ಭಾನುವಾರ, ಜುಲೈ 23ರಂದು ಪೋರ್ಟ್ ಆಫ್ ಸ್ಪೇನ್‌ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ 4ನೇ ದಿನದಂದು ಪ್ರವಾಸಿ ಭಾರತ ತಂಡ ಆಲ್‌ರೌಂಡ್ ಪ್ರದರ್ಶನ ನೀಡಿದ್ದು, 2ನೇ ಟೆಸ್ಟ್ ಪಂದ್ಯದಲ್ಲಿ ಮತ್ತೊಮ್ಮೆ ಮೇಲುಗೈ ಸಾಧಿಸಿದೆ.
ಮೊದಲ ಇನ್ನಿಂಗ್ಸ್‌ನಲ್ಲಿ 183 ರನ್‌ಗಳ ಮುನ್ನಡೆ ಪಡೆದು ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ ತಂಡ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿತು. ಕೇವಲ 24 ಓವರ್‌ಗಳಲ್ಲಿ 2 ವಿಕೆಟ್‌ಗೆ 181 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡು, ಆತಿಥೇಯ ವೆಸ್ಟ್ ಇಂಡೀಸ್ ತಂಡಕ್ಕೆ 365 ರನ್‌ಗಳ ಗುರಿ ನೀಡಿದೆ.
ನಾಯಕ ರೋಹಿತ್ ಶರ್ಮಾ 44 ಎಸೆತಗಳಲ್ಲಿ 5 ಬೌಂಡರಿ ಮತ್ತು 3 ಸಿಕ್ಸರ್ ನೆರವಿನಿಂದ 57 ರನ್ ಗಳಿಸಿದ ಔಟಾದರು. ಅದಕ್ಕೂ ಮುನ್ನ ರೋಹಿತ್ ಶರ್ಮಾ 35 ಎಸೆತಗಳಲ್ಲಿ ತಮ್ಮ ವೇಗದ ಅರ್ಧಶತಕಗಳನ್ನು ಬಾರಿಸಿದರು.

ಇದೇ ವೇಳೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಸತತ 30ನೆ ಬಾರಿಗೆ ಎರಡಂಕಿಯ ರನ್‌ಗಳನ್ನು ದಾಖಲಿಸಿದ ಮೊದಲ ಬ್ಯಾಟರ್ ಎನಿಸಿಕೊಂಡರು.
ಈ ದಾಖಲೆಯು ಹಿಂದೆ ಶ್ರೀಲಂಕಾ ತಂಡದ ಲೆಜೆಂಡ್ ಮಹೇಲಾ ಜಯವರ್ಧನೆ ಅವರ ಹೆಸರಿನಲ್ಲಿತ್ತು. ಅವರು 29 ಬಾರಿ ಎರಡಂಕಿಯ ರನ್‌ಗಳನ್ನು ಬಾರಿಸಿದ್ದರು. ಇದೀಗ ಪೋರ್ಟ್ ಆಫ್ ಸ್ಪೇನ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ 4ನೇ ದಿನದಂದು ರೋಹಿತ್ ಶರ್ಮಾ ಅವರ ಸಾರ್ವಜನಿಕ ದಾಖಲೆಯನ್ನು ಅಳಿಸಿ ಹಾಕಿದರು.
ಸಾಮಾನ್ಯವಾಗಿ ವೈಟ್-ಬಾಲ್ ಕ್ರಿಕೆಟ್‌ನಲ್ಲಿ ಪರಿಣಿತ ಬ್ಯಾಟರ್ ಎಂದು ಪರಿಗಣಿಸಲ್ಪಟ್ಟಿರುವ ರೋಹಿತ್ ಶರ್ಮಾ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ ಉತ್ತಮ ಬ್ಯಾಟರ್ ಎಂದು ಕಳೆದ ಎರಡು ವರ್ಷಗಳಿಂದ ಸಾಬೀತು ಪಡಿಸಿದ್ದಾರೆ.
ರೋಹಿತ್ ಶರ್ಮಾ ತಮ್ಮ ಕೊನೆಯ 30 ಟೆಸ್ಟ್ ಇನ್ನಿಂಗ್ಸ್‌ಗಳ ಒಂದು ನೋಟ ಇಲ್ಲಿದೆ. 12, 161, 26, 66, ಅಜೇಯ 25, 49, 34, 30, 36, ಅಜೇಯ 12, 83, 21, 19, 59, 11, 127, 29, 31, 24, 24, 24, 24, 24 5, 15, 43, 103, 80, 57 ರನ್‌ಗಳಾಗಿವೆ.
ರೋಹಿತ್ ಶರ್ಮಾ ಅವರು ಎರಡನೇ ಇನ್ನಿಂಗ್ಸ್‌ನಲ್ಲಿ ಅಮೋಘ ಅರ್ಧಶತಕವನ್ನು ಬಾರಿಸಿದಾಗ ಮತ್ತೊಮ್ಮೆ ಪ್ರಚಂಡ ಫಾರ್ಮ್‌ನಲ್ಲಿ ಕಾಣಿಸಿಕೊಂಡರು. ಹೊಸ ಆರಂಭಿಕ ಜೊತೆಗಾರ ಯಶಸ್ವಿ ಜೈಸ್ವಾಲ್ ಅವರೊಂದಿಗೆ ಉತ್ತಮ ಜೊತೆಯಾಟ ನೀಡುವ ಮೂಲಕ ಭಾರತ ತಂಡಕ್ಕೆ ಭದ್ರ ಬುನಾದಿ ಹಾಕಿದರು.
ನಾಲ್ಕನೇ ದಿನದ ಅಂತಿಮ ಅವಧಿಯಲ್ಲಿ ಭಾರತ ತಂಡ 2 ವಿಕೆಟ್‌ಗೆ 181 ರನ್ ಗಳಿಸಿದ್ದಾಗ ತನ್ನ ಎರಡನೇ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಆತಿಥೇಯ ವೆಸ್ಟ್ ಇಂಡೀಸ್ ತಂಡಕ್ಕೆ ಗೆಲ್ಲಲು 365 ರನ್‌ಗಳ ಕಠಿಣ ಗುರಿಯನ್ನು ನೀಡಿದೆ.
ಯಶಸ್ವಿ ಜೈಸ್ವಾಲ್ 30 ಎಸೆತಗಳಲ್ಲಿ 38 ರನ್, ಇಶಾನ್ ಕಿಶನ್ 34 ಎಸೆತಗಳಲ್ಲಿ ಅಜೇಯ 52 ರನ್, ಶುಭ್ಮನ್ ಗಿಲ್ 29 ರನ್ ಗಳಿಸಿ ಔಟಾಗದೆ ಉಳಿದರು.
365 ರನ್‌ಗಳ ಗುರಿ ಪಡೆದು ಎರಡನೇ ಇನ್ನಿಂಗ್ಸ್ ಆರಂಭಿಸಿರುವ ವೆಸ್ಟ್ ಇಂಡೀಸ್ ತಂಡ ನಾಲ್ಕನೇ ದಿನದಾಟದಂತ್ಯಕ್ಕೆ 32 ಓವರ್‌ಗಳಲ್ಲಿ 2 ವಿಕೆಟ್‌ಗೆ 76 ರನ್ ಗಳಿಸಿದೆ.
ಸದ್ಯ ಐದನೇ ದಿನದಾಟಕ್ಕೂ ಮುನ್ನ ವೆಸ್ಟ್ ಇಂಡೀಸ್ ತಂಡದ ಟಗೆನರೈನ್ ಚಂದ್ರಪಾಲ್ 24 ರನ್ ಮತ್ತು ಜೆರ್ಮೈನ್ ಬ್ಲಾಕ್‌ವುಡ್ 20 ರನ್ ಗಳಿಸಿ ಅಜೇಯರಾಗುಳಿದಿದ್ದಾರೆ. ಪ್ರವಾಸಿ ಭಾರತ ತಂಡವು 2-0 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಲು ಬಯಸಿದ್ದು, ಗೆಲುವಿಗೆ 8 ವಿಕೆಟ್‌ಗಳ ಅವಶ್ಯಕತೆ ಇದೆ.