ಆತನ ಆತ್ಮವಿಶ್ವಾಸ ಕುಗ್ಗಿಸಬೇಡಿ: ಭಾರತೀಯ ಬ್ಯಾಟರ್ ಬಗ್ಗೆ ಎಚ್ಚರಿಕೆ ನೀಡಿದ ಮಾಜಿ ಕ್ರಿಕೆಟಿಗ

ಟಿ20 ವಿಶ್ವಕಪ್‌ನ ದೃಷ್ಟಿಯಿಂದ ಭಾರತ ಸಾಕಷ್ಟು ಪ್ರಯೋಗಗಳನ್ನು ಮಾಡುತ್ತಿದೆ. ಪ್ರತಿ ಸರಣಿಯಲ್ಲಿಯೂ ಭಿನ್ನ ತಂತ್ರಗಳೊಂದಿಗೆ ಭಾರತ ಮಹತ್ವದ ಟೂರ್ನಿಗಾಗಿ ಸಿದ್ಧತೆ ನಡೆಸುತ್ತಿದೆ. ಇನ್ನು ಕೆಲ ಸ್ಥಾನಗಳ ಮ್ಯಾನೇಜ್‌ಮೆಂಟ್ ಬಹಳಷ್ಟು ತಲೆಕೆಡಿಸಿಕೊಂಡಿದ್ದು ಯಾವ ಆಟಗಾರರಿಗೆ ಯಾವ ಕ್ರಮಾಂಕ ಸೂಕ್ತ ಎಂಬ ಬಗ್ಗೆ ಪ್ರಯೋಗಗಳನ್ನು ನಡೆಸುತ್ತಿದೆ. ಅದರಲ್ಲಿ ಪ್ರಮುಖವಾಗಿ ಆರಂಭಿಕ ಸ್ಥಾನ. ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳಲ್ಲಿ ಆರಂಭಿಕನಾಗಿ ಸೂರ್ಯಕುಮಾರ್ ಯಾದವ್ ಕಣಕ್ಕಿಳಿಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಆದರೆ ಆರಂಭಿಕನಾಗಿ ಸೂರ್ಯಕುಮಾರ್ ಹೇಳಿಕೊಳ್ಳುವಂತಾ ಪ್ರದರ್ಶನ ನೀಡಲು ಎರಡು ಪಂದ್ಯಗಳಲ್ಲಿಯೂ ವಿಫಲವಾಗಿದ್ದಾರೆ. ಉತ್ತಮ ಆರಂಭ ಪಡೆದುಕೊಂಡರು ಅದನ್ನು ದೊಡ್ಡ ಮೊತ್ತವನ್ನಾಗಿ ಪರಿವರ್ತಿಸಲು ಸೂರ್ಯಕುಮಾರ್ ಆರಂಭಿಕನಾಗಿ ವಿಫಲವಾಗಿದ್ದಾರೆ. ಈ ಬಗ್ಗೆ ಮಾಜಿ ಕ್ರಿಕೆಟಿಗ ಕ್ರಿಸ್ ಶ್ರೀಕಾಂತ್ ಪ್ರತಿಕ್ರಿಯಿಸಿದ್ದು ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್‌ಗೆ ಎಚ್ಚರಿಕೆ ಸಂದೇಶವನ್ನು ನೀಡಿದ್ದಾರೆ.

ಆರಂಭಿಕನಾಗಿ ಸೂರ್ಯಕುಮಾರ್ ಯಾಕೆ?
ಭಾರತ ತಂಡದ ಆರಂಭಿಕನಾಗ ಸೂರ್ಯಕುಮಾರ್ ಯಾದವ್ ಅವರನ್ನು ಯಾವ ಕಾರಣಕ್ಕಾಗಿ ಕಣಕ್ಕಿಳಿಸಲಾಗಿದೆ ಎಂಬುದು ಗೊಂದಲಕಾರಿಯಾಗಿದೆ ಎಂದು ಶ್ರೀಕಾಂತ್ ಹೇಳಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಉತ್ತಮವಾಗಿ ಪ್ರದರ್ಶನ ನೀಡುತ್ತಿದ್ದ ಆಟಗಾರನನ್ನು ಆರಂಭಿಕನಾಗಿ ಕಣಕ್ಕಿಳಿಸುವ ಅಗತ್ಯವೇನಿತ್ತು ಎಂದು ಶ್ರೀಕಾಂತ್ ಪ್ರಶ್ನಿಸಿದ್ದಾರೆ. "ಸೂರ್ಯಕುಮಾರ್ ಯಾದವ್ ನಾಲ್ಕನೇ ಕ್ರಮಾಂಕದಲ್ಲಿ ಅದ್ಭುತ ಆಟಗಾರ. ಟಿ20 ವಿಶ್ವಕಪ್‌ನಲ್ಲಿ ಅವರು ನಾಲ್ಕನೇ ಕ್ರಮಾಂಕದಲ್ಲಿಯೇ ಕಣಕ್ಕಿಳಿಯಬೇಕು. ಅವರನ್ನು ಆರಂಭಿಕನಾಗಿ ಯಾಕೆ ಕಣಕ್ಕಿಳಿಸುತ್ತಿದ್ದೀರಿ? ಆರಂಭಿಕನಾಗಿ ಯಾರಾದರೂ ಬೇಕೆಂದಿದ್ದರೆ ಶ್ರೇಯಸ್ ಐಯ್ಯರ್ ಅವರನ್ನು ಕೈಬಿಡಿ ಇಶಾನ್ ಕಿಶನ್‌ಗೆ ಅವಕಾಶ ನೀಡಿ" ಎಂದಿದ್ದಾರೆ ಮಾಜಿ ಕ್ರಿಕೆಟಿಗ ಕ್ರಿಸ್ ಶ್ರೀಕಾಂತ್.

ಆತ್ಮವಿಶ್ವಾಸ ಕುಗ್ಗಿಸಬೇಡಿ
ಮುಂದುವರಿದು ಮಾತನಾಡಿದ ಶ್ರೀಕಾಂತ್ ಸೂರ್ಯಕುಮಾರ್ ಅವರಂತಾ ಆಟಗಾರರ ಭವಿಷ್ಯವನ್ನು ಹಾಳುಮಾಡಬೇಡಿ ಎಂದು ಶ್ರೀಕಾಂತ್ ಎಚ್ಚರಿಸಿದ್ದಾರೆ. "ನಾನು ಹೇಳುತ್ತಿರುವುದು ಸರಳವಾದ ವಿಷಯ. ಸೂರ್ಯಕುಮಾರ್ ರೀತಿಯ ಆಟಗಾರನ ಭವಿಷ್ಯವನ್ನು ಹಾಳು ಮಾಡಬೇಡಿ. ದಯವಿಟ್ಟು ಅದನ್ನು ಮಾಡದರಿ. ಒಂದೆರಡು ವೈಫಲ್ಯದ ಬಳಿಕ ಆತ ತನ್ನ ಆತ್ಮವಿಶ್ವಾಸವನ್ನೇ ಕಳೆದುಕೊಳ್ಳಬಹುದು. ಕ್ರಿಕೆಟ್ ಎಂಬುದು ಆತ್ಮವಿಶ್ವಾಸದ ಆಟ" ಎಂದು ಮಾಜಿ ಕ್ರಿಕೆಟಿಗ ಶ್ರೀಕಾಂತ್ ಹೇಳೀಕೆ ನೀಡಿದ್ದಾರೆ.

ಎರಡನೇ ಟಿ20 ಪಂದ್ಯದಲ್ಲೂ SKY ಆರಂಭಿಕನಾಗಿ ವೈಫಲ್ಯ
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಸೂರ್ಯಕುಮಾರ್ ಯಾದವ್ ಎರಡನೇ ಪಂದ್ಯದಲ್ಲಿಯೂ ರೋಹಿತ್ ಶರ್ಮಾ ಜೊತೆಗೆ ಇನ್ನಿಂಗ್ಸ್ ಆರಂಭಿಸಿದ್ದರು. ಸೈಂಟ್ ಕಿಟ್ಸ್‌ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಎಸೆತಗಳನ್ನು ಎದುರಿಸಿದ ಸೂರ್ಯಕುಮಾರ್ ಯಾದವ್ 11 ರನ್‌ಗಳನ್ನಷ್ಟೇ ಗಳಿಸಿ ವಿಕೆಟ್ ಒಪ್ಪಿಸಿದರು.

ಮೂರನೇ ಪಂದ್ಯದ ಮೇಲೆ ಕುತೂಹಲ
ಎರಡನೇ ಪಂದ್ಯದಲ್ಲಿ ಸೋಲು ಅನುಭವಿಸಿದ ಕಾರಣ ಐದು ಪಂದ್ಯಗಳ ಟಿ20 ಸರಣಿ ಈಗ ಸಮಬಲದಲ್ಲಿದೆ. ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಭಾರತ ಸರಣಿಯಲ್ಲಿ ಮೇಲುಗೈ ಸಾಧಿಸಲು ಯಶಸ್ವಿಯಾಗಿತ್ತು. ಆದರೆ ಎರಡನೇ ಪಂದ್ಯವನ್ನು ಆತಿಥೇಯ ತಂಡ ಗೆಲ್ಲುವ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿದೆ. ಇಂದು ಐದು ಪಂದ್ಯಗಳ ಸರಣಿಯಲ್ಲಿ ಮೂರನೇ ಟಿ20 ಪಂದ್ಯ ನಡೆಯಲಿದ್ದು ಮತ್ತೆ ಸರಣಿಯಲ್ಲಿ ಯಾರು ಮು್ನನಡೆ ಕಾಯ್ದುಕೊಳ್ಳಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಈಗಾಗಲೇ ಏಕದಿನ ಸರಣಿ ಕಳೆದುಕೊಂಡಿರುವ ಕಾರಣ ಟಿ20 ಸರಣಿಯನ್ನಾದರೂ ಉಳಿಸಿಕೊಳ್ಳುವ ಪ್ರಯತ್ನದಲ್ಲಿದೆ ಆತಿಥೇಯ ವೆಸ್ಟ್ ಇಂಡೀಸ್ ತಂಡ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications