For Quick Alerts
ALLOW NOTIFICATIONS  
For Daily Alerts
 

ರೋಹಿತ್ ಅಲ್ಲ, ವಿರಾಟ್ ಅಲ್ಲ: ವಿಂಡೀಸ್ ವಿರುದ್ಧ ಹೆಚ್ಚು ಟೆಸ್ಟ್ ಶತಕ ಸಿಡಿಸಿದ ಹಾಲಿ ಆಟಗಾರ ಯಾರು ಗೊತ್ತಾ?!

ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಇಂದು ಆರಂಭವಾಗಲಿದೆ. ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡು ಸುದೀರ್ಘ ಕಾಲದ ಬಳಿಕ ಟೆಸ್ಟ್ ಸರಣಿಯನ್ನು ಆಡುತ್ತಿರುವ ಟೀಮ್ ಇಂಡಿಯಾ ಈ ಸರಣಿಯಲ್ಲಿ ಮೇಲುಗೈ ಸಾಧಿಸುವ ನೆಚ್ಚಿನ ತಂಡ ಎಂಬುದು ನಿಸ್ಸಂಶಯ. ಸುದೀರ್ಘ ಕಾಲದಿಂದ ವೆಸ್ಟ್ ಇಂಡೀಸ್ ನೆಲದಲ್ಲಿ ಭಾರತ ಯಶಸ್ಸು ಸಾಧಿಸಿಕೊಂಡು ಬರುತ್ತಿರುವ ಅಂಕಿಅಂಶ ಒಂದು ಕಾರಣವಾದರೆ ಭಾರತ ತಂಡದ ಒಟ್ಟಾರೆ ಪ್ರದರ್ಶನ ಹಾಗೂ ವೆಸ್ಟ್ ಇಂಡೀಸ್ ತಂಡದ ಇತ್ತೀಚಿನ ಕಳಪೆ ಆಟ ಕೂಡ ಇದಕ್ಕೆ ಕಾರಣ.

ಆದರೆ ಟೀಮ್ ಇಂಡಿಯಾ ಪರವಾಗಿ ವೆಸ್ಟ್ ಇಂಡೀಸ್ ವಿರುದ್ಧ ಅತ್ಯಂತ ಹೆಚ್ಚು ಯಶಸ್ಸು ಸಾಧಿಸಿರುವ ಬ್ಯಾಟರ್ ಯಾರು ಎಂಬುದು ಈ ಸಂದರ್ಭದಲ್ಲಿ ಕುತೂಹಲ ಸಹಜವಾಗಿಯೇ ಮೂಡಬಹುದು. ಇಂಥಾ ಸಂದರ್ಭದಲ್ಲಿ ಸುದೀರ್ಘ ಕಾಲದಿಂದ ಟೀಮ್ ಇಂಡಿಯಾದ ಭಾಗವಾಗಿರುವ ಬ್ಯಾಟಿಂಗ್ ದಿಗ್ಗಜರಾದ ವಿರಾಟ್ ಕೊಹ್ಲಿ ಅಥವಾ ರೋಹಿತ್ ಶರ್ಮಾ ಈ ಇಬ್ಬರಲ್ಲಿ ಯಾರಾದರು ಒಬ್ಬರು ಇರಬಹುದು ಎಂಬುದು ಸಹಜ ಉತ್ತರ. ಆದರೆ ವೆಸ್ಟ್ ಇಂಡೀಸ್ ವಿರುದ್ಧ ಅತ್ಯಂತ ಹೆಚ್ಚು ಶತಕ ಸಿಡಿಸಿದ ಆಟಗಾರ ಯಾರು ಎಂಬುದನ್ನು ನೋಡಿದರೆ ನಿಮ್ಮ ಈ ನಿರೀಕ್ಷೆ ಖಮಡಿತಾ ಸುಳ್ಳಾಗುತ್ತದೆ.

IND vs WI: Not Rohit not Virat: R Ashwin has most Test hundreds against West Indies among active players

ವೆಸ್ಟ್ ಇಂಡೀಸ್ ತಂಡದ ವಿರುದ್ಧ ಪ್ರಸ್ತುತ ಆಡುತ್ತಿರುವ ಆಟಗಾರರ ಪೈಕಿ ಅತಿ ಹೆಚ್ಚು ಶತಕ ಸಿಡಿಸಿದ ಆಟಗಾರ ವಿರಾಟ್ ಕೊಹ್ಲಿಯೂ ಅಲ್ಲ, ರೋಹಿತ್ ಶರ್ಮಾನೂ ಅಲ್ಲ. ಅದು ಭಾರತದ ಅನುಭವಿ ಸ್ಪಿನ್ನರ್ ಆರ್ ಅಶ್ವಿನ್. ಈ ಹಿರಿಯ ಆಟಗಾರ ವೆಸ್ಟ್ ಇಂಡೀಸ್ ವಿರುದ್ಧ ಬರೊಬ್ಬರಿ ನಾಲ್ಕು ಶತಕ ಸಿಡಿಸಿದ್ದಾರೆ. ಅಚ್ಚರಿಯೆಂದರೆ ಅದರಲ್ಲಿ ಎರಡು ಶತಕ ವೆಸ್ಟ್ ಇಂಡೀಸ್ ನೆಲದಲ್ಲಿಯೇ ಬಂದಿದೆ.

ವಿರಾಟ್ ಕೊಹ್ಲಿ ವೆಸ್ಟ್ ಇಂಡಿಸ್ ವಿರುದ್ಧ ಒಟ್ಟು 14 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಎರಡು ಶತಕ ಹಾಗೂ ಐದು ಶತಕ ಸಿಡಿಸಿದ್ದಾರೆ ಕೊಹ್ಲಿ. ಮತ್ತೊಂದೆಡೆ ರೋಹಿತ್ ಶರ್ಮಾ ನಾಲ್ಕು ಪಂದ್ಯಗಳನ್ನು ಮಾತ್ರ ವೆಸ್ಟ್ ಇಂಡೀಸ್ ವಿರುದ್ಧ ಆಡಿದ್ದು ಇದರಲ್ಲಿ ಎರಡು ಶತಕ ಸಿಡಿಸಿದ್ದಾರೆ. ಆದರೆ ಅಶ್ವಿನ್ ಈ ಇಬ್ಬರು ದಿಗ್ಗಜರನ್ನೂ ಮೀರಿದ ಸಾಧನೆ ಮಾಡಿದ್ದಾರೆ.

2011ರ ಬಳಿಕ ಆರ್ ಅಶ್ವಿನ್ ಭಾರತ ಟೆಸ್ಟ್ ತಂಡದ ಪ್ರಮುಖ ಭಾಗವಾಗಿದ್ದು ಇತ್ತೀಚಿನ ವರ್ಷಗಳಲ್ಲಿ ಬ್ಯಾಟಿಂಗ್‌ನಲ್ಲಿಯೂ ಅದ್ಭುತ ಅಂಕಿಅಂಶಗಳನ್ನು ಹೊಂದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ ಆರ್ ಅಶ್ವಿನ್ 11 ಪಂದ್ಯಗಳನ್ನು ಆಡಿದ್ದು ನಾಲ್ಕು ಶತಕಗಳನ್ನು ಸಿಡಿಸಿದ್ದಾರೆ. 50.18ರಷ್ಟು ಅದ್ಭುತ ಸರಾಸರಿಯಲ್ಲಿ ಅಶ್ವಿನ್ ವಿಂಡೀಸ್ ವಿರುದ್ಧ ಬ್ಯಾಟಿಂಗ್ ನಡೆಸಿದ್ದು 552 ರನ್‌ಗಳನ್ನು ಗಳಿಸಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ 2021-23ರ ಆವೃತ್ತಿಯ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು ಅನುಭವಿಸಿರುವ ಭಾರತ ತಂಡ ನಿರಾಸೆ ಅನುಭವಿಸಿತ್ತು. ಇದೀಯ ಮತ್ತೊಂದು ಹೊಸ ಆವೃತ್ತಿಯನ್ನು ವೆಸ್ಟ್ ಇಂಡೀಸ್ ವಿರುದ್ಧ ಸರಣಿಯ ಮೂಲಕ ಟೀಮ್ ಇಂಡಿಯಾ ಆರಂಭಿಸಿದ್ದು ಉತ್ತಮ ಪ್ರದರ್ಶನ ನೀಡುವ ವಿಶ್ವಾಸದಲ್ಲಿದೆ. ಇನ್ನು ಈ ಸರಣಿಯ ಮೂಲಕ ಭಾರತ ತಂಡ ಕೆಲ ಬದಲಾವಣೆಗಳತ್ತ ಮುಖಮಾಡಿದ್ದು ಅನುಭವಿ ಚೇತೇಶ್ವರ್ ಪೂಜಾರ ತಂಡದಿಂದ ಹೊರಬಿದ್ದಿದ್ದು ಅವರ ಬದಲಿಗೆ ಯುವ ಆಟಗಾರರಿಗೆ ಅವಕಾಶ ದೊರೆತಿದೆ.

ಎಡಗೈ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಟೀಮ್ ಇಂಡಿಯಾದಲ್ಲಿ ಸ್ಥಾನವನ್ನು ಪಡೆದುಕೊಳ್ಳಲು ಸಜ್ಜಾಗಿದ್ದು ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಶುಬ್ಮನ್ ಗಿಲ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಮೂಲಕ ಚೇತೇಶ್ವರ್ ಪೂಜಾರ ಸ್ಥಾನದಲ್ಲಿ ಕಣಕ್ಕಿಳಿಯಲಿದ್ದಾರೆ. ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಈ ವಿಚಾರವನ್ನು ಪಂದ್ಯದ ಹಿಂದಿನ ದಿನ ದಿನ ಮಾಧ್ಯಮಗಳ ಮುಂದೆ ಬಹಿರಂಗಪಡಿಸಿದ್ದಾರೆ.

Story first published: Wednesday, July 12, 2023, 16:40 [IST]
Other articles published on Jul 12, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+