For Quick Alerts
ALLOW NOTIFICATIONS  
For Daily Alerts
 

IND vs WI: ಐಪಿಎಲ್ ನಾಯಕನಿಗೆ ಸವಾಲೆಸೆದ ಪೊಲಾರ್ಡ್: ರೋಹಿತ್ ಬಗ್ಗೆ ಹೇಳಿದ್ದಿಷ್ಟು!

Ind vs WI: Playing against Rohit Sharma led team will be special said windies skipper Kieron Pollard

ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಇನ್ನೇನು ಕೆಲವೇ ದಿನಗಳಲ್ಲಿ ಮುಖಾಮುಖಿಯಾಗಲಿದೆ. ಸೀಮಿತ ಓವರ್‌ಗಳ ಸರಣಿಗೆ ದಿನಗಣನೆ ಆರಂಭವಾಗಿದ್ದು ಮೊದಲಿಗೆ ಅಹಮದಾಬಾದ್‌ನಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದ್ದು ಬಳಿಕ ಮೂರು ಪಂದ್ಯಗಳ ಟಿ20 ಸರಣಿ ಕೊಲ್ಕತ್ತಾದಲ್ಲಿ ನಡೆಯಲಿದೆ. ಈ ಸರಣಿಯಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಿದರೆ ವೆಸ್ಟ್ ಇಂಡೀಸ್ ತಂಡವನ್ನು ಕಿರಾನ್ ಪೊಲಾರ್ಡ್ ಮುನ್ನಡೆಸಲಿದ್ದಾರೆ.

ಕುತೂಹಲ ಕಾರಿ ಸಂಗತಿಯೆಂದರೆ ಈ ಇಬ್ಬರು ಕೂಡ ಐಪಿಎಲ್ ತಂಡದಲ್ಲಿ ಸಹ ಆಟಗಾರರಾಗಿದ್ದು ರೋಹಿತ್ ಶರ್ಮಾ ನಾಯಕತ್ವದಲ್ಲಿ ಕಿರಾನ್ ಪೊಲಾರ್ಡ್ ಕಣಕ್ಕಿಳಿಯುತ್ತಾರೆ. ಆದರೆ ಈ ಇಬ್ಬರು ಈಗ ತಮ್ಮ ತಮ್ಮ ದೇಶಗಳನ್ನು ಪ್ರತಿನಿಧಿಸುವ ತಂಡವನ್ನು ಮುನ್ನಡೆಸುತ್ತಿದ್ದು ಈ ಕದನ ಕುತೂಹಲ ಮೂಡಿಸಿದೆ. ಈ ಸಂದರ್ಭದಲ್ಲಿ ಕಿರಾನ್ ಪೊಲಾರ್ಡ್ ರೋಹಿತ್ ಶರ್ಮಾ ನಾಯಕತ್ವದ ಬಗ್ಗೆ ಮಾತನಾಡಿದ್ದು ರೋಹಿತ್ ಶರ್ಮಾ ನಾಯಕತ್ವದ ತಂಡದ ವಿರುದ್ಧ ಆಡುತ್ತಿರುವುದು ತನ್ನ ಉತ್ಸುಕತೆಯನ್ನು ಹೆಚ್ಚಿಸಿದೆ ಎಂದಿದ್ದಾರೆ.

ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯಲ್ಲಿ 3-2 ಅಂತರದಿಂದ ಸರಣಿಯನ್ನು ವೆಸ್ಟ್ ಇಂಡೀಸ್ ವಶಕ್ಕೆ ಪಡೆದುಕೊಂಡಿದೆ. ಈ ಗೆಲುವಿನ ಬಳಿಕ ಕಿರಾನ್ ಪೊಲಾರ್ಡ್ ತನ್ನ ಮುಂದಿನ ಗುರಿ ಭಾರತದ ವಿರುದ್ಧ ಭಾರತದಲ್ಲಿ ಸೀಮಿತ ಓವರ್‌ಗಳ ಸರಣಿ ಗೆಲ್ಲುವುದಾಗಿದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. "ಇಂಗ್ಲೆಂಡ್ ವಿರುದ್ಧ ಅದ್ಭುತವಾದ ವಿಜಯವನ್ನು ನಾವು ಸಾಧಿಸಿದ್ದೇವೆ. ಈಗ ನಾವು ಭಾರತದ ವಿರುದ್ಧದ ಸರಣಿಯ ಮೇಲೆಯೂ ಸಕಾರಾತ್ಮಕ ದೃಷ್ಟಿಯಿಂದ ನೋಡುತ್ತಿದ್ದೇವೆ. ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವನ್ನು ಎದುರಿಸುವುದು ತುಂಬಾ ವಿಶೇಷವಾಗಿದೆ ಹಾಗೂ ಉತ್ಸುಕತೆಯನ್ನು ಹೆಚ್ಚಿಸಿದೆ" ಎಂದು ಕಿರಾನ್ ಪೊಲಾರ್ಡ್ ಹೇಳಿದ್ದಾರೆ.

ಕಿರಾನ್ ಪೊಲಾರ್ಡ್ ಕಳೆದ ಹಲವು ವರ್ಷಗಳಿಂದ ಮುಂಬೈ ಇಂಡಿಯನ್ಸ್ ಪರವಾಗಿ ಐಪಿಎಲ್‌ನಲ್ಲಿ ಆಡುತ್ತಿದ್ದು ರೋಹಿತ್ ಶರ್ಮಾ ಪೊಲಾರ್ಡ್‌ಗೆ ನಾಯಕರಾಗಿದ್ದಾರೆ. ಈ ಇಬ್ಬರು ಆಟಗಾರರನ್ನು ಕೂಡ ಮುಂಬೈ ಇಂಡಿಯನ್ಸ್ ತಂಡ ಈ ಬಾರಿಯ ಐಪಿಎಲ್ ಮಹಾ ಹರಾಜಿಗೂ ಮುನ್ನ ತಂಡದಲ್ಲಿ ರೀಟೈನ್ ಮಾಡಿಕೊಂಡಿದೆ. ಈಗ ಐಪಿಎಲ್ 2022ರ ಆವೃತ್ತಿಗೂ ಮುನ್ನವೇ ಈ ಇಬ್ಬರು ಆಟಗಾರರು ಪರಸ್ಪರ ಮುಖಾಮುಖಿಯಾಗುತ್ತಿದ್ದಾರೆ.

ಇಂಗ್ಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ವಿಂಡೀಸ್: ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡಿದ್ದ ಇಂಗ್ಲೆಂಡ್ ತಂಡ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮುಖಾಮುಖಿಯಾಗಿತ್ತು. ಈ ಸರಣಿಯಲ್ಲಿ ಎರಡು ತಂಡಗಳು ಕೂಡ ಅದ್ಭುತ ಪ್ರದರ್ಶನ ನೀಡಿದ್ದು ವೆಸ್ಟ್ ಇಂಡೀಸ್ ಅಂತಿಮ ಪಂದ್ಯದಲ್ಲಿ ಮೇಲುಗೈ ಸಾಧಿಸಿ ಸರಣಿಯನ್ನು ವಶಕ್ಕೆ ಪಡೆದುಕೊಂಡಿದೆ. ಇನ್ನು ಈ ಸರಣಿಯಲ್ಲಿ ವೆಸ್ಟ್ ಇಂಡೀಸ್ ತಂಡದ ಪರವಾಘಿ ಕೆಲ ಆಟಗಾರರು ಅಮೋಘ ಪ್ರದರ್ಶನ ನೀಡಿರುವುದು ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.

ಭಾರತ ವಿರುದ್ಧದ ಏಕದಿನ ಸರಣಿಗೆ ವಿಂಡೀಸ್ ಸ್ಕ್ವಾಡ್: ಕಿರಾನ್ ಪೊಲಾರ್ಡ್ (ನಾಯಕ), ಫ್ಯಾಬಿಯನ್ ಅಲೆನ್, ಎನ್ಕ್ರುಮಾ ಬೊನ್ನರ್, ಡ್ಯಾರೆನ್ ಬ್ರಾವೋ, ಶಮರ್ ಬ್ರೂಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೆಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರಾಂಡನ್ ಕಿಂಗ್, ನಿಕೋಲಸ್ ಪೂರನ್ (ಉಪ ನಾಯಕ), ಕೆಮರ್ ರೋಚ್, ರೊಮಾರಿಯೋ ಶೆಫರ್ಡ್, ಓಡಿಯನ್ ಸ್ಮಿತ್, ಹೇಡನ್ ವಾಲ್ಷ್ ಜೂನಿಯರ್.

Story first published: Monday, January 31, 2022, 14:20 [IST]
Other articles published on Jan 31, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+