ಮೊದಲ ಹತ್ತು ಓವರ್‌ಗಳ ಬಳಿಕ ನಾವು ಇದನ್ನು ನಿರೀಕ್ಷಿಸಿರಲಿಲ್ಲ: ರೋಹಿತ್ ಶರ್ಮಾ ಹೀಗಂದಿದ್ಯಾಕೆ!

ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯ ಅಂತ್ಯವಾಗಿದ್ದು ಭಾರತ ಈ ಪಂದ್ಯವನ್ನು ಭರ್ಜರಿತಾಗಿ ಗೆದ್ದುಕೊಂಡಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಅಮೋಘ ಪ್ರದರ್ಶನ ನೀಡಿರುವ ಭಾರತ ತಂಡ 8 ರನ್‌ಗಳ ಬೃಹತ್ ಅಂತರದಿಂದ ಗೆಲುವು ಸಾಧಿಸಿದೆ. ಈ ಮೂಲಕ ಈ ಸರಣಿಯಲ್ಲಿಯೂ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದೆ.
ಆದರೆ ಈ ಪಂದ್ಯದ ಮುಕ್ತಾಯದ ಬಳಿಕ ನಾಯಕ ರೋಹಿತ್ ಶರ್ಮಾ ಕುತೂಹಲಕಾರಿ ಹೇಳಿಕೆಯೊಂದನ್ನು ನೀಡಿದ್ದಾರೆ. ಮೊದಲಿಗೆ ಬ್ಯಾಟಿಂಗ್ ಮಾಡಿದ ಭಾರತ ತಂಡದ ಪರವಾಗಿ ಸ್ವತಃ ನಾಯಕ ರೋಹಿತ್ ಶರ್ಮಾ ಸ್ಪೋಟಕ ಅರ್ಧ ಶತಕ ಬಾರಿಸಿದ್ದರು. ಆದರೆ ಮೊದಲ ಹತ್ತು ಓವರ್‌ಗಳ ಆಟ ಮುಗಿದಾಗ ಭಾರತ 190 ರನ್‌ಗಳನ್ನು ಗಳಿಸಲಿದೆ ಎಂದು ನಿರೀಕ್ಷೆ ಮಾಡಿರಲಿಲ್ಲ ಎಂದಿದ್ದಾರೆ.

ಪಿಚ್ ಕಠಿಣವಾಗಿತ್ತು ಎಂದ ರೋಹಿತ್
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೊದಲ ಟಿ20 ಪಂದ್ಯ ನಡೆದ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ಪಿಚ್ ಬ್ಯಾಟರ್‌ಗಳಿಗೆ ಸವಾಲಿನಿಂದ ಕೂಡಿತ್ತು ಎಂಬುದನ್ನು ರೋಹಿತ್ ಶರ್ಮಾ ಹೇಳಿಕೊಂಡಿದ್ದಾರೆ. ಈ ಕಾರಣದಿಂದಾಗಿ 190 ರನ್‌ಗಳನ್ನು ಗಳಿಸಲಿದೆ ಎಂದು ನಾನು ನಿರೀಕ್ಷಿಸಿರಲಿಲ್ಲ. ಆಧರೆ ಅಂತಿಮ ಓವರ್‌ಗಳಲ್ಲಿ ಭಾರತೀಯ ಬ್ಯಾಟರ್‌ಗಳು ಅದ್ಭುತವಾದ ಪ್ರದರ್ಶನವನ್ನು ನೀಡಿದರು ಎಂದು ದಿನೇಶ್ ಕಾರ್ತಿಕ್ ಹಾಗೂ ಆರ್ ಅಶ್ವಿನ್ ಪ್ರದರ್ಶನವನ್ನು ವಿಶೇಷವಾಗಿ ಪ್ರಶಂಸಿಸಿದ್ದಾರೆ.

ಆಟಗಾರರನ್ನು ಹೊಗಳಿದ ನಾಯಕ
ಭಾರತ ಬ್ಯಾಟಿಂಗ್‌ನಲ್ಲಿ ನೀಡಿದ ಅದ್ಭುತ ಪ್ರದರ್ಶನದ ಬಗ್ಗೆ ನಾಯಕ ರೋಹಿತ್ ಶರ್ಮಾ ವಿಶೇಷ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. "ತಂಡದ ಹುಡುಗರಿಂದ ಬಂದ ಶ್ರೇಷ್ಠವಾದ ಪ್ರದರ್ಶನ ಇದಾಗಿದೆ. ಅದ್ಭುತವಾದ ಪ್ರಯತ್ನ ಇದಾಗಿತ್ತು. ಕೆಲ ಪಿಚ್‌ಗಳು ಇಂಥಾ ಪ್ರದರ್ಶನಗಳಿಗೆ ಅವಕಾಶವನ್ನು ನೀಡುವುದಿಲ್ಲ. ಅಂಥಾ ಸಂದರ್ಭದಲ್ಲಿ ಅವುಗಳನ್ನು ನಾವು ಯಾವ ರೀತಿಯಾಗಿ ಎದುರಿಸುತ್ತೇವೆ ಎಂಬುದು ಪ್ರಮುಖವಾಗುತ್ತದೆ. ಹೀಗಾಗಿ ಕೌಶಲ್ಯ ಹಾಗೂ ಸಾಮರ್ಥ್ಯಗಳನ್ನು ಬೆಂಬಲಿಸುವುದು ಬಹಳ ಪ್ರಮುಖವಾಗುತ್ತದೆ" ಎಂದಿದ್ದಾರೆ ನಾಯಕ ರೋಹಿತ್ ಶರ್ಮಾ.

ನಾಯಕನ ಆಟವಾಡಿದ ರೋಹಿತ್
ಇನ್ನು ರೋಹಿತ್ ಶರ್ಮಾ ಮೊದಲ ಪಂದ್ಯದಲ್ಲಿ ಸೂರ್ಯಕುಮಾರ್ ಜೊತೆಗೆ ಆರಂಭಿಕನಾಗಿ ಕಣಕ್ಕಿಳಿದು ಅಮೋಘ ಪ್ರದರ್ಶನ ನೀಡಿದ್ದಾರೆ. 44 ಎಸೆತಗಳಲ್ಲಿ ರೋಹಿತ್ ಶರ್ಮಾ 64 ರನ್‌ಗಳನ್ನು ಸಿಡಿಸಿದರು. ಅಲ್ಲದೆ ಸೂರ್ಯಕುಮಾರ್ ಜೊತೆಗೆ ಮೊದಲ ವಿಕೆಟ್‌ಗೆ 44 ರನ್‌ಗಳ ಜೊತೆಯಾಟವನ್ನು ಆಡಿದರು. ಆದರೆ ಬಳಿಕ ಬಂದ ಶ್ರೇಯಸ್ ಐಯ್ಯರ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ ಹಾಘೂ ರವೀಂದ್ರ ಜಡೇಜಾ ಅವರಿಂದ ನೀರಸ ಪ್ರದರ್ಶನ ಬಂದಿತು.

ಮಿಂಚಿದ ಫಿನಿಷರ್ ಡಿಕೆ!
ಇನ್ನು 16ನೇ ಓವರ್‌ನ ಸಂದರ್ಭದಲ್ಲಿ ಭಾರತದ ಪ್ರಮುಖ 6 ವಿಕೆಟ್ ಕಳೆದುಕೊಂಡಿತ್ತು. ಈ ಸಂದರ್ಭದಲ್ಲಿ ದಿನೇಶ್ ಕಾರ್ತಿಕ್ ಹಾಗೂ ಆರ್ಅಶ್ವಿನ್ ಜೋಡಿಯಿಂದ ಅಮೋಘ ಪ್ರದರ್ಶನ ಬಂದಿತ್ತು. ಅದರಲ್ಲೂ ದಿನೇಶ್ ಕಾರ್ತಿಕ್ ತಮ್ಮ ಅಬ್ಬರದ ಶೈಲಿಯ ಬ್ಯಾಟಿಂಗ್ ಮೂಲಕ ಮತ್ತೊಮ್ಮೆ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಡಿಕೆ ಹಾಗೂ ಅಶ್ವಿನ್ ಜೋಡಿ ಅಂತಿಮ ನಾಲ್ಕು ಓವರ್‌ಗಳಲ್ಲಿ ಬರೊಬ್ಬರಿ 52 ರನ್‌ಗಳನ್ನು ಕಲೆಹಾಕುವಲ್ಲಿ ಯಶಸ್ವಿಯಾಯಿತು. ದಿನೇಶ್ ಕಾರ್ತಿಕ್ 19 ಎಸೆತಗಳಲ್ಲಿ 41 ರನ್ ಬಾರಿಸುವ ಮೂಲಕ ತಮ್ಮ ಮೇಲಿನ ನಿರೀಕ್ಷೆಯನ್ನು ಹುಸಿಗೊಳಿಸಲಿಲ್ಲ. ಹೀಗಾಗಿ ಭಾರತ 191 ರನ್‌ಗಳ ಬೃಹತ್ ಗುರಿಯನ್ನು ವಿಂಡೀಸ್ ಪಡೆಗೆ ನೀಡಿತು. ಆದರೆ ವೆಸ್ಟ್ ಇಂಡೀಸ್ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 122 ರನ್‌ಗಳನ್ನು ಮಾತ್ರವೇ ಗಳಿಸಲು ಯಶಸ್ವಿಯಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications