ವಿಂಡೀಸ್ ವಿರುದ್ಧದ ದ್ವಿತೀಯ ಏಕದಿನ ಪಂದ್ಯಕ್ಕೆ ರಾಹುಲ್ ಸಿದ್ಧ: ಟೀಮ್ ಇಂಡಿಯಾದಿಂದ ಪ್ರಮುಖ ಆಟಗಾರ ಔಟ್

ಸದ್ಯ ಭಾರತ ಪ್ರವಾಸವನ್ನು ಕೈಗೊಂಡಿರುವ ಕೆರಿಬಿಯನ್ನರು ಟೀಮ್ ಇಂಡಿಯಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿ ಹಾಗೂ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಸೆಣಸಾಟವನ್ನು ನಡೆಸುತ್ತಿದೆ. ಇತ್ತಂಡಗಳ ನಡುವೆ ಮೊದಲಿಗೆ 3 ಪಂದ್ಯಗಳ ಏಕದಿನ ಸರಣಿ ಈಗಾಗಲೇ ಆರಂಭವಾಗಿದ್ದು ಕಳೆದ ಭಾನುವಾರದಂದು ನಡೆದ ಈ ಪಂದ್ಯದಲ್ಲಿ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ 6 ವಿಕೆಟ್‍ಗಳ ಜಯ ಸಾಧಿಸಿದೆ. ಈ ಮೂಲಕ ಸರಣಿಯಲ್ಲಿ 1-0 ಅಂತರದ ಮುನ್ನಡೆಯನ್ನು ಸಾಧಿಸಿರುವ ಟೀಮ್ ಇಂಡಿಯಾ ರೋಹಿತ್ ಶರ್ಮಾ ಪೂರ್ಣಾವಧಿ ನಾಯಕತ್ವದ ಮೊದಲ ಏಕದಿನ ಪಂದ್ಯದಲ್ಲಿಯೇ ಗೆದ್ದು ಬೀಗಿದೆ.
ಅತ್ತ ಕಳೆದ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಅಲಭ್ಯತೆಯ ವೇಳೆ ಟೀಮ್ ಇಂಡಿಯಾವನ್ನು ನಾಯಕನಾಗಿ ಮುನ್ನಡೆಸಿ ಕೈ ಸುಟ್ಟಿಕೊಂಡಿದ್ದ ಕೆಎಲ್ ರಾಹುಲ್ ವೈಯಕ್ತಿಕ ಕಾರಣಗಳಿಂದ ವೆಸ್ಟ್ ಇಂಡೀಸ್ ವಿರುದ್ಧದ ಪ್ರಥಮ ಏಕದಿನ ಪಂದ್ಯಕ್ಕೆ ಗೈರಾಗಿದ್ದರು. ಹೀಗೆ ವೆಸ್ಟ್ ಇಂಡೀಸ್ ವಿರುದ್ಧದ ಪ್ರಥಮ ಏಕದಿನ ಪಂದ್ಯಕ್ಕೆ ಟೀಮ್ ಇಂಡಿಯಾದ ಉಪನಾಯಕ ಕೆಎಲ್ ರಾಹುಲ್ ವೈಯಕ್ತಿಕ ಕಾರಣಗಳಿಂದ ಅಲಭ್ಯರಾದದ್ದು ಹಾಗೂ ಪಂದ್ಯ ಆರಂಭಕ್ಕೂ ಮುನ್ನವೇ ಕೊರೊನಾ ಸೋಂಕಿಗೆ ಒಳಗಾಗಿದ್ದ ಶಿಖರ್ ಧವನ್ ಮತ್ತು ರುತುರಾಜ್ ಗಾಯಕ್ವಾಡ್ ಅಲಭ್ಯರಾದದ್ದು ಟೀಮ್ ಇಂಡಿಯಾಗೆ ಪಂದ್ಯದಲ್ಲಿ ಹಿನ್ನಡೆಯನ್ನು ಉಂಟುಮಾಡಲಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿದ್ದವು.
ಆದರೆ ಟೀಮ್ ಇಂಡಿಯಾ ಆಯ್ಕೆ ಸಮಿತಿ ಹೆಚ್ಚುವರಿ ಆಟಗಾರರನ್ನಾಗಿ ಮಯಾಂಕ್ ಅಗರ್ವಾಲ್ ಮತ್ತು ಇಶಾನ್ ಕಿಶನ್ ಅವರನ್ನು ಆಯ್ಕೆ ಮಾಡಿತು. ತಂಡ ಸೇರಿದ ಮಾಯಾಂಕ್ ಅಗರ್ವಾಲ್ ಐಸೋಲೇಷನ್ ನಿಯಮಕ್ಕೆ ಒಳಗಾದರೆ, ಇಶಾನ್ ಕಿಶನ್ ವಿಂಡೀಸ್ ವಿರುದ್ಧದ ಪ್ರಥಮ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಬದಲು ಆರಂಭಿಕ ಆಟಗಾರನಾಗಿ ಕಣಕ್ಕಿಳಿದಿದ್ದರು. ಹೀಗೆ ವೈಯಕ್ತಿಕ ಕಾರಣಗಳಿಂದ ವೆಸ್ಟ್ ಇಂಡೀಸ್ ವಿರುದ್ಧದ ಪ್ರಥಮ ಏಕದಿನ ಪಂದ್ಯಕ್ಕೆ ಗೈರಾಗಿದ್ದ ರಾಹುಲ್ ದ್ವಿತೀಯ ಏಕದಿನ ಪಂದ್ಯಕ್ಕಾಗಿ ತಂಡಕ್ಕೆ ಮರಳಿದ್ದು ಈಗಾಗಲೇ ಮೈದಾನಕ್ಕಿಳಿದು ಅಭ್ಯಾಸವನ್ನೂ ನಡೆಸಿದ್ದಾರೆ. ಕೆ ಎಲ್ ರಾಹುಲ್ ವೆಸ್ಟ್ ಇಂಡೀಸ್ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದು, ಪಂದ್ಯದಲ್ಲಿ ಕಣಕ್ಕಿಳಿಯಲಿರುವ ಇಂಡಿಯಾ ಸಂಭಾವ್ಯ ಆಡುವ ಬಳಗ ಈ ಕೆಳಕಂಡಂತಿರಲಿದೆ.

ಇಶಾನ್ ಕಿಶನ್ ತಂಡದಿಂದ ಹೊರಗುಳಿಯುವ ಸಾಧ್ಯತೆ
ಕೆಎಲ್ ರಾಹುಲ್ ವೆಸ್ಟ್ ಇಂಡೀಸ್ ವಿರುದ್ಧದ ಪ್ರಥಮ ಏಕದಿನ ಪಂದ್ಯಕ್ಕೆ ಅಲಭ್ಯರಾಗಿದ್ದ ಕಾರಣ ಆರಂಭಿಕ ಆಟಗಾರನಾಗಿ ಕಣಕ್ಕಿಳಿದಿದ್ದ ಇಶಾನ್ ಕಿಶನ್ ಇದೀಗ ಕೆಎಲ್ ರಾಹುಲ್ ತಂಡಕ್ಕೆ ಮರಳುತ್ತಿರುವುದರಿಂದ ಸ್ಥಾನವನ್ನು ಬಿಟ್ಟುಕೊಡಬೇಕಾಗಿದೆ. ವೆಸ್ಟ್ ಇಂಡೀಸ್ ವಿರುದ್ಧದ ಪ್ರಥಮ ಏಕದಿನ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಜತೆ ಆರಂಭಿಕ ಆಟಗಾರನಾಗಿ ಕಣಕ್ಕಿಳಿದಿದ್ದ ಇಶಾನ್ ಕಿಶನ್ 36 ಎಸೆತಗಳಲ್ಲಿ 28 ರನ್ ಬಾರಿಸಿದ್ದರು.

ಭಾರತ ಸಂಭಾವ್ಯ ಆಡುವ ಬಳಗ
ಕೆಎಲ್ ರಾಹುಲ್‌ಗಾಗಿ ಇಶಾನ್ ಕಿಶನ್ ಆರಂಭಿಕ ಆಟಗಾರನ ಸ್ಥಾನವನ್ನು ಬಿಟ್ಟುಕೊಡುವುದನ್ನು ಬಿಟ್ಟರೆ ವೆಸ್ಟ್ ಇಂಡೀಸ್ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಹೆಚ್ಚು ಬದಲಾವಣೆ ಮಾಡಿಕೊಳ್ಳದೇ ಉಳಿದ ಆಟಗಾರರನ್ನೊಳಗೊಂಡ ತಂಡದೊಂದಿಗೇ ಕಣಕ್ಕಿಳಿಯಲಿದೆ. ವೆಸ್ಟ್ ಇಂಡೀಸ್ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯಬಹುದಾದ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ

ಅಭ್ಯಾಸ ಆರಂಭಿಸಿದ ಶಿಖರ್ ಧವನ್, ಗಾಯಕ್ವಾಡ್
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಕೊರೊನಾ ಸೋಂಕಿಗೆ ಒಳಗಾಗಿದ್ದ ಶಿಖರ್ ಧವನ್ ಮತ್ತು ರುತುರಾಜ್ ಗಾಯಕ್ವಾಡ್ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಪಡೆದುಕೊಂಡಿದ್ದಾರೆ. ಆದರೂ ಸಹ ಈ ಇಬ್ಬರು ದ್ವಿತೀಯ ಏಕದಿನ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ಹೀಗಾಗಿ ಆಡುವ ಬಳಗದಲ್ಲಿ ಹೆಚ್ಚು ಬದಲಾವಾಣೆಗಳಾಗುವುದಿಲ್ಲ ಎನ್ನಬಹುದು. ಆದರೆ ಈ ಇಬ್ಬರೂ ಸಹ ಅಭ್ಯಾಸದಲ್ಲಿ ತೊಡಗಿಕೊಂಡಿರುವ ಚಿತ್ರಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications