ಇಂಗ್ಲೆಂಡ್ ಪ್ರವಾಸ ಆಯ್ತು, ವಿಂಡೀಸ್ ಪ್ರವಾಸ ಶುರು; ವೆಸ್ಟ್ ಇಂಡೀಸ್‌ಗೆ ಯಾವಾಗ ಹಾರಲಿದೆ ಧವನ್ ಪಡೆ?

ಇಂಗ್ಲೆಂಡ್ ನೆಲದಲ್ಲಿ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿಯನ್ನು ಅಡಿ ಎರಡೂ ಸರಣಿಗಳಲ್ಲಿಯೂ ಸಹ 2-1 ಅಂತರದಿಂದ ಗೆದ್ದ ಟೀಮ್ ಇಂಡಿಯಾ ಇದೀಗ ವೆಸ್ಟ್ ಇಂಡೀಸ್ ಪ್ರವಾಸವನ್ನು ಕೈಗೊಂಡು ಹಣಾಹಣಿ ನಡೆಸಲು ಸಜ್ಜಾಗುತ್ತಿದೆ.
ಹೌದು, ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವೆ 3 ಪಂದ್ಯಗಳ ಏಕದಿನ ಸರಣಿ ಹಾಗೂ 5 ಪಂದ್ಯಗಳ ಟಿ ಟ್ವೆಂಟಿ ಸರಣಿ ನಡೆಯಲಿದ್ದು, ಇದೇ ತಿಂಗಳ 22ರಿಂದ ಮೊದಲಿಗೆ ಏಕದಿನ ಸರಣಿ ಆರಂಭವಾಗಲಿದೆ.
ವೆಸ್ಟ್ ಇಂಡೀಸ್ ವಿರುದ್ಧದ 2 ಸರಣಿಗಳಲ್ಲಿಯೂ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದ್ದು, ಏಕದಿನ ಸರಣಿಯಿಂದ ನಾಯಕ ರೋಹಿತ್ ಶರ್ಮಾ ಕೂಡ ವಿಶ್ರಾಂತಿ ಕಾರಣದಿಂದಾಗಿ ಹೊರಗುಳಿದಿದ್ದಾರೆ. ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಶಿಖರ್ ಧವನ್ ನಾಯಕನಾಗಿ ಮುನ್ನಡೆಸಲಿದ್ದಾರೆ. ಸದ್ಯ ಇಂಗ್ಲೆಂಡ್ ಸರಣಿ ನಿನ್ನೆಯಷ್ಟೇ ( ಜುಲೈ 17 ) ಮುಕ್ತಾಯವಾಗಿದ್ದು, ಟೀಮ್ ಇಂಡಿಯಾ ಮುಂದಿನ ವೆಸ್ಟ್ ಇಂಡೀಸ್ ಪ್ರವಾಸವನ್ನು ಯಾವಾಗ ಕೈಗೊಳ್ಳಲಿದೆ ಎಂಬುದರ ಕುರಿತಾದ ಮಾಹಿತಿ ಕೆಳಕಂಡಂತಿದೆ.

ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳುವುದು ಯಾವಾಗ?
ಸದ್ಯ ಟೀಮ್ ಇಂಡಿಯಾ ಆಟಗಾರರು ಇಂಗ್ಲೆಂಡ್ ವಿರುದ್ಧದ ಸರಣಿ ಮುಕ್ತಾಯವಾದ ನಂತರ ಮ್ಯಾಂಚೆಸ್ಟರ್ ನಗರದಲ್ಲಿಯೇ ಉಳಿದಿದ್ದು, ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಹೊರಗುಳಿದಿರುವ ಆಟಗಾರರ ಪೈಕಿ ಕೆಲವರು ಇಂಗ್ಲೆಂಡ್‌ನಲ್ಲಿಯೇ ಬೀಡುಬಿಟ್ಟರೆ ಕೆಲವರು ತವರಿಗೆ ವಾಪಸಾಗಲಿದ್ದಾರೆ. ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಳಿಗೆ ಪ್ರಕಟವಾಗಿರುವ ತಂಡಗಳಲ್ಲಿ ಸ್ಥಾನ ಪಡೆದುಕೊಂಡಿರುವ ಆಟಗಾರರು ಇಂಗ್ಲೆಂಡ್‌ನಿಂದ ನೇರವಾಗಿ ವಿಶೇಷ ಚಾಪರ್ ಮೂಲಕ ನಾಳೆ ( ಜುಲೈ 19 ) ವೆಸ್ಟ್ ಇಂಡೀಸ್ ತಲುಪಲಿದ್ದಾರೆ. ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆಯಾಗದಿದ್ದ ಸಂಜು ಸ್ಯಾಮ್ಸನ್, ರುತುರಾಜ್ ಗಾಯಕ್ವಾಡ್ ಮತ್ತು ಶುಬ್ ಮನ್ ಗಿಲ್ ಕೂಡ ನಾಳೆ ವೆಸ್ಟ್ ಇಂಡೀಸ್‌ನ ಟ್ರಿನಿಡಾಡ್ & ಟೊಬಾಗೊ ತಲುಪಲಿದ್ದು ಟೀಮ್ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಟಿ ಟ್ವೆಂಟಿ ಸರಣಿಯಲ್ಲಿ ಕಣಕ್ಕಿಳಿಯಲಿರುವ ರೋಹಿತ್ ಶರ್ಮಾ ಮತ್ತು ಇತರೆ ಆಟಗಾರರು ಏಕದಿನ ಸರಣಿ ಮುಕ್ತಾಯವಾದ ನಂತರ ವಿಂಡೀಸ್ ತಲುಪಲಿದ್ದಾರೆ.

ಏಕದಿನ ಸರಣಿಗೆ ಪ್ರಕಟಿಸಲಾಗಿರುವ ತಂಡಗಳು
ಭಾರತ ತಂಡ: ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ ( ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ), ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.
ವೆಸ್ಟ್ ಇಂಡೀಸ್ ತಂಡ: ನಿಕೋಲಸ್ ಪೂರನ್ (ನಾಯಕ), ಶಾಯ್ ಹೋಪ್ (ಉಪನಾಯಕ), ಶಮರ್ ಬ್ರೂಕ್ಸ್, ಕೀಸಿ ಕಾರ್ಟಿ, ಜೇಸನ್ ಹೋಲ್ಡರ್, ಅಕೇಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರ್ಯಾಂಡನ್ ಕಿಂಗ್, ಕೈಲ್ ಮೇಯರ್ಸ್, ಗುಡಾಕೇಶ್ ಮೋಟಿ, ಕೀಮೋ ಪಾಲ್, ರೋವ್‌ಮನ್ ಪೊವೆಲ್, ಜೇಡನ್ ಸೀಲ್ಸ್

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ವೇಳಾಪಟ್ಟಿ
• ಪ್ರಥಮ ಏಕದಿನ ಪಂದ್ಯ ಜುಲೈ 22ರಂದು ಪೋರ್ಟ್ ಆಫ್ ಸ್ಪೇನ್ ನ ಕ್ವೀನ್ಸ್ ಪಾರ್ಕ್ ಓವಲ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
• ದ್ವಿತೀಯ ಏಕದಿನ ಪಂದ್ಯ ಜುಲೈ 24ರಂದು ಪೋರ್ಟ್ ಆಫ್ ಸ್ಪೇನ್ ನ ಕ್ವೀನ್ಸ್ ಪಾರ್ಕ್ ಓವಲ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
• ತೃತೀಯ ಏಕದಿನ ಪಂದ್ಯ ಜುಲೈ 27ರಂದು ಪೋರ್ಟ್ ಆಫ್ ಸ್ಪೇನ್ ನ ಕ್ವೀನ್ಸ್ ಪಾರ್ಕ್ ಓವಲ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications