Ind vs WI: 2ನೇ ಟಿ20 ಪಂದ್ಯದಲ್ಲಿ ಈ ಮೂವರ ಪ್ರದರ್ಶನದ ಮೇಲೆ ನೆಟ್ಟಿದೆ ಅಭಿಮಾನಿಗಳ ಚಿತ್ತ
ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯ ಇಂದು ಗಯಾನದಲ್ಲಿ ನಡೆಯಲಿದೆ. ಮೊದಲ ಪಂದ್ಯದಲ್ಲಿ ಸಾಕಷ್ಟು ಪೈಪೋಟಿ ನೀಡಿದ್ದರೂ ಟೀಮ್ ಇಂಡಿಯಾ ಗೆಲುವಿನ ನಗೆ ಬೀರಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಮೊದಲ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಳ್ಳುವ ಲೆಕ್ಕಾಚಾರದಲ್ಲಿದೆ.
ಇನ್ನು ಟೀಮ್ ಇಂಡಿಯಾ ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಯುವ ಪಡೆಯೊಂದಿಗೆ ಕಣಕ್ಕಿಳಿಯುತ್ತಿದೆ. ಆದರೆ ಕೆಲ ಅನುಭವಿ ಆಟಗಾರರು ಕೂಡ ತಂಡದಲ್ಲಿದ್ದು ಸಾಕಷ್ಟು ಸಮತೊಲಿತವ ಆಗಿಯೇ ಕಾಣಿಸುತ್ತಿದೆ. ಇನ್ನು ಈ ಎರಡನೇ ಪಂದ್ಯದಲ್ಲಿ ಟೀನ್ ಇಂಡಿಯಾದ ಕೆಲ ಆಟಗಾರರ ಮೇಲೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆಯಿಟ್ಟುಕೊಂಡಿದ್ದಾರೆ. ಅಂತಾ ಮೂವರು ಆಟಗಾರರ ಬಗ್ಗೆ ಮಾಹಿತಿ ಇಲ್ಲಿದೆ. ಮುಂದೆ ಓದಿ..

ಆರಂಭಿಕ ಆಟಗಾರ ಇಶಾನ್ ಕಿಶನ್
ಟೀಮ್ ಇಂಡಿಯಾದ ಆರಂಭಿಕ ಆಟಗಾರ ಇಶಾನ್ ಕಿಶನ್ ಏಕದಿನ ಮಾದರಿಯಲ್ಲಿ ಎಷ್ಟು ಅದ್ಭುತ ಫಾರ್ಮ್‌ನಲ್ಲಿದ್ದರು ಎಂಬುದು ತಿಳಿದೇ ಇದೆ. ಆಡಿದ ಮೂರು ಪಂದ್ಯದಲ್ಲಿಯೂ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ ಮೂರು ಅರ್ಧ ಶತಕ ಸಿಡಿಸಿ ಅಬ್ಬರಿಸಿದ್ದರು. ಆದರೆ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಇಶಾನ್ ನಿರಾಸೆ ಮೂಡಿಸಿದ್ದರು. ಹೀಗಾಗಿ ಎರಡನೇ ಪಂದ್ಯದಲ್ಲಿ ಇಶಾನ್ ಕಿಶನ್ ಮೇಲೆ ಸಾಕಷ್ಟು ನಿರೀಕ್ಷೆಯಿದ್ದು ಗಯಾನದಲ್ಲಿ ಅಬ್ಬರಿಸುವ ನಿರೀಕ್ಷೆಯಿದೆ.
ಯುವ ಆಟಗಾರ ತಿಲಕ್ ವರ್ಮಾ
ವೆಸ್ಟ್ ಇಂಡಿಸ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಇದೇ ಮೊದಲ ಬಾರಿಗೆ ಭಾರತ ತಂಡದ ಜರ್ಸಿಯನ್ನು ತೊಟ್ಟು ಆಡಿದ ತಿಲಕ್ ವರ್ಮಾ ಮೊದಲ ಪಂದ್ಯದಲ್ಲಿಯೇ ಗಮನಸೆಳೆಯುವ ಪ್ರದರ್ಶನ ನೀಡಿದರು. ಉಳಿದೆಲ್ಲಾ ಆಟಗಾರರು ತಿಣುಕಾಡುತ್ತಿದ್ದರೆ ತಿಲಕ್ ವರ್ಮಾ ಚೊಚ್ಚಲ ಪಂದ್ಯವನ್ನಾಡುತ್ತಿದ್ದರೂ ತೋರಿದ ಕೆಚ್ಚೆದೆಯ ಪ್ರದರ್ಶನ ಎಲ್ಲರ ಗಮನಸೆಳೆದಿದೆ. ಹೀಗಾಗಿ ಎರಡನೇ ಪಂದ್ಯದಲ್ಲಿ ತಿಲಕ್ ವರತ್ಮಾ ಮೇಲೆ ಸಾಕಷ್ಟು ನಿರೀಕ್ಷೆಗಳು ಮೂಡಿಸಿದೆ.
ಅನುಭವಿ ಸ್ಪಿನ್ನರ್ ಯುಜುವೇಂದ್ರ ಚಾಹಲ್
ಟೀಮ್ ಇಂಡಿಯಾದ ಅನುಭವಿ ಸ್ಪಿನ್ನರ್ ಯುಜುವೇಂದ್ರ ಚಾಹಲ್ ಏಕದಿನ ಸರಣಿಯಲ್ಲಿ ಆಡುವ ಅವಕಾಶವನ್ನೇ ಗಿಟ್ಟಿಸಿಕೊಂಡಿರಲಿಲ್ಲ. ಆದರೆ ಚುಟುಕು ಮಾದರಿಯಲ್ಲಿ ಮೊದಲ ಪಂದ್ಯದಲ್ಲಿ ಅವಕಾಶ ಗಿಟ್ಟಿಸಿಕೊಂಡ ಚಾಹಲ್ ಎರಡು ವಿಕೆಟ್ ಕಿತ್ತು ಮಿಂಚಿದ್ದರು. ಇದೀಗ ಎರಡನೇ ಪಂದ್ಯದಲ್ಲಿಯೂ ಅವರು ಅವಕಾಶ ಪಡೆಯುವುದು ಬಹುತೇಕ ನಿಶ್ಚಿತ. ಈ ಎರಡನೇ ಪಂದ್ಯ ಗಯಾನದಲ್ಲಿ ನಡೆಯುತ್ತಿದ್ದು ಇದು ಕೂಡ ಸ್ಪಿನ್ನರ್‌ಗಳಿಗೆ ಅದ್ಭುತವಾಗಿ ನೆರವು ನೀಡುವಂತಾ ಲಕ್ಷಣ ಹೊಂದಿದೆ. ಹಾಗಾಗಿ ಈ ಪಿಚ್‌ನಲ್ಲಿ ಎದುರಾಳಿ ವಿಂಡೀಸ್ ದಾಂಡಿಗರಿಗೆ ಆಘಾತ ನೀಡಲು ಚಾಹಲ್ ಸಜ್ಜಾಗಿದ್ದಾರೆ.
ಇತ್ತಂಡಗಳ ಸಂಭಾವ್ಯ ಆಡುವ ಬಳಗ
ವೆಸ್ಟ್ ಇಂಡೀಸ್ ಸಂಭಾವ್ಯ ಆಡುವ ಬಳಗ: ಬ್ರಾಂಡನ್ ಕಿಂಗ್, ಜಾನ್ಸನ್ ಚಾರ್ಲ್ಸ್, ಕೈಲ್ ಮೇಯರ್ಸ್, ಶಿಮ್ರಾನ್ ಹೆಟ್ಮೆಯರ್, ನಿಕೋಲಸ್ ಪೂರನ್ (ವಿಕೆಟ್), ರೋವ್ಮನ್ ಪೊವೆಲ್ (ನಾಯಕ), ಓಡಿಯನ್ ಸ್ಮಿತ್, ರೊಮಾರಿಯೋ ಶೆಫರ್ಡ್, ಅಕೇಲ್ ಹೋಸೇನ್, ಅಲ್ಜಾರಿ ಜೋಸೆಫ್, ಓಬೆಡ್ ಮೆಕಾಯ್
ಟೀಮ್ ಇಂಡಿಯಾ: ಶುಬ್ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್, ತಿಲಕ್ ವರ್ಮಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications