ಅಜೇಯ 41 ರನ್
ಶುಕ್ರವಾರ, ಜುಲೈ 29ರಂದು ಟ್ರಿನಿಡಾಡ್‌ನ ತರೂಬಾದಲ್ಲಿರುವ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯವನ್ನು ಭಾರತ 68 ರನ್‌ಗಳಿಂದ ಗೆದ್ದ ನಂತರ ದಿನೇಶ್ ಕಾರ್ತಿಕ್ ಪಂದ್ಯ ಶ್ರೇಷ್ಠ ಆಟಗಾರರಾದರು. 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ದಿನೇಶ್ ಕಾರ್ತಿಕ್ ಅಜೇಯ 19 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳ ಸಹಾಯದಿಂದ ಅಜೇಯ 41 ರನ್ ಬಾರಿಸಿದರು.
ಈ ವರ್ಷದ ಕೊನೆಯಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು ಭಾರತ ತನ್ನ ಯೋಜನೆಗಳನ್ನು ರೂಪಿಸುತ್ತಿದೆ ಎಂದು ತಮಿಳುನಾಡು ಮೂಲದ ದಿನೇಶ್ ಕಾರ್ತಿಕ್ ಅಭಿಪ್ರಾಯಪಟ್ಟಿದ್ದಾರೆ.
ಟಿ20 ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡುವುದು
ಐದು ಪಂದ್ಯಗಳ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದ ನಂತರ, ದಿನೇಶ್ ಕಾರ್ತಿಕ್ ಅವರನ್ನು ಅವರ ಸಹ ಆಟಗಾರ ರವಿಚಂದ್ರನ್ ಅಶ್ವಿನ್ ಸಂದರ್ಶನ ಮಾಡಿದರು. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಈ ವಿಡಿಯೋವನ್ನು ಅಪ್‌ಲೋಡ್ ಮಾಡಲಾಗಿದೆ.
"ಇದು ತುಂಬಾ ವಿಭಿನ್ನವಾದ ತಂಡ ಎಂದು ನಾನು ಭಾವಿಸುತ್ತೇನೆ. ಈ ಸೆಟಪ್‌ನಲ್ಲಿ ನಾನು ನಿಜವಾಗಿಯೂ ಆನಂದಿಸುತ್ತಿದ್ದೇನೆ ಎಂದು ಒಪ್ಪಿಕೊಳ್ಳಬೇಕು. ಸುತ್ತಲೂ ತೋರುವ ಶಾಂತತೆ, ಬಹಳಷ್ಟು ಕ್ರೆಡಿಟ್ ಕೋಚ್ ಮತ್ತು ನಾಯಕನಿಗೆ ಸಲ್ಲಬೇಕು. ಇವೆಲ್ಲವೂ ಆಟದ ಈ ಹಂತದಲ್ಲಿ ನಾವು ಹೊಂದಿರಬೇಕಾದ ಸಣ್ಣ ಟಿಕ್-ಬಾಕ್ಸ್‌ಗಳಾಗಿವೆ. ಆದರೆ ನಿಸ್ಸಂಶಯವಾಗಿ, ಟಿ20 ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡುವುದು ತನ್ನ ಅಂತಿಮ ಗುರಿಯಾಗಿದೆ," ಎಂದು ದಿನೇಶ್ ಕಾರ್ತಿಕ್ ತಿಳಿಸಿದರು.

ಆರ್‌ಸಿಬಿ ಪರ ಅತ್ಯುತ್ತಮ ಪ್ರದರ್ಶನ
ದಿನೇಶ್ ಕಾರ್ತಿಕ್ 2019ರ ವಿಶ್ವಕಪ್ ಸೆಮಿಫೈನಲ್ ನಂತರ ಭಾರತ ತಂಡದಲ್ಲಿ ಸ್ಥಾನ ಕಳೆದುಕೊಂಡರು. ಆದರೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಕ್ಕಾಗಿ ನೀಡಿದ ಅದ್ಭುತ ಪ್ರದರ್ಶನದ ನಂತರ, ಕಾರ್ತಿಕ್ ತನ್ನ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ಜೀವ ತುಂಬಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications