ಭಾರತ vs ವೆಸ್ಟ್ ಇಂಡೀಸ್: ದ್ವಿತೀಯ ಏಕದಿನ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಸೇರಿದ ಮೂವರು ಆಟಗಾರರು

ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೆಸ್ಟ್ ಹಾಗೂ ಏಕದಿನ ಸರಣಿಗಳ ಹೀನಾಯ ಸೋಲಿನ ಮುಖಭಂಗಕ್ಕೊಳಗಾಗಿದ್ದ ಟೀಮ್ ಇಂಡಿಯಾ ಸದ್ಯ ತವರಿನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಪಾಲ್ಗೊಂಡು ಮೊದಲನೇ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಶುಭಾರಂಭ ಮಾಡಿದೆ. ಹೌದು, ಭಾರತ ಪ್ರವಾಸವನ್ನು ಕೈಗೊಂಡಿರುವ ವೆಸ್ಟ್ ಇಂಡೀಸ್ ಗುಜರಾತಿನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಎದುರಿಸುತ್ತಿದೆ. ಕಳೆದ ಭಾನುವಾರದಂದು ನಡೆದ ಇತ್ತಂಡಗಳ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೀಂ ಇಂಡಿಯಾ 6 ವಿಕೆಟ್‍ಗಳ ಭರ್ಜರಿ ಜಯವನ್ನು ಸಾಧಿಸಿದೆ.
ಇನ್ನು ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯ ಆರಂಭವಾಗುವುದಕ್ಕೂ ಮುನ್ನ ಟೀಮ್ ಇಂಡಿಯಾದ ಕೆಲ ಪ್ರಮುಖ ಆಟಗಾರರು ಕೊರೊನಾ ಸೋಂಕಿಗೆ ಒಳಗಾಗಿದ್ದರು. ಹೌದು, ಟೀಮ್ ಇಂಡಿಯಾದ ಅನುಭವಿ ಆಟಗಾರ ಶಿಖರ್ ಧವನ್, ಯುವ ಕ್ರಿಕೆಟಿಗ ಋತುರಾಜ್ ಗಾಯಕ್ವಾಡ್, ನವದೀಪ್ ಸೈನಿ ಹಾಗೂ ಶ್ರೇಯಸ್ ಐಯ್ಯರ್ ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದರು ಎಂಬ ಸುದ್ದಿ ಹರಿದಾಡಿತ್ತು. ಅದರಂತೆ ಈ ಯಾವುದೇ ಆಟಗಾರರು ಕೂಡ ವೆಸ್ಟ್ ಇಂಡೀಸ್ ವಿರುದ್ಧದ ಪ್ರಥಮ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಹಾಗೂ ಭಾರತದ ಉಪನಾಯಕ ಕೆಎಲ್ ರಾಹುಲ್ ಕೂಡ ವೈಯಕ್ತಿಕ ಕಾರಣಗಳಿಂದ ವೆಸ್ಟ್ ಇಂಡೀಸ್ ವಿರುದ್ಧದ ಪ್ರಥಮ ಏಕದಿನ ಪಂದ್ಯಕ್ಕೆ ಅಲಭ್ಯರಾಗಿದ್ದರು.

ಮಯಾಂಕ್ ಅಗರ್ವಾಲ್ ಸಿದ್ಧ
ಹೀಗೆ ಟೀಮ್ ಇಂಡಿಯಾದ ಹಲವು ಆಟಗಾರರು ಕೊರೊನಾ ಸೋಂಕಿಗೆ ಒಳಗಾಗಿದ್ದ ಕಾರಣ ಟೀಮ್ ಇಂಡಿಯಾ ಆಯ್ಕೆ ಸಮಿತಿ ಹೆಚ್ಚುವರಿ ಆಟಗಾರರನ್ನಾಗಿ ಮಯಾಂಕ್ ಅಗರ್ವಾಲ್ ಮತ್ತು ಇಶಾನ್ ಕಿಶನ್ ಅವರನ್ನು ಆಯ್ಕೆ ಮಾಡಿತು. ಹೀಗೆ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಸೇರಿದ ಮಯಾಂಕ್ ಅಗರ್ವಾಲ್ ಕಡ್ಡಾಯ ಐಸೋಲೇಷನ್ ನಿಯಮವನ್ನು ಅನುಸರಿಸಿದ್ದು, ಸದ್ಯ ವಿಂಡೀಸ್ ವಿರುದ್ಧದ ದ್ವಿತೀಯ ಏಕದಿನ ಪಂದ್ಯವನ್ನಾಡಲು ಸಿದ್ಧರಾಗಿದ್ದಾರೆ.

ಮರಳಿದ ಕೆಎಲ್ ರಾಹುಲ್
ಅತ್ತ ವೈಯಕ್ತಿಕ ಕಾರಣಗಳಿಂದ ವೆಸ್ಟ್ ಇಂಡೀಸ್ ವಿರುದ್ಧದ ಪ್ರಥಮ ಏಕದಿನ ಪಂದ್ಯವನ್ನು ತಪ್ಪಿಸಿಕೊಂಡಿದ್ದ ಕೆಎಲ್ ರಾಹುಲ್ ಕೂಡ ಮರಳಿದ್ದು ವಿಂಡೀಸ್ ವಿರುದ್ಧದ ದ್ವಿತೀಯ ಪಂದ್ಯದಲ್ಲಿ ಕಣಕ್ಕಿಳಿಯಲು ತಯಾರಿ ನಡೆಸುತ್ತಿದ್ದಾರೆ. ಇವರ ಜತೆಗೆ ಕೊರೊನಾ ಸೋಂಕಿಗೆ ಒಳಗಾಗಿದ್ದ ಸಿಬ್ಬಂದಿಯ ಸಂಪರ್ಕದಲ್ಲಿದ್ದ ಕಾರಣದಿಂದಾಗಿ ವೆಸ್ಟ್ ಇಂಡೀಸ್ ವಿರುದ್ಧದ ಪ್ರಥಮ ಏಕದಿನ ಪಂದ್ಯಕ್ಕೆ ಅಲಭ್ಯರಾಗಿದ್ದ ನವದೀಪ್ ಸೈನಿ ಕೂಡ ಇದೀಗ ವಿಂಡೀಸ್ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯಲು ಸಿದ್ಧರಾಗಿದ್ದಾರೆ.

ಧವನ್, ಗಾಯಕ್ವಾಡ್ ಅಲಭ್ಯ
ಹೀಗೆ ಕೆ ಎಲ್ ರಾಹುಲ್, ಮಯಾಂಕ್ ಅಗರ್ವಾಲ್ ಮತ್ತು ನವದೀಪ್ ಸೈನಿ ಟೀಮ್ ಇಂಡಿಯಾ ಸೇರಲು ಸಜ್ಜಾಗಿದ್ದು, ಇಂದು ( ಫೆಬ್ರವರಿ 8 ) ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನೆಟ್ ಪ್ರ್ಯಾಕ್ಟೀಸ್ ನಡೆಸಿದ್ದಾರೆ. ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ಮೂವರು ಅಭ್ಯಾಸದಲ್ಲಿ ತೊಡಗಿಕೊಂಡಿರುವ ಚಿತ್ರಗಳನ್ನು ಹಂಚಿಕೊಂಡು ಟ್ವೀಟ್ ಮಾಡಿದೆ. ಆದರೆ ಇನ್ನುಳಿದ ಆಟಗಾರರಾದ ಶಿಖರ್ ಧವನ್, ರುತುರಾಜ್ ಗಾಯಕ್ವಾಡ್ ಮತ್ತು ಶ್ರೇಯಸ್ ಅಯ್ಯರ್ ಅಭ್ಯಾಸದಲ್ಲಿ ಭಾಗವಹಿಸದೇ ಇರುವುದು ಕೊಂಚ ಬೇಸರವನ್ನು ಕೂಡಾ ತಂದಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications