31ನೇ ಬಾರಿ 50+ ರನ್ ಸಿಡಿಸಿದ ರೋಹಿತ್: ಕೊಹ್ಲಿಯನ್ನು ಹಿಂದಿಕ್ಕಿ ದಾಖಲೆ

ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಅಮೋಘ ಗೆಲುವು ಸಾಧಿಸಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಅದ್ಭುತವಾದ ಪ್ರದರ್ಶನ ನಿಡುವ ಮೂಲಕ ವಿಂಡೀಸ್ ತಂಡಕ್ಕೆ ಯಾವ ಅವಕಾಶವನ್ನೂ ನೀಡದೆ ಭಾರತ ಗೆಲುವು ಸಾಧಿಸಿದೆ. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಭರ್ಜರಿ ಅರ್ಧ ಶತಕ ಸಿಡಿಸಿ ಮಿಂಚಿದ್ದಾರೆ.
ಇನ್ನು ಈ ಅರ್ಧ ಶತಕವನ್ನು ಸಿಡಿಸುವುದರ ಜೊತೆಗೆ ರೋಹಿತ್ ಶರ್ಮಾ ಮಹತ್ವದ ಮೈಲಿಗಲ್ಲಿ ಸಾಧಿಸಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬಾರಿ 50ಕ್ಕೀ ಅಧಿಕ ರನ್‌ಗಳಿಸಿದ ದಾಖಲೆಯನ್ನು ರೋಹಿತ್ ಶರ್ಮಾ ಈಗ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಇದಕ್ಕೂ ಮುನ್ನ ಮಾಜಿ ನಾಯಕ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಅರ್ಧ ಶತಕ ಸಿಡಿಸಿದ ಆಟಗಾರ ಎನಿಸಿಕೊಂಡಿದ್ದರು.

27ನೇ ಅರ್ಧ ಶತಕ ಸಿಡಿಸಿದ ರೋಹಿತ್
ರೋಹಿತ್ ಶರ್ಮಾ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಆರಂಭದಿಂದಲೇ ಭರ್ಜರಿಯಾಗಿ ಬ್ಯಾಟ್ ಬೀಸಿದರು. ಈ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 27ನೇ ಅರ್ಧ ಶತಕವನ್ನು ಸಿಡಿಸಿದ್ದಾರೆ. 44 ಎಸೆತಗಳನ್ನು ಎದುರಿಸಿರುವ ರೋಹಿತ್ ಶರ್ಮಾ 64 ರನ್‌ಗಳಿಸಿದರು. ಈ ಇನ್ನಿಂಗ್ಸ್‌ನಲ್ಲಿ ಎರಡು ಸಿಕ್ಸರ್ ಹಾಗೂ ಏಳು ಬೌಂಡರಿಗಳಿದ್ದವು. ಈ ಮೂಲಕ ಅತಿ ಹೆಚ್ಚು ಬಾರಿ 50ಕ್ಕೂ ಅಧಿಕ ರನ್‌ಗಳಿಸಿದ ಆಟಗಾರರ ಪಟ್ಟಿಯಲ್ಲಿ ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು ಹಿಂದಿದ್ದಾರೆ. ರೋಹಿತ್ ಶರ್ಮಾ ಟಿ20 ಕ್ರಿಕೆಟ್‌ನಲ್ಲಿ 4 ಶತಕಗಳನ್ನು ಕೂಡ ಹೊಂದಿರುವ ಕಾರಣ 32ನೇ ಬಾರಿಗೆ 50ಕ್ಕೂ ಅಧಿಕ ರನ್‌ಗಳಿಸಿದಂತಾಗಿದೆ. ಕೊಹ್ಲಿ ಹೆಸರಿನಲ್ಲಿ ಮೂವತ್ತೊಂದು 50+ ರನ್‌ಗಳಿದೆ.

ಮಾರ್ಟಿನ್ ಗಪ್ಟಿಲ್‌ರನ್ನು ಹಿಂದಿಕ್ಕಿದ ರೋಹಿತ್
ಇನ್ನು ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ಗಳಿಸಿದ ದಾಖಲೆಯನ್ನು ರೋಹಿತ್ ಶರ್ಮಾ ಮತ್ತೆ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ರೋಹಿತ್ ಶರ್ಮಾ ಹೆಸರಿನಲ್ಲೇ ಇದ್ದ ಈ ದಾಖಲೆಯನ್ನು ಇತ್ತೀಚೆಗಷ್ಟೇ ಕಿವೀಸ್ ಆಟಗಾರ ಮಾರ್ಟಿಲ್ ಗಪ್ಟಿಲ್ ತಮ್ಮ ಹೆಸರಿಗೆ ಬರೆದುಕೊಂಡಿದ್ದರು. ಈ ಪಂದ್ಯದಲ್ಲಿ ಭರ್ಜರಿ ಅರ್ಧ ಶತಕ ಸಿಡಿಸುವ ಮೂಲಕ ರೋಹಿತ್ ಮತ್ತೆ ದಾಖಲೆ ತಮ್ಮದಾಗಿಸಿಕೊಂಡಿದ್ದಾರೆ. ನ್ಯೂಜಿಲೆಂಡ್ ಆರಂಭಿಕ ಆಟಗಾರನ 3399 ಟಿ20 ರನ್‌ಗಳನ್ನು ಗಳಸಿದ್ದರೆ ರೋಹಿತ್ ಶರ್ಮಾ 3443 ರನ್‌ಗಳಿಸಿದ್ದಾರೆ.

ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಭಾರತ
ಇನ್ನು ವೆಸ್ಟ್ ಇಮಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ. ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತದ ಪರವಾಗಿ ಆರಂಬದಲ್ಲಿ ನಾಯಕ ರೋಹಿತ್ ಶರ್ಮಾ ಅರ್ಧ ಶತಕ ಸಿಡಿಸಿ ಮಿಂಚಿದರು. ಬಳಿಕ ಅಂತಿಮ ಹಂತದಲ್ಲಿ ಕಣಕ್ಕಿಳಿದ ದಿನೇಶ್ ಕಾರ್ತಿಕ್ ತಮ್ಮ ಸ್ಪೋಟಕ ಶೈಲಿಯ ಬ್ಯಾಟಿಂಗ್ ಮೂಲಕ ತಂಡದ ಮೊತ್ತವನ್ನು ಭರ್ಜರಿಯಾಗಿ ಏರಿಸಿದರು. ಇದರ ಪರಿಣಾವಾಗಿ ಭಾರತ ತಂಡ 190 ರನ್‌ಗಳನ್ನು ಗಳಿಸಲು ಸಾಧ್ಯವಾಯಿತು.
ಭಾರತ ಮತ್ತು ವೆಸ್ಟ್ ಇಂಡೀಸ್ ಆಡುವ 11ರ ಬಳಗ
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜಾ, ರವಿ ಬಿಷ್ಣೋಯಿ, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್.
ವೆಸ್ಟ್ ಇಂಡೀಸ್ ತಂಡ: ಶಮರ್ಹ್ ಬ್ರೂಕ್ಸ್, ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ನಿಕೋಲಸ್ ಪೂರನ್ (ನಾಯಕ/ವಿಕೆಟ್ ಕೀಪರ್), ಕೈಲ್ ಮೇಯರ್ಸ್, ಜೇಸನ್ ಹೋಲ್ಡರ್, ಅಕೇಲ್ ಹೊಸೈನ್, ಓಡಿಯನ್ ಸ್ಮಿತ್, ಅಲ್ಜಾರಿ ಜೋಸೆಫ್, ಓಬೆಡ್ ಮೆಕಾಯ್, ಕೀಮೋ ಪಾಲ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications