IND vs WI: 2ನೇ ಏಕದಿನ ಪಂದ್ಯದಲ್ಲಿ ವಿಶೇಷ ಮೈಲಿಗಲ್ಲು ನೆಟ್ಟ ಹೋಪ್, ಸ್ಯಾಮ್ಸನ್ & ಅಕ್ಷರ್ ಪಟೇಲ್

ನಿನ್ನೆ ( ಜುಲೈ 24 ) ವೆಸ್ಟ್ ಇಂಡೀಸ್‌ನ ಕ್ವೀನ್ಸ್ ಪಾರ್ಕ್ ಓವಲ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ 2 ವಿಕೆಟ್‍ಗಳ ರೋಚಕ ಜಯವನ್ನು ಸಾಧಿಸಿತು.

ಅಕ್ಷರ್ ಸಾಹಸದಿಂದ ಗೆದ್ದ ಭಾರತ: ತಂಡದ ಮೇಲೆ ನಂಬಿಕೆಯಿತ್ತು ಎಂದ ನಾಯಕ ಧವನ್ಅಕ್ಷರ್ ಸಾಹಸದಿಂದ ಗೆದ್ದ ಭಾರತ: ತಂಡದ ಮೇಲೆ ನಂಬಿಕೆಯಿತ್ತು ಎಂದ ನಾಯಕ ಧವನ್

ಇತ್ತಂಡಗಳ ನಡುವೆ ಕಳೆದ ಶುಕ್ರವಾರ ನಡೆದಿದ್ದ ಪ್ರಥಮ ಏಕದಿನ ಪಂದ್ಯದಲ್ಲಿ ಜಯ ಸಾಧಿಸಿ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದ ಟೀಮ್ ಇಂಡಿಯಾ ಈ ಪಂದ್ಯದಲ್ಲಿಯೂ ಸಹ ಜಯ ಸಾಧಿಸುವುದರ ಮೂಲಕ ಸದ್ಯ ಸರಣಿಯನ್ನು ಕೈವಶ ಮಾಡಿಕೊಳ್ಳುವುದರ ಜತೆಗೆ ಅಂತಿಮ ಪಂದ್ಯdಲ್ಲಿಯೂ ಗೆದ್ದು ವೈಟ್ ವಾಷ್ ಸಾಧನೆ ಮಾಡುವತ್ತ ಚಿತ್ತ ನೆಟ್ಟಿದೆ.

2011ರ ವಿಶ್ವಕಪ್‌ನಲ್ಲಿ ಭಾರತ ತಂಡದಲ್ಲಿದ್ದ ಈ ಮೂವರು ಇನ್ನೂ ಸಹ ನಿವೃತ್ತಿ ತೆಗೆದುಕೊಂಡಿಲ್ಲ!2011ರ ವಿಶ್ವಕಪ್‌ನಲ್ಲಿ ಭಾರತ ತಂಡದಲ್ಲಿದ್ದ ಈ ಮೂವರು ಇನ್ನೂ ಸಹ ನಿವೃತ್ತಿ ತೆಗೆದುಕೊಂಡಿಲ್ಲ!

ಇತ್ತ ಕಳೆದ ಏಕದಿನ ಸರಣಿಯಲ್ಲಿ ಬಾಂಗ್ಲಾದೇಶದ ವಿರುದ್ಧ ತವರಿನಲ್ಲಿಯೇ ವೈಟ್ ವಾಷ್ ಮುಖಭಂಗ ಅನುಭವಿಸಿದ್ದ ವೆಸ್ಟ್ ಇಂಡೀಸ್ ಈ ಸರಣಿಯಲ್ಲಿಯೂ ಕೂಡ ಅಂತಹದ್ದೇ ಪರಿಸ್ಥಿತಿಯನ್ನು ತಲುಪಿದೆ. ದ್ವಿತೀಯ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತನ್ನ ಆರಂಭಿಕ ಆಟಗಾರ ಶಾಯ್ ಹೋಪ್ ಶತಕ ಹಾಗೂ ನಾಯಕ ನಿಕೋಲಸ್ ಪೂರನ್ ಅವರ ಅಮೋಘ ಅರ್ಧಶತಕದ ನೆರವಿನಿಂದ 50 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 311 ರನ್ ಕಲೆಹಾಕಿ ಟೀಮ್ ಇಂಡಿಯಾಗೆ 312 ರನ್‌ಗಳ ಕಠಿಣ ಗುರಿಯನ್ನು ನೀಡಿತ್ತು. ಇತ್ತ ಈ ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾ ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ ಮತ್ತು ಅಕ್ಷರ್ ಪಟೇಲ್ ಅವರ ಅಮೋಘ ಅರ್ಧಶತಕಗಳ ನೆರವಿನಿಂದ 49.4 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 312 ರನ್ ಕಲೆ ಹಾಕುವುದರ ಮೂಲಕ ಜಯವನ್ನು ಸಾಧಿಸಿತು. ಟೀಮ್ ಇಂಡಿಯಾ ಪರ ಅಂತಿಮ ಹಂತದವರೆಗೂ ಏಕಾಂಗಿ ಹೋರಾಟ ನಡೆಸಿ 35 ಎಸೆತಗಳಲ್ಲಿ ಅಜೇಯ 64 ರನ್ ಕಲೆಹಾಕಿದ ಅಕ್ಷರ್ ಪಟೇಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡು ಮ್ಯಾಚ್ ವಿನ್ನರ್ ಎಂಬ ಪಟ್ಟ ಗಿಟ್ಟಿಸಿಕೊಂಡರು. ಹೀಗೆ ಸಾಕಷ್ಟು ರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಆಟಗಾರ ಶಾಯ್ ಹೋಪ್ ಹಾಗೂ ಟೀಮ್ ಇಂಡಿಯಾದ ಆಟಗಾರರಾದ ಸಂಜು ಸ್ಯಾಮ್ಸನ್ ಮತ್ತು ಅಕ್ಷರ್ ಪಟೇಲ್ ತಮ್ಮದೇ ಆದ ಮೈಲಿಗಲ್ಲುಗಳನ್ನು ನೆಟ್ಟಿದ್ದಾರೆ. ಈ ಕುರಿತಾದ ವಿವರ ಕೆಳಕಂಡಂತಿದೆ.

ಶಾಯ್ ಹೋಪ್ ವಿಶೇಷ ಮೈಲಿಗಲ್ಲು

ಶಾಯ್ ಹೋಪ್ ವಿಶೇಷ ಮೈಲಿಗಲ್ಲು

ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಪರ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಶಾಯ್ ಹೋಪ್ 135 ಎಸೆತಗಳಲ್ಲಿ 115 ರನ್ ಕಲೆ ಹಾಕುವುದರ ಮೂಲಕ ತಮ್ಮ ನೂರನೇ ಅಂತರರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿ ವಿಶೇಷ ಮೈಲಿಗಲ್ಲನ್ನು ನೆಟ್ಟರು. ಈ ಮೂಲಕ ತಮ್ಮ ನೂರನೇ ಅಂತರರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಶತಕ ಬಾರಿಸಿದ ವಿಶ್ವದ ಹತ್ತನೇ ಆಟಗಾರ ಹಾಗೂ ವೆಸ್ಟ್ ಇಂಡೀಸ್ ತಂಡದ ನಾಲ್ಕನೇ ಆಟಗಾರ ಎಂಬ ಖ್ಯಾತಿಗೆ ಶಾಯ್ ಹೋಪ್ ಪಾತ್ರರಾದರು.

ಸಂಜು ಸ್ಯಾಮ್ಸನ್ ಮತ್ತು ಅಕ್ಷರ್ ಪಟೇಲ್ ಸಾಧನೆ

ಸಂಜು ಸ್ಯಾಮ್ಸನ್ ಮತ್ತು ಅಕ್ಷರ್ ಪಟೇಲ್ ಸಾಧನೆ

ಈ ಪಂದ್ಯದ ಮೂಲಕ ತನ್ನ ಮೂರನೇ ಅಂತರರಾಷ್ಟ್ರೀಯ ಏಕದಿನ ಪಂದ್ಯವನ್ನಾಡಿದ ಸಂಜು ಸ್ಯಾಮ್ಸನ್ ಪಂದ್ಯದಲ್ಲಿ ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿದು 54 ರನ್ ಕಲೆ ಹಾಕುವುದರ ಮೂಲಕ ಚೊಚ್ಚಲ ಅಂತರರಾಷ್ಟ್ರೀಯ ಏಕದಿನ ಅರ್ಧ ಶತಕವನ್ನು ಬಾರಿಸಿದ ಮೈಲಿಗಲ್ಲನ್ನು ನೆಟ್ಟರು. ಇನ್ನು 35 ಎಸೆತಗಳಲ್ಲಿ ಸಿಡಿಲಬ್ಬರದ ಅಜೇಯ 64 ರನ್ ಕಲೆಹಾಕಿ ಮ್ಯಾಚ್ ವಿನ್ನರ್ ಎನಿಸಿಕೊಂಡ ಅಕ್ಷರ್ ಪಟೇಲ್ ಕೂಡ ತಮ್ಮ ಚೊಚ್ಚಲ ಏಕದಿನ ಅರ್ಧಶತಕ ಬಾರಿಸಿದ ಮೈಲಿಗಲ್ಲನ್ನು ನೆಟ್ಟರು.

35 ಎಸೆತ,3 ಫೋರ್,5 ಸಿಕ್ಸರ್: ಅಕ್ಷರ್ ಪಟೇಲ್ ಸ್ಫೋಟಕ ಆಟ ಹೇಗಿತ್ತು ನೋಡಿ | *Cricket | OneIndia Kanndaa
ಟೀಮ್ ಇಂಡಿಯಾ ವಿಶೇಷ ಸಾಧನೆ

ಟೀಮ್ ಇಂಡಿಯಾ ವಿಶೇಷ ಸಾಧನೆ

ಒಂದೆಡೆ ಇತ್ತಂಡಗಳ ಆಟಗಾರರು ವಿಶೇಷ ಮೈಲಿಗಲ್ಲನ್ನು ಈ ಪಂದ್ಯದ ಮೂಲಕ ನೆಟ್ಟಿದ್ದರೆ ಟೀಮ್ ಇಂಡಿಯಾ ಕೂಡ ವಿಶೇಷ ದಾಖಲೆಯೊಂದನ್ನು ಬರೆದಿದೆ. ಈ ಪಂದ್ಯದ ಗೆಲುವಿನೊಂದಿಗೆ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ವಶಪಡಿಸಿಕೊಳ್ಳುವುದರ ಮೂಲಕ ವಿಂಡೀಸ್ ವಿರುದ್ಧ ಸತತ 12ನೇ ಏಕದಿನ ಸರಣಿ ಗೆದ್ದು ತಂಡವೊಂದರ ವಿರುದ್ಧ ಸತತವಾಗಿ ಅತಿ ಹೆಚ್ಚು ಏಕದಿನ ಸರಣಿ ಗೆದ್ದ ದಾಖಲೆಯನ್ನು ಭಾರತ ಬರೆದಿದೆ. ಈ ಹಿಂದೆ ಪಾಕಿಸ್ತಾನ ತಂಡ ಜಿಂಬಾಬ್ವೆ ವಿರುದ್ಧ ಸತತ 11 ಏಕದಿನ ಸರಣಿಗಳನ್ನು ಗೆದ್ದು ದಾಖಲೆಯನ್ನು ನಿರ್ಮಿಸಿತ್ತು. ಇದೀಗ ಟೀಮ್ ಇಂಡಿಯಾ ಪಾಕಿಸ್ತಾನ ತಂಡದ ಈ ದಾಖಲೆಯನ್ನು ಸರಿಗಟ್ಟಿದೆ.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Monday, July 25, 2022, 13:38 [IST]
Other articles published on Jul 25, 2022

Latest Videos

  + More
  POLLS
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Yes No
  Settings X