ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ರೋಹಿತ್ ಆಗಮನ ತಂಡಕ್ಕೆ ಬಲ ತಂದಿದೆ ಆದರೆ ಇವರದ್ದೇ ತಲೆನೋವು ಎಂದ ಅಗರ್ಕರ್

IND vs WI: Rohit Sharma led Team India is favourite but middle order is the problem says Ajit Agarkar

ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡು ಹರಿಣಗಳ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗಳಲ್ಲಿ ಹೀನಾಯವಾಗಿ ಸೋತು ಮುಖಭಂಗಕ್ಕೊಳಗಾಗಿದ್ದ ಟೀಮ್ ಇಂಡಿಯಾ ಇದೀಗ ವೆಸ್ಟ್ ಇಂಡೀಸ್ ವಿರುದ್ಧ ತವರಿನಲ್ಲಿ 3 ಪಂದ್ಯಗಳ ಏಕದಿನ ಸರಣಿ ಹಾಗೂ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಸೆಣಸಾಟವನ್ನು ನಡೆಸಲಿದೆ.

ಭಾರತ vs ವಿಂಡೀಸ್: ತಂಡಕ್ಕೆ ಒಳ್ಳೆ ಆಟಗಾರರು ಬೇಕು ಎಂದಿದ್ದ ರಾಹುಲ್‌ಗೆ ರೋಹಿತ್ ಶರ್ಮಾ ಪ್ರತ್ಯುತ್ತರ?ಭಾರತ vs ವಿಂಡೀಸ್: ತಂಡಕ್ಕೆ ಒಳ್ಳೆ ಆಟಗಾರರು ಬೇಕು ಎಂದಿದ್ದ ರಾಹುಲ್‌ಗೆ ರೋಹಿತ್ ಶರ್ಮಾ ಪ್ರತ್ಯುತ್ತರ?

ಇನ್ನು ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳುವ ಮುನ್ನ ಗಾಯದ ಸಮಸ್ಯೆಗೆ ಒಳಗಾಗಿದ್ದ ರೋಹಿತ್ ಶರ್ಮಾ ಪ್ರವಾಸ ಕೈಗೊಳ್ಳಲಾಗದೇ ತಂಡದಿಂದ ಹೊರಗುಳಿದಿದ್ದರು. ಹೀಗೆ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ ಇದೀಗ ಗಾಯದ ಸಮಸ್ಯೆಯಿಂದ ಚೇತರಿಸಿಕೊಂಡಿದ್ದು ವೆಸ್ಟ್ ಇಂಡೀಸ್ ವಿರುದ್ಧದ ಸೀಮಿತ ಓವರ್ ಸರಣಿಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಲು ಸಜ್ಜಾಗಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಭಾರತ ಏಕದಿನ ತಂಡದ ನಾಯಕತ್ವವನ್ನು ತ್ಯಜಿಸಿದ ನಂತರ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ಮೂಲಕ ರೋಹಿತ್ ಶರ್ಮಾ ನಾಯಕತ್ವವನ್ನು ವಹಿಸಿಕೊಳ್ಳುತ್ತಿದ್ದು ಭಾರತ ಏಕದಿನ ತಂಡದ ಪೂರ್ಣಾವಧಿ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ.

ಸಾಲು ಸಾಲು ಯಶಸ್ಸು ಕಂಡರೂ ಆಸ್ಟ್ರೇಲಿಯಾ ಕೋಚ್ ಸ್ಥಾನದಿಂದ ಕೆಳಗಿಳಿದು ಆಶ್ಚರ್ಯ ಮೂಡಿಸಿದ ಲ್ಯಾಂಗರ್!ಸಾಲು ಸಾಲು ಯಶಸ್ಸು ಕಂಡರೂ ಆಸ್ಟ್ರೇಲಿಯಾ ಕೋಚ್ ಸ್ಥಾನದಿಂದ ಕೆಳಗಿಳಿದು ಆಶ್ಚರ್ಯ ಮೂಡಿಸಿದ ಲ್ಯಾಂಗರ್!

ಹೀಗೆ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗಳಲ್ಲಿ ಟೀಮ್ ಇಂಡಿಯಾ ಹೀನಾಯ ಪ್ರದರ್ಶನ ನೀಡಿದ್ದಕ್ಕೆ ರೋಹಿತ್ ಶರ್ಮಾ ಅಲಭ್ಯತೆ ಕೂಡಾ ಕಾರಣವಾಗಿತ್ತು ಮತ್ತು ರೋಹಿತ್ ಶರ್ಮಾ ತಂಡಕ್ಕೆ ಮರಳಿರುವುದು ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಳಲ್ಲಿ ಕಣಕ್ಕಿಳಿಯುವ ಟೀಮ್ ಇಂಡಿಯಾಗೆ ದೊಡ್ಡ ಅನುಕೂಲವಾಗಲಿದೆ ಎಂಬ ಅಭಿಪ್ರಾಯಗಳನ್ನು ಹಲವಾರು ಮಾಜಿ ಕ್ರಿಕೆಟಿಗರು ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಇದೀಗ ಭಾರತದ ಮಾಜಿ ಕ್ರಿಕೆಟಿಗ ಅಜಿತ್ ಅಗರ್ಕರ್ ಕೂಡ ಮಾತನಾಡಿದ್ದು, ಈ ಕೆಳಕಂಡಂತೆ ಹೇಳಿಕೆಗಳನ್ನು ನೀಡಿದ್ದಾರೆ.

ರೋಹಿತ್ ಬಲ, ಟೀಮ್ ಇಂಡಿಯಾ ಫೇವರಿಟ್

ರೋಹಿತ್ ಬಲ, ಟೀಮ್ ಇಂಡಿಯಾ ಫೇವರಿಟ್

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಸರಣಿಗಳಲ್ಲಿ ಟೀಮ್ ಇಂಡಿಯಾವೇ ಗೆಲ್ಲುವ ತಂಡ ಎಂದು ಅಜಿತ್ ಅಗರ್ಕರ್ ಅಭಿಪ್ರಾಯಪಟ್ಟಿದ್ದಾರೆ. ರೋಹಿತ್ ಶರ್ಮಾ ಫಿಟ್ ಆಗಿದ್ದು ಮತ್ತೆ ತಂಡ ಸೇರಿಸುವುದರಿಂದ ಟೀಮ್ ಇಂಡಿಯಾ ಬಲಿಷ್ಠವಾಗಿದೆ ಎಂದು ಅಜಿತ್ ಅಗರ್ಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಟೀಮ್ ಇಂಡಿಯಾಕ್ಕೆ ಮಧ್ಯಮ ಕ್ರಮಾಂಕದ ತಲೆನೋವು

ಟೀಮ್ ಇಂಡಿಯಾಕ್ಕೆ ಮಧ್ಯಮ ಕ್ರಮಾಂಕದ ತಲೆನೋವು

ಇನ್ನೂ ಮುಂದುವರೆದು ಮಾತನಾಡಿರುವ ಅಜಿತ್ ಅಗರ್ಕರ್ ಈ ಸರಣಿಯಲ್ಲಿಯೂ ಕೂಡ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ಸಮಸ್ಯೆ ಟೀಮ್ ಇಂಡಿಯಾಗೆ ತಲೆನೋವಾಗಲಿದೆ ಎಂದಿದ್ದಾರೆ. ಸಾಧ್ಯವಾದರೆ ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದು ತಂಡಕ್ಕೆ ಆಸರೆಯಾಗಬೇಕೆಂದು ಕೂಡ ಅಜಿತ್ ಅಗರ್ಕರ್ ಸಲಹೆ ನೀಡಿದ್ದಾರೆ.

ತಂಡಕ್ಕೆ ಮಯಾಂಕ್ ಮತ್ತು ಇಶಾನ್ ಕಿಶನ್ ಸೇರ್ಪಡೆ

ತಂಡಕ್ಕೆ ಮಯಾಂಕ್ ಮತ್ತು ಇಶಾನ್ ಕಿಶನ್ ಸೇರ್ಪಡೆ

ವೆಸ್ಟ್ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯ ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾದ ಅನುಭವಿ ಆಟಗಾರ ಶಿಖರ್ ಧವನ್, ಯುವ ಕ್ರಿಕೆಟಿಗ ಋತುರಾಜ್ ಗಾಯಕ್ವಾಡ್, ನವದೀಪ್ ಸೈನಿ ಹಾಗೂ ಶ್ರೇಯಸ್ ಐಯ್ಯರ್ ಕೊರೊನಾ ವೈರಸ್ ಸೋಂಕಿಗೆ ಒಳಗಾದರು. ಹೀಗಾಗಿ ಆಯ್ಕೆಗಾರರು ತಂಡಕ್ಕೆ ಮಯಾಂಕ್ ಅಗರ್ವಾಲ್ ಮತ್ತು ಇಶಾನ್ ಕಿಶನ್ ಈ ಇಬ್ಬರು ಆಟಗಾರರನ್ನು ಆಯ್ಕೆ ಮಾಡಿಕೊಂಡಿದ್ದು, ಮೊದಲನೇ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಸ್ಥಾನವನ್ನು ಈ ಒಬ್ಬರಲ್ಲಿ ಒಬ್ಬರು ತುಂಬಲಿದ್ದಾರೆ.

Story first published: Saturday, February 5, 2022, 17:31 [IST]
Other articles published on Feb 5, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X