IND vs WI: ಶಿಖರ್ ಧವನ್ ಜೊತೆಗೂಡಿ ಈತ ODI ಕ್ರಿಕೆಟ್‌ಗೆ ಪದಾರ್ಪಣೆ ಮಾಡಬೇಕು: ವಾಸಿಂ ಜಾಫರ್

ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ನಾಯಕ ಶಿಖರ್ ಧವನ್ ಜೊತೆಗೆ ಯುವ ಆರಂಭಿಕ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ ತನ್ನ ಚೊಚ್ಚಲ ಏಕದಿನ ಪಂದ್ಯವನ್ನಾಡಬೇಕು ಮತ್ತು ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಬೇಕು ಎಂದು ಭಾರತದ ಮಾಜಿ ಆರಂಭಿಕ ಆಟಗಾರ ವಾಸಿಂ ಜಾಫರ್ ಅಭಿಪ್ರಾಯಪಟ್ಟಿದ್ದಾರೆ.
ಆರಂಭಿಕ ಆಟಗಾರನಾಗಿ ರುತುರಾಜ್ ಗಾಯಕ್ವಾಡ್ ಪ್ರಭಾವಿ ಲಿಸ್ಟ್ ಎ ದಾಖಲೆಯನ್ನು ಹೊಂದಿದ್ದಾರೆ ಎಂದು ವಾಸಿಂ ಜಾಫರ್ ಗಮನ ಸೆಳೆದರು. ಗಮನಾರ್ಹವಾಗಿ ರುತುರಾಜ್ 64 ಲಿಸ್ಟ್ ಎ ಪಂದ್ಯಗಳಲ್ಲಿ 54.73 ಸರಾಸರಿ ಮತ್ತು 100.09 ಸ್ಟ್ರೈಕ್ ರೇಟ್‌ನಲ್ಲಿ 3284 ರನ್ ಗಳಿಸಿದ್ದಾರೆ.
"ರುತುರಾಜ್ ಗಾಯಕ್ವಾಡ್ ತನ್ನ ಚೊಚ್ಚಲ ಏಕದಿನ ಪಂದ್ಯವನ್ನು ವೆಸ್ಟ್ ಇಂಡೀಸ್ ವಿರುದ್ಧ ಸರಣಿಯಲ್ಲಿ ಶಿಖರ್ ಧವನ್ ಜೊತೆಗೂಡಿ ತೆರೆಯಬೇಕು ಎಂದು ನಾನು ಭಾವಿಸುತ್ತೇನೆ. ರುತುರಾಜ್ ವಿಜಯ್ ಹಜಾರೆ ಟ್ರೋಫಿಯಲ್ಲಿ 5 ಇನ್ನಿಂಗ್ಸ್‌ಗಳಲ್ಲಿ 4 ಶತಕಗಳನ್ನು ಗಳಿಸಿದ್ದಾರೆ. ಅಲ್ಲದೆ, ಈ ಇಬ್ಬರು ಎಡ-ಬಲ ಜೋಡಿಯಾಗಿಯು ತಂಡಕ್ಕೆ ಒಳೆಯದು," ಎಂದು ವಾಸಿಂ ಜಾಫರ್ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಐಪಿಎಲ್ 2021ರಲ್ಲಿ ಆರೆಂಜ್ ಕ್ಯಾಪ್ ಗೆದ್ದ ಗಾಯಕ್ವಾಡ್
ಐಪಿಎಲ್ 2021ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ನ ಪ್ರಶಸ್ತಿ ವಿಜೇತ ಅಭಿಯಾನದಲ್ಲಿ ರುತುರಾಜ್ ಗಾಯಕ್ವಾಡ್ ಗಮನ ಸೆಳೆದರು. ಅವರು 16 ಪಂದ್ಯಗಳಲ್ಲಿ 45.35ರ ಸರಾಸರಿಯಲ್ಲಿ ಮತ್ತು 136.26 ರ ಸ್ಟ್ರೈಕ್ ರೇಟ್‌ನಲ್ಲಿ 635 ರನ್ ಗಳಿಸುವ ಮೂಲಕ ಆರೆಂಜ್ ಕ್ಯಾಪ್ ಗೆದ್ದರು. ಈ ಯುವ ಬ್ಯಾಟರ್ ಕಳೆದ ವರ್ಷ ಶ್ರೀಲಂಕಾ ವಿರುದ್ಧ ಭಾರತಕ್ಕಾಗಿ ತನ್ನ ಟಿ20 ಪಂದ್ಯದಲ್ಲಿ ಪದಾರ್ಪಣೆ ಮಾಡಿದರು. ನಂತರದ ಸರಣಿಯಲ್ಲಿ ಸೀಮಿತ ಅವಕಾಶಗಳ ನಂತರ ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಅವರು ತಮ್ಮ ಆಟದ ಕೌಶಲ್ಯಗಳನ್ನು ಪ್ರದರ್ಶಿಸಲು ಅವಕಾಶವನ್ನು ಪಡೆದರು.

ವಿಜಯ್ ಹಜಾರೆ ಟ್ರೋಫಿಯಲ್ಲಿ 603 ರನ್
ರುತುರಾಜ್ ಗಾಯಕ್ವಾಡ್ ಅವರು ಭಾರತಕ್ಕಾಗಿ ತಮ್ಮ ಚೊಚ್ಚಲ ಏಕದಿನ ಪಂದ್ಯವನ್ನು ಇನ್ನೂ ಆಡಿಲ್ಲ. ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಅನುಪಸ್ಥಿತಿಯಲ್ಲಿ ವೆಸ್ಟ್ ಇಂಡೀಸ್‌ನಲ್ಲಿ ಈ ಅವಕಾಶ ಬರಬಹುದು. ರುತುರಾಜ್ ಗಾಯಕ್ವಾಡ್ ಅವರು 2021-22ರ ವಿಜಯ್ ಹಜಾರೆ ಟ್ರೋಫಿಯಲ್ಲಿ ಪ್ರಮುಖ ರನ್ ಸ್ಕೋರರ್ ಆಗಿದ್ದರು, ಐದು ಪಂದ್ಯಗಳಲ್ಲಿ 150.75 ಸರಾಸರಿ ಮತ್ತು 112.92 ಸ್ಟ್ರೈಕ್ ರೇಟ್‌ನಲ್ಲಿ 603 ರನ್‌ಗಳನ್ನು ಸಿಡಿಸಿದ್ದಾರೆ.
ವೆಸ್ಟ್ ಇಂಡೀಸ್‌ನಲ್ಲಿ ಶುಕ್ರವಾರ (ಜುಲೈ 22) ಆರಂಭವಾಗಲಿರುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಶಿಖರ್ ಧವನ್ ಭಾರತವನ್ನು ಮುನ್ನಡೆಸಲಿದ್ದಾರೆ. ನಂತರ ಟಿ20 ಸರಣಿಗೆ ನಿಯಮಿತ ನಾಯಕ ರೋಹಿತ್ ಶರ್ಮಾ ಅವರು ನಾಯಕರಾಗಿ ಹಿಂದಿರುಗಲಿದ್ದಾರೆ. ಇನ್ನು ರೋಹಿತ್ ಸೇರಿದಂತೆ ವಿರಾಟ್ ಕೊಹ್ಲಿ, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ ಮತ್ತು ಜಸ್ಪ್ರೀತ್ ಬುಮ್ರಾ ಅವರನ್ನು 50 ಓವರ್‌ಗಳ ಸರಣಿಗೆ ವಿಶ್ರಾಂತಿ ನೀಡಲಾಗಿದೆ.

ವೆಸ್ಟ್ ಇಂಡೀಸ್ ವಿರುದ್ಧದ 3 ಏಕದಿನ ಪಂದ್ಯಗಳಿಗೆ ಭಾರತ ತಂಡ
ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್‌ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ), ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications