ಡೊಮಿನಿಕಾದ ವಿಂಡ್ಸರ್ ಪಾರ್ಕ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧ ಪ್ರವಾಸಿ ಭಾರತ ತಂಡ ಇನ್ನಿಂಗ್ಸ್ ಹಾಗೂ 141 ರನ್‌ಗಳ ವಿಜಯವನ್ನು ದಾಖಲಿಸಿತು. ಇದರ ಪರಿಣಾಮವಾಗಿ ರೋಹಿತ್ ಶರ್ಮಾ ಅವರು ಭಾರತದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕರ ಪಟ್ಟಿಯಲ್ಲಿ ಲೆಜೆಂಡ್ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದರು.
ಇದು ನಾಯಕನಾಗಿ 8 ಟೆಸ್ಟ್ ಪಂದ್ಯಗಳಲ್ಲಿ ರೋಹಿತ್ ಶರ್ಮಾಗೆ ಐದನೇ ಗೆಲುವಾಗಿದೆ. ಈ ಹಿಂದೆ ಸಚಿನ್ ತೆಂಡೂಲ್ಕರ್ ನಾಯಕರಾಗಿದ್ದಾಗ 25 ಪಂದ್ಯಗಳಲ್ಲಿ ಕೇವಲ ನಾಲ್ಕು ಪಂದ್ಯಗಳನ್ನು ಗೆದ್ದಿದ್ದರು.

ಇದಲ್ಲದೆ, ರೋಹಿತ್ ಶರ್ಮಾ ಅವರು ಪ್ರಸ್ತುತ ಭಾರತ ತಂಡದ ಉಪನಾಯಕ ಅಜಿಂಕ್ಯ ರಹಾನೆ ಮತ್ತು ಮಾಜಿ ನಾಯಕ ಅಜಿತ್ ವಾಡೇಕರ್ ಅವರನ್ನು ಹಿಂದಿಕ್ಕಿದ್ದಾರೆ. ಇವರಿಬ್ಬರು ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ಭಾರತವನ್ನು ಗೆಲುವಿನತ್ತ ಮುನ್ನಡೆಸಿದ್ದಾರೆ.
ಇನ್ನು 68 ಟೆಸ್ಟ್ ಪಂದ್ಯಗಳಿಂದ 40 ಗೆಲುವಿನೊಂದಿಗೆ ವಿರಾಟ್ ಕೊಹ್ಲಿ ಅವರು ಭಾರತದ ಯಶಸ್ವಿ ನಾಯಕರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಎಂಎಸ್ ಧೋನಿ (27 ಟೆಸ್ಟ್ ಪಂದ್ಯಗಳ ಗೆಲುವು) ಮತ್ತು ಸೌರವ್ ಗಂಗೂಲಿ (21 ಟೆಸ್ಟ್ ಪಂದ್ಯಗಳ ಗೆಲುವು) ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದಾರೆ.
ಆಫ್-ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಎದುರಾಳಿ ವೆಸ್ಟ್ ಇಂಡೀಸ್ ತಂಡದ ಬ್ಯಾಟಿಂಗ್ ಕ್ರಮಾಂಕಕ್ಕೆ ದುಸ್ವಪ್ನವಾಗಿ ಕಾಡಿದರು. ಒಂದೇ ಪಂದ್ಯದಲ್ಲಿ ಎರಡನೇ ಬಾರಿ 5 ವಿಕೆಟ್‌ಗಳ ಗೊಂಚಲು ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಮತ್ತು 141 ರನ್‌ಗಳ ಗೆಲುವು ತನ್ನದಾಗಿಸಿಕೊಂಡಿತು.

ಭಾರತ ತಂಡ ತನ್ನ ಮೊದಲ ಇನ್ನಿಂಗ್ಸ್‌ನ ಮಧ್ಯಾಹ್ನದ ಅವಧಿಯಲ್ಲಿ ಐದು ವಿಕೆಟ್‌ಗೆ 421 ರನ್‌ಗೆ ಡಿಕ್ಲೇರ್ ಮಾಡಿಕೊಂಡಿತು. ಆಗ ವೆಸ್ಟ್ ಇಂಡೀಸ್ ಬ್ಯಾಟರ್‌ಗಳಿಂದ ಉತ್ತಮ ಬ್ಯಾಟಿಂಗ್ ಪ್ರದರ್ಶನವನ್ನು ನಿರೀಕ್ಷಿಸಲಾಗಿತ್ತು. ಆದರೆ 50 ಓವರ್‌ಗಳಲ್ಲಿ 130 ರನ್‌ಗಳಿಗೆ ಆಲೌಟ್ ಆಗಿ ಮುಖಭಂಗ ಅನುಭವಿಸಿದರು.
ನಂತರ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ ವೆಸ್ಟ್ ಇಂಡೀಸ್ ತಂಡ 130 ರನ್‌ಗಳಿಗೆ ಸರ್ವಪತನ ಕಂಡಿತು. ವೆಸ್ಟ್ ಇಂಡೀಸ್‌ನ 5 ವಿಕೆಟ್ ಪಡೆದಿದ್ದ ರವಿಚಂದ್ರನ್ ಅಶ್ವಿನ್, ವೆಸ್ಟ್ ಇಂಡೀಸ್‌ನ ಎರಡನೇ ಇನ್ನಿಂಗ್ಸ್‌ನಲ್ಲಿಯೂ 7 ವಿಕೆಟ್ ಪಡೆದು ಮಿಂಚಿದರು.
ಮೊದಲ ಇನ್ನಿಂಗ್ಸ್‌ನಲ್ಲಿ ವೆಸ್ಟ್ ಇಂಡೀಸ್‌ನ 5 ವಿಕೆಟ್ ಪಡೆದಿದ್ದ ರವಿಚಂದ್ರನ್ ಅಶ್ವಿನ್, ನಂತರ ವೆಸ್ಟ್ ಇಂಡೀಸ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ 21.3 ಓವರ್‌ಗಳಲ್ಲಿ 71 ರನ್‌ಗಳಿಗೆ 7 ವಿಕೆಟ್‌ಗಳನ್ನು ಕಬಳಿಸಿ ಮಿಂಚಿದರು.
ಈ ಮೂಲಕ ತಮ್ಮ 33ನೇ ಐದು ವಿಕೆಟ್‌ಗಳ ಸಾಧನೆ ಮಾಡಿದರು. ಇದು ವಿದೇಶಿ ಟೆಸ್ಟ್ ಪಂದ್ಯದಲ್ಲಿ ಅವರ ಅತ್ಯುತ್ತಮ ಅಂಕಿಅಂಶವಾಗಿದೆ. ಮೊದಲ ದಿನವೇ ವೆಸ್ಟ್ ಇಂಡೀಸ್ 150 ರನ್‌ಗಳಿಗೆ ಆಲೌಟ್ ಆದ ನಂತರ ಫಲಿತಾಂಶವು ಭಾರತದ ಪರವಾಗಿತ್ತು.
ಅಂತಾರಾಷ್ಟ್ರೀಯ ಹಾಗೂ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಪಂದ್ಯದಲ್ಲಿ 171 ರನ್ ಬಾರಿಸಿದ ಯಶಸ್ವಿ ಜೈಸ್ವಾಲ್ ಭಾರತದ ಗೆಲುವಿಗೆ ದೊಡ್ಡ ಕೊಡುಗೆ ನೀಡಿದರು. ಇದೇ ವೇಳೆ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಚೊಚ್ಚಲ ಪಂದ್ಯದಲ್ಲೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
ಯಶಸ್ವಿ ಜೈಸ್ವಾಲ್ ಅವರ ಇನ್ನಿಂಗ್ಸ್ ತವರಿನ ಹೊರಗೆ ಚೊಚ್ಚಲ ಪಂದ್ಯದಲ್ಲಿ ಅತ್ಯಧಿಕ ಮತ್ತು ಶಿಖರ್ ಧವನ್ (187) ಮತ್ತು ರೋಹಿತ್ ಶರ್ಮಾ (177) ನಂತರ ಮೂರನೇ ಗರಿಷ್ಠ ಸ್ಕೋರ್ ಆಗಿದೆ.
ಮೊದಲ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಬಾರಿಸಿದರೆ, ಮಾಜಿ ನಾಯಕ ವಿರಾಟ್ ಕೊಹ್ಲಿ 182 ಎಸೆತಗಳಲ್ಲಿ 76 ರನ್ ಗಳಿಸಿದರು.