ಭಾರತ vs ವಿಂಡೀಸ್: ಪ್ರೇಕ್ಷಕರಿಲ್ಲದೆ ನಡೆಯಲಿದೆ ಏಕದಿನ ಸರಣಿ: ಪ್ರೇಕ್ಷಕರ ಸಮ್ಮುಖದಲ್ಲಿ ಟಿ20 ಸರಣಿ ಸಾಧ್ಯತೆ

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿಗೆ ದಿನಗಣನೆ ಆರಂಭವಾಗಿದೆ. ಭಾರತದ ಆಟಗಾರರು ಈಗಾಗಲೇ ಅಹಮದಾದ್‌ಗೆ ತಲುಪಿದ್ದು ಕ್ವಾರಂಟೈನ್ ಪೂರೈಸುತ್ತಿದ್ದಾರೆ. ಶೀಘ್ರದಲಲ್ಇಯೇ ಅಭ್ಯಾಸವನ್ನು ಆರಂಭಿಸಲಿದ್ದಾರೆ. ಈ ಮಧ್ಯೆ ಏಕದಿನ ಸರಣಿ ಆಯೋಜನೆ ಮಾಡುತ್ತಿರುವ ಗುಜರಾತ್ ಕ್ರಿಕೆಟ್ ಅಸೋಸಿಯೇಶನ್ ಮಹತ್ವದ ಮಾಹಿತಿ ನೀಡಿದೆ. ಏಕದಿನ ಸರಣಿಯ ಮೂರು ಪಂದ್ಯಗಳು ಕೂಡ ಪ್ರೇಕ್ಷಕರ ಅಲಭ್ಯತೆಯಲ್ಲಿ ನಡೆಯಲಿದೆ ಎಂದು ತಿಳಿಸಿದೆ.
ವೆಸ್ಟ್ ಇಂಡೀಸ್ ವಿರುದ್ಧ ಭಾರತ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ನಂತರ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಆಡಲಿದೆ. ಏಕದಿನ ಸರಣಿಯ ಮೂರು ಪಂದ್ಯಗಳು ಕೂಡ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದರೆ ಟಿ20 ಸರಣಿ ಕೊಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ಆಯೋಜನೆಯಾಗಲಿದೆ. ಆದರೆ ಈಡನ್ ಗಾರ್ಡನ್‌ನಲ್ಲಿ ನಡೆಯಲಿರುವ ಟಿ20 ಸರಣಿಯಲ್ಲಿ ಪ್ರೇಕ್ಷಕರ ಹಾಜರಾತಿಗೆ ಅವಕಾಶ ನೀಡುವ ಸಾಧ್ಯತೆಯಿದೆ. 75% ಪ್ರೇಕ್ಷಕರ ಹಾಜರಾತಿಯೊಂದಿಗೆ ಸರಣಿ ಆಯೋಜಿಸುವ ಸಾಧ್ಯತೆಯಿದೆ. ಫೆಬ್ರವರಿ 6ರಿಮದ ವಿಂಡೀಸ್ ವಿರುದ್ಧದ ಸೀಮಿತ ಓವರ್‌ಗಳ ಸರಣಿ ಆರಂಭವಾಗಲಿದೆ.

ಪೂರ್ಣ ಪ್ರಮಾಣದ ವೈಟ್‌ಬಾಲ್ ನಾಯಕನಾಗಿ ರೋಹಿತ್
ಈ ಸರಣಿಯ ಮೂಲಕ ರೋಹಿತ್ ಶರ್ಮಾ ಭಾರತ ವೈಟ್‌ಬಾಲ್ ಕ್ರಿಕೆಟ್ ತಂಡದ ಪೂರ್ಣ ಪ್ರಮಾಣದ ನಾಯಕನಾಗಿ ಮೊದಲ ಬಾರಿಗೆ ಕಣಕ್ಕಿಳಿಯಲಿದ್ದಾರೆ. ಇನ್ನು ಸುದೀರ್ಘ ಕಾಲದ ಬಳಿಕ ವಿರಾಟ್ ಕೊಹ್ಲಿ ಪೂರ್ಣ ಪ್ರಮಾಣದ ಬ್ಯಾಟರ್ ಆಗಿ ಕಣಕ್ಕಿಳಿಯಲಿದ್ದಾರೆ. ಕೆಎಲ್ ರಾಹುಲ್ ಉಪನಾಯಕನಾಗಿ ಜವಾಬ್ಧಾರಿಯನ್ನು ನಿರ್ವಹಿಸಲಿದ್ದಾರೆ. ಈ ಸರಣಿಯಲ್ಲಿ ಸಾಕಷ್ಟು ಯುವ ಆಟಗಾರರಿಗೆ ಅವಕಾಶ ದೊರೆಯುವ ಸಾಧ್ಯತೆಯಿದೆ.
ಫಿನಿಷರ್, ಓಪನರ್ ಎಲ್ಲವೂ ಸುಳ್ಳು: ಕೊಹ್ಲಿ ಪರ ಮಾತನಾಡಿ ರೋಹಿತ್, ಧೋನಿಗೆ ಟಾಂಗ್ ಕೊಟ್ಟ ಗಂಭೀರ್!

ವಿಶ್ವಕಪ್ ದೃಷ್ಟಿಯಿಂದ ಮಹತ್ವದ ಸರಣಿ
ಇದಕ್ಕೂ ಹಿಂದಿನ ಸರಣಿಯಲ್ಲಿ ಭಾರತ ದಕ್ಷಿಣ ಆಫ್ರಿಕಾಗೆ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಭಾರೀ ನಿರಾಸೆ ಅನುಭವಿಸಿದೆ. ಏಕದಿನ ಸರಣಿಯನ್ನು 0-3 ಅಂತರದಿಂದ ಕಳೆದುಕೊಂಡ ಭಾರತ ಅದಕ್ಕೂ ಹಿಂದೆ ನಡೆದ ಟೆಸ್ಟ್ ಸರಣಿಯನ್ನು 1-2 ಅಂತರದಿಂದ ಕಳೆದುಕೊಂಡಿತ್ತು. ಇದೀಗ ತವರಿನಲ್ಲಿ ನಡೆಯಲಿರುವ ಈ ವೈಟ್‌ಬಾಲ್ ಸರಣಿ ಭಾರತ ತಂಡಕ್ಕೆ ಮುಂಬರುವ ವಿಶ್ವಕಪ್‌ನ ದೃಷ್ಟಿಯಿಂದ ಮಹತ್ವದ್ದಾಗಿದೆ.

ಇಂಗ್ಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ವಿಂಡೀಸ್
ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡಿದ್ದ ಇಂಗ್ಲೆಂಡ್ ತಂಡ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮುಖಾಮುಖಿಯಾಗಿತ್ತು. ಈ ಸರಣಿಯಲ್ಲಿ ಎರಡು ತಂಡಗಳು ಕೂಡ ಅದ್ಭುತ ಪ್ರದರ್ಶನ ನೀಡಿದ್ದು ವೆಸ್ಟ್ ಇಂಡೀಸ್ ಅಂತಿಮ ಪಂದ್ಯದಲ್ಲಿ ಮೇಲುಗೈ ಸಾಧಿಸಿ ಸರಣಿಯನ್ನು ವಶಕ್ಕೆ ಪಡೆದುಕೊಂಡಿದೆ. ಇನ್ನು ಈ ಸರಣಿಯಲ್ಲಿ ವೆಸ್ಟ್ ಇಂಡೀಸ್ ತಂಡದ ಪರವಾಘಿ ಕೆಲ ಆಟಗಾರರು ಅಮೋಘ ಪ್ರದರ್ಶನ ನೀಡಿರುವುದು ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.
ಭಾರತ ವಿರುದ್ಧದ ಏಕದಿನ ಸರಣಿಗೆ ವಿಂಡೀಸ್ ಸ್ಕ್ವಾಡ್: ಕಿರಾನ್ ಪೊಲಾರ್ಡ್ (ನಾಯಕ), ಫ್ಯಾಬಿಯನ್ ಅಲೆನ್, ಎನ್ಕ್ರುಮಾ ಬೊನ್ನರ್, ಡ್ಯಾರೆನ್ ಬ್ರಾವೋ, ಶಮರ್ ಬ್ರೂಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೆಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರಾಂಡನ್ ಕಿಂಗ್, ನಿಕೋಲಸ್ ಪೂರನ್ (ಉಪ ನಾಯಕ), ಕೆಮರ್ ರೋಚ್, ರೊಮಾರಿಯೋ ಶೆಫರ್ಡ್, ಓಡಿಯನ್ ಸ್ಮಿತ್, ಹೇಡನ್ ವಾಲ್ಷ್ ಜೂನಿಯರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications