ಶನಿವಾರ, ಆಗಸ್ಟ್ 12ರಂದು ಫ್ಲೋರಿಡಾದ ಲಾಡರ್‌ಹಿಲ್‌ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ತಂಡವು 4ನೇ ಪಂದ್ಯದಲ್ಲಿ 9 ವಿಕೆಟ್‌ಗಳಿಂದ ಗೆಲ್ಲುವ ಮೂಲಕ 2-2 ಅಂತರದಿಂದ ಸಮಬಲ ಸಾಧಿಸಿದೆ.
ವೆಸ್ಟ್ ಇಂಡೀಸ್ ನೀಡಿದ್ದ 179 ರನ್‌ಗಳಿಗೆ ಪ್ರತ್ಯುತ್ತರವಾಗಿ, ಮೊದಲ ವಿಕೆಟ್‌ಗೆ 165 ರನ್‌ಗಳ ಜೊತೆಯಾಟವಾಡಿದ ಶುಭ್ಮನ್ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ ಅವರ ಪ್ರದರ್ಶನದ ಮೂಲಕ ಪ್ರವಾಸಿ ತಂಡ ಪ್ರಾಬಲ್ಯ ಸಾಧಿಸಿತು. ಭಾರತದ ಆರಂಭಿಕ ಬ್ಯಾಟರ್‌ಗಳು ವೈಯಕ್ತಿಕ ಅರ್ಧಶತಕ ಬಾರಿಸಿದರು ಮತ್ತು ವಿಂಡೀಸ್ ಬೌಲರ್‌ಗಳನ್ನು ದಂಡಿಸಿದರು.

ಯಶಸ್ವಿ ಜೈಸ್ವಾಲ್ 51 ಎಸೆತಗಳಲ್ಲಿ 11 ಬೌಂಡರಿ ಮತ್ತು 3 ಸಿಕ್ಸರ್ ನೆರವಿನಿಂದ 164.71ರ ಸ್ಟ್ರೈಕ್ ರೇಟ್‌ನಲ್ಲಿ ಅಜೇಯ 84 ರನ್ ಬಾರಿಸಿದರೆ, ಶುಭ್ಮನ್ ಗಿಲ್ ಔಟಾಗುವ 47 ಎಸೆತಗಳಲ್ಲಿ 3 ಬೌಂಡರಿ ಮತ್ತು 5 ಸಿಕ್ಸರ್ ಸಮೇತ 77 ರನ್ ಗಳಿಸಿದರು.
ಇದೇ ವೇಳೆ ಭಾರತದ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಅವರು ಈ ಯುವ ಆರಂಭಿಕ ಜೋಡಿಯನ್ನು ಶ್ಲಾಘಿಸಿದ್ದಾರೆ ಮತ್ತು ಭಾರತ ತಂಡವು ಇದುವರೆಗೆ ನಿರ್ಮಿಸಿದ ಅತ್ಯುತ್ತಮ ಆಟಗಾರರಾಗುವ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದು ಹೇಳಿದರು.
4ನೇ ಟಿ20 ಪಂದ್ಯದ ನಂತರ ಜಿಯೋ ಸಿನಿಮಾದಲ್ಲಿ ಮಾತನಾಡಿದ ರಾಬಿನ್ ಉತ್ತಪ್ಪ, ಶುಭ್ಮನ್ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ ಭಾರತ ತಂಡಕ್ಕೆ ಭವಿಷ್ಯದ ಸಚಿನ್ ತೆಂಡೂಲ್ಕರ್ ಮತ್ತು ಸೌರವ್ ಗಂಗೂಲಿ ಆಗುವ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದು ಭವಿಷ್ಯ ನುಡಿದರು.

ಸೌರವ್ ಗಂಗೂಲಿ ಮತ್ತು ಸಚಿನ್ ತೆಂಡೂಲ್ಕರ್ ಅವರು 176 ಇನ್ನಿಂಗ್ಸ್‌ಗಳಿಂದ 8227 ರನ್‌ಗಳೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ ಜೊತೆಯಾಟದ ದಾಖಲೆಯನ್ನು ಹೊಂದಿದ್ದಾರೆ. ಅದರಲ್ಲಿ ಹೆಚ್ಚಿನ 6609 ರನ್‌ಗಳು ಆರಂಭಿಕ ಜೊತೆಯಾಟದಲ್ಲಿ ಬಂದಿವೆ.
ಇನ್ನು ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಮಹೇಲಾ ಜಯವರ್ಧನೆ ಮತ್ತು ಕುಮಾರ ಸಂಗಕ್ಕಾರ ನಡುವೆ 5992 ರನ್‌ಗಳನ್ನು ಗಳಿಸಿದ್ದಾರೆ.
"ಭಾರತಕ್ಕಾಗಿ ಆಡುವ ಪ್ರತಿಯೊಬ್ಬರೂ ಸಮಾನ ಸಾಮರ್ಥ್ಯವನ್ನು ಹೊಂದಿದ್ದಾರೆ. ಆದರೆ ಯಶಸ್ವಿ ಜೈಸ್ವಾಲ್ ಮತ್ತು ಶುಭ್ಮನ್ ಗಿಲ್ ಜೊತೆಯಾಗಿ ಬ್ಯಾಟ್ ಮಾಡುವ ವಿಧಾನದಿಂದ ಮತ್ತು ಅವರು ಲೆಜೆಂಡ್ ಆಟಗಾರರ ಜಾಗವನ್ನು ಕಂಡುಕೊಳ್ಳಬೇಕು," ಎಂದು ರಾಬಿನ್ ಉತ್ತಪ್ಪ ಹೇಳಿದರು.
"ಈ ಜೋಡಿ ಮುಂದಿನ ವರ್ಷಗಳಲ್ಲಿ ಭಾರತಕ್ಕೆ ಅತ್ಯಂತ ಅಪಾಯಕಾರಿ ಜೋಡಿಯಾಗಲಿದ್ದಾರೆ. ಇದು ಹಾಟ್ ಪೇರ್ ಆಗಿರುತ್ತದೆ ಮತ್ತು ಸಚಿನ್ ತೆಂಡೂಲ್ಕರ್ ಮತ್ತು ಸೌರವ್ ಗಂಗೂಲಿ ಅವರಂತೆ ಅದ್ಭುತವಾಗಬಹುದು," ಎಂದು ರಾಬಿನ್ ಉತ್ತಪ್ಪ 4ನೇ ಟಿ20 ಪಂದ್ಯದ ನಂತರ ಜಿಯೋ ಸಿನಿಮಾದಲ್ಲಿ ಮಾತನಾಡಿದರು.
4ನೇ ಟಿ20 ಪಂದ್ಯದ ಗೆಲುವಿನೊಂದಿಗೆ, ಆಗಸ್ಟ್ 13ರಂದು ಫ್ಲೋರಿಡಾದಲ್ಲಿ ನಡೆಯಲಿರುವ ಅಂತಿಮ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯನ್ನು ಗೆಲ್ಲಲು ಭಾರತಕ್ಕೆ ನಿರ್ಣಾಯಕವಾಗಿದೆ. ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಸೋತಿರುವ ಭಾರತ ತಂಡ, ನಂತರದ ಎರಡು ಪಂದ್ಯಗಳಲ್ಲಿ ಅದ್ಭುತವಾಗಿ ಪುನರಾಗಮನ ಮಾಡಿ ಸರಣಿ ಗೆಲ್ಲುವ ಭರವಸೆ ಹೆಚ್ಚಿಸಿದ್ದಾರೆ.